News Kannada
Friday, December 02 2022

ಕರಾವಳಿ

ಮತದಾರರ ಪಟ್ಟಿಗೆ ಹೆಸರು ಸೇರ್ಪಡೆ: ಎ.8(ನಾಳೆ)ರಂದು ಮಿಂಚಿನ ನೋಂದಣಿ ಆಂದೋಲನ

Photo Credit :

ಮತದಾರರ ಪಟ್ಟಿಗೆ ಹೆಸರು ಸೇರ್ಪಡೆ: ಎ.8(ನಾಳೆ)ರಂದು ಮಿಂಚಿನ ನೋಂದಣಿ ಆಂದೋಲನ

ಮಂಗಳೂರು: ರಾಜ್ಯ ವಿಧಾನಸಭೆ ಚುನಾವಣೆಯ ಹಿನ್ನೆಲೆಯಲ್ಲಿ ಅಂತಿಮ ಮತದಾರರ ಪಟ್ಟಿಯಲ್ಲಿ ಹೆಸರು ನೋಂದಾಯಿಸದೇ ಇರುವ ಅರ್ಹ ಸಾರ್ವಜನಿಕರ ಹೆಸರನ್ನು ಮತದಾರರ ಪಟ್ಟಿಯಲ್ಲಿ ಸೇರಿಸುವ ಬಗ್ಗೆ ಎಪ್ರಿಲ್ 8ರಂದು ಒಂದು ದಿನದ ಮಿಂಚಿನ ನೋಂದಣಿ ಕಾರ್ಯಕ್ರಮವನ್ನು ಜಿಲ್ಲೆಯ ಎಲ್ಲಾ ಮತಗಟ್ಟೆ ವ್ಯಾಪ್ತಿಯಲ್ಲಿ ಹಮ್ಮಿಕೊಳ್ಳಲಾಗಿದೆ.

ಭಾನುವಾರ ಜಿಲ್ಲೆಯ ಎಲ್ಲಾ ಮತಗಟ್ಟೆಗಳಲ್ಲಿ ಬೂತ್ ಮಟ್ಟದ ಅಧಿಕಾರಿ ಉಪಸ್ಥಿತರಿರಲಿದ್ದು, ಅಂತಿಮ ಮತದಾರರ ಪಟ್ಟಿಯ ಪ್ರತಿಯನ್ನು ಸಾರ್ವಜನಿಕರ ಮಾಹಿತಿಗೆ ನೀಡಲಿದ್ದಾರೆ. ಎಲ್ಲಾ ಬೂತ್ ಮಟ್ಟದ ಅಧಿಕಾರಿಯವರು ಎಪ್ರಿಲ್ 8ರಂದು ಪೂರ್ವಾಹ್ನ 10 ಗಂಟೆಯಿಂದ ಸಾಯಂಕಾಲ 5.30 ಗಂಟೆವರೆಗೆ ಮತಗಟ್ಟೆಯಲ್ಲಿ ಹಾಜರಿದ್ದು, ಅಲ್ಲಿಗೆ ಬರುವ ಸಾರ್ವಜನಿಕರು ತಮ್ಮ ಹೆಸರು, ದಿನಾಂಕ: 28-2-2018 ರಂದು ಪ್ರಕಟಿಸಲಾದ ಅಂತಿಮ ಮತದಾರರ ಪಟ್ಟಿಯಲ್ಲಿ ನೊಂದಾಯಿಸಲ್ಪಟ್ಟಿದೆಯೇ ಎಂಬುದನ್ನು ಪರಿಶೀಲನೆಯಿಂದ ದೃಢಪಡಿಸಿಕೊಳ್ಳಬೇಕು. ತಮ್ಮ ಹೆಸರು ಮತದಾರರ ಪಟ್ಟಿಯಲ್ಲಿ ಇಲ್ಲದಿದ್ದರೆ, ಅವರಿಗೆ ಸ್ಥಳದಲ್ಲಿಯೇ ಫಾರಂ 6ನ್ನು ನೀಡಿ ಅದನ್ನು ಭರ್ತಿ ಮಾಡಿ ಅವಶ್ಯವುಳ್ಳ ದಾಖಲೆಗಳೊಂದಿಗೆ ಪಡೆಯಲಾಗುವುದು.

ಎಪ್ರಿಲ್ 8ರಂದು ಎಲ್ಲಾ ಮತಗಟ್ಟೆಗಳಲ್ಲಿ ಮತದಾರರ ವಿಶೇಷ ನೊಂದಣಿ ಆಂದೋಲನ ನಡೆಯುತ್ತಿದೆ ಎಂಬುದನ್ನು ದೃಢಪಡಿಸಿಕೊಳ್ಳಲು, ಕಂದಾಯ ಇಲಾಖೆಯ ವಿವಿಧ ಅಧಿಕಾರಿಗಳು ಮತಗಟ್ಟೆಗಳಿಗೆ ಅನಿರೀಕ್ಷಿತ ಭೇಟಿ ನೀಡಲಿದ್ದಾರೆ.

ಸಾರ್ವಜನಿಕರು ಈ ಅಪೂರ್ವ ಅವಕಾಶವನ್ನು ಬಳಸಿಕೊಳ್ಳಬೇಕು ಎಂದು ದಕ್ಷಿಣ ಕನ್ನಡ ಜಿಲ್ಲಾಧಿಕಾರಿಗಳ ಪ್ರಕಟಣೆ ತಿಳಿಸಿದೆ.

See also  ಮತದಾನ ಮಾಡಲು ದಾಖಲೆ ಕಡ್ಡಾಯ: ಚುನಾವಣಾಧಿಕಾರಿ
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published.

187

Subscribe Newsletter

Get latest news karnataka updates on your email.

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು