ಸುಳ್ಯ: ಎ.ಐ.ಸಿ.ಸಿ ಅಧ್ಯಕ್ಷರಾಗಿ ಆಯ್ಕೆಯಾದ ಬಳಿಕ ರಾಹುಲ್ ಗಾಂಧಿಯವರು ಪ್ರಥಮ ಬಾರಿಗೆ ದ.ಕ.ಜಿಲ್ಲೆಗೆ ಮಾ. 20ರಂದು ಆಗಮಿಸಲಿದ್ದಾರೆ.
ಮಂಗಳೂರಿನಲ್ಲಿ ನಡೆಯುವ ರಾಹುಲ್ ಗಾಂಧೀ ಭಾಗವಹಿಸುವ ರಾಜ್ಯ ಸರ್ಕಾರದ ಜನಾಶೀರ್ವಾದ ಯಾತ್ರೆಯಲ್ಲಿ ಸುಳ್ಯ ಬ್ಲಾಕ್ ನಿಂದ 15 ಸಾವಿರ ಮಂದಿ ಕಾರ್ಯಕರ್ತರು ಭಾಗವಹಿಸಲು ನಿರ್ಧರಿಸಲಾಯಿತು.
ರಾಹುಲ್ ಗಾಂಧಿ ಭೇಟಿ ಹಿನ್ನೆಲೆಯಲ್ಲಿ ಜಿಲ್ಲಾ ಉಸ್ತುವಾರಿ ಸಚಿವರ ನೇತೃತ್ವದಲ್ಲಿ ಪಕ್ಷದ ಚುನಾವಣಾ ಕಚೇರಿಯಲ್ಲಿ ನಡೆದ ಸುಳ್ಯ ಬ್ಲಾಕ್ ಕಾಂಗ್ರೆಸ್ ಕಾರ್ಯಕರ್ತರ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಯಿತು.
ಸಭೆಯನ್ನು ಉದ್ದೇಶಿಸಿ ಮಾತನಾಡಿದ ಸಚಿವ ಬಿ. ರಮಾನಾಥ ರೈ ರಾಹುಲ್ ಗಾಂಧಿಯವರು ಎ.ಐ.ಸಿ.ಸಿ ಅಧ್ಯಕ್ಷರಾದ ಬಳಿಕ ಜಿಲ್ಲೆಗೆ ಪ್ರಥಮವಾಗಿ ಆಗಮಿಸುತ್ತಿದ್ದಾರೆ. ರಾಹುಲ್ ಕಾರ್ಯಕ್ರಮಕ್ಕೆ ಸುಳ್ಯದಿಂದ ಅತೀ ಹೆಚ್ಚು ಸಂಖ್ಯೆಯಲ್ಲಿ ಕಾರ್ಯಕರ್ತರು ಭಾಗವಹಿಸಬೇಕು. ಮಂಗಳೂರಿನ ಮುಖ್ಯ ರಸ್ತೆಗಳಲ್ಲಿ ರಾಹುಲ್ ಗಾಂಧಿಯವರ ರೋಡ್ ಶೋ ನಡೆಯಲಿದ್ದು ಜಿಲ್ಲೆಯ ಮೂಲೆ ಮೂಲೆಗಳಿಂದ ಕಾರ್ಯಕರ್ತರು, ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಲಿದ್ದಾರೆ ಎಂದು ಹೇಳಿದರು. ರಾಜ್ಯದಲ್ಲಿ ಮತ್ತು ಜಿಲ್ಲೆಯಲ್ಲಿ ಮೋದಿ ಅಲೆ ಕಡಿಮೆ ಆಗಿದೆ. ದೇಶದಲ್ಲಿ ನಡೆದ 13 ಉಪ ಚುನಾವಣೆಗಳಲ್ಲಿ ಬಿಜೆಪಿ ಸೋತು ಹೋಗಿದೆ. ಇದರಿಂದ ಮೋದಿಯ ಅಲೆ ಕುಗ್ಗಿದೆ ಎಂದು ಹೇಳಿದರು
ವೇದಿಕೆಯಲ್ಲಿ ವಿಧಾನ ಪರಿಷತ್ ಮುಖ್ಯ ಸಚೇತಕ ಐವನ್ ಡಿಸೋಜಾ, ಜಿಲ್ಲಾ ಕಾಂಗ್ರೆಸ್ ಉಸ್ತುವಾರಿಯಿರುವ ಕೆ.ಪಿ.ಸಿ.ಸಿ ಪ್ರಧಾನ ಕಾರ್ಯದರ್ಶಿ ಯು.ಬಿ. ವೆಂಕಟೇಶ್, ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹರೀಶ್ ಕುಮಾರ್, ಜಿಲ್ಲಾ ಕಾಂಗ್ರೆಸ್ ಪ್ರಚಾರ ಸಮಿತಿ ಅಧ್ಯಕ್ಷ ಧನಂಜಯ ಅಡ್ಪಂಗಾಯ, ಸುಳ್ಯ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಉಸ್ತುವಾರಿ ಸವಿತಾ ರಮೇಶ್, ಕೆಪಿಸಿಸಿ ಕಾರ್ಯದರ್ಶಿ ಅಪ್ಪಿ, ಜಿಲ್ಲಾ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಶಾಲೆಟ್ ಪಿಂಟೋ, ಮಾಜಿ ಮೇಯರ್ ಜೆಸಿಂತಾ ಆಲ್ಫ್ರೆಡ್, ಗೀತಾ ಸುವರ್ಣ, ಕವಿತಾ, ಜಿಲ್ಲಾ ಉಸ್ತುವಾರಿ ವೇದನಾಥ ಸುವರ್ಣ, ಮಹೇಶ್ ರೈ, ಕೆಪಿಸಿಸಿ ಸದಸ್ಯ ಡಾ. ರಘು, ಜಿ.ಪಂ ಸದಸ್ಯ ಎಂ.ಎಸ್. ಮಹಮ್ಮದ್, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಎನ್.ಜಯಪ್ರಕಾಶ್ ರೈ, ಮಹಿಳಾ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷೆ ಗೀತಾ ಕೋಲ್ಚಾರ್, ಪ್ರಚಾರ ಸಮಿತಿ ಅಧ್ಯಕ್ಷ ರಾಜಾರಾಮ್ ಭಟ್ ಬೆಟ್ಟ, ಮಹಮ್ಮದ್ ಕುಂಞಿ ಗೂನಡ್ಕ, ಎಸ್.ಸಂಶುದ್ದೀನ್, ಜಿ.ಕೆ.ಹಮೀದ್, ಕೆ.ಗೋಕುಲ್ದಾಸ್, ಸುಳ್ಯ ಬ್ಲಾಕ್ ಕಾಂಗ್ರೆಸ್ ಪಧಾಧಿಕಾರಿಗಳು, ವಿವಿಧ ಘಟಕಗಳ ಪದಾಧಿಕಾರಿಗಳು ಉಪಸ್ಥಿತರಿದ್ದರು.