News Kannada
Friday, September 30 2022

ಕರಾವಳಿ

ವಿಧಾನಸಭಾ ಚುನಾವಣೆಗಾಗಿ ವಿಕಲಚೇತನರ ಸರ್ವೇ - 1 min read

Photo Credit :

ವಿಧಾನಸಭಾ ಚುನಾವಣೆಗಾಗಿ ವಿಕಲಚೇತನರ ಸರ್ವೇ

ಕಾರವಾರ: ಮುಂಬರುವ ವಿಧಾನಸಭೆ ಚುನಾವಣೆಯ ಅಂಗವಾಗಿ ಮತದಾನದ ಮಹತ್ವವನ್ನು ಜಿಲ್ಲೆಯ ವಿಕಲಚೇತನರಿಗೆ ಸಾರುವ ನಿಟ್ಟಿನಲ್ಲಿ ಇದೇ ಮಾ.7 ರಿಂದ 12 ರವರೆಗೆ ವಿಕಲಚೇತನರ ಸರ್ವೇ ಹಮ್ಮಿಕೊಳ್ಳಲಾಗಿದೆ.

ಜಿಲ್ಲೆಯ ಎಲ್ಲಾ ತಾಲೂಕುಗಳಲ್ಲಿನ ಮತದಾನಕ್ಕೆ ಅರ್ಹರಿರುವ ವಿಕಲಚೇತನರನ್ನು ಗುರುತಿಸಿ ಅವರಿಗೆ ಮತದಾನದ ಅರಿವು ಮೂಡಿಸಲು ಸರ್ವೇ ಕಾರ್ಯವನ್ನು ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯ ಸಹಯೋಗದಲ್ಲಿ ಮಾಡಲಾಗುತ್ತಿದೆ.

ಸರ್ವೇ ಕಾರ್ಯ ಮುಕ್ತಾಯದ ನಂತರ ಮಾ.13 ರಿಂದ 15ರವರೆಗೆ ಸಂಗ್ರಹಿಸಿದ ಮಾಹಿತಿಯನ್ನು ಜಿಲ್ಲಾ ಚುನಾವಣಾ ಅಧಿಕಾರಿಗಳಿಗೆ ಸಲ್ಲಿಸಲಾಗುತ್ತದೆ. ತದನಂತರ ಮಾ.20ರಂದು ಆಯಾ ತಾಲೂಕಿನ ತಹಶೀಲ್ದಾರ ನೇತೃತ್ವದಲ್ಲಿ ವಿವಿಧ ಕಾರ್ಯಕ್ರಮಗಳ ಮೂಲಕ ವಿಕಲಚೇತನರಿಗೆ ಮತದಾನದ ಜಾಗೃತಿ ಮೂಡಿಸಲಾಗುವುದು ಎಂದು ಜಿಲ್ಲಾ ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ಅಧಿಕಾರಿ ಮಾಹಿತಿ ನೀಡಿದ್ದಾರೆ.

See also  ಉಡುಪಿ ನೂತನ ಜಿಲ್ಲಾಧಿಕಾರಿಯಾಗಿ ಸಿಇಓ ಜಿ.ಜಗದೀಶ್
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published.

178
Srinivas Badkar

Read More Articles
Subscribe to our Brand New YouTube Channel

Subscribe Newsletter

Get latest news karnataka updates on your email.

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು