News Kannada
Tuesday, September 27 2022

ಕರಾವಳಿ

ಶರತ್ ಮಡಿವಾಳ ಹತ್ಯೆ ಪ್ರಕರಣದ ಆರೋಪ: ದೇವರ ಮೊರೆ ಹೋದ ರಮಾನಾಥ ರೈ - 1 min read

Photo Credit :

ಶರತ್ ಮಡಿವಾಳ ಹತ್ಯೆ ಪ್ರಕರಣದ ಆರೋಪ: ದೇವರ ಮೊರೆ ಹೋದ ರಮಾನಾಥ ರೈ

ಬಂಟ್ವಾಳ : ಆರೆಸ್ಸೆಸ್ ಕಾರ್ಯಕರ್ತ ಶರತ್ ಮಡಿವಾಳ ಹತ್ಯೆ ಸಂಬಂಧಿಸಿ ಅವರ ತಂದೆ ತನಿಯಪ್ಪ ಮಡಿವಾಳ ಅವರು ಈ ಕೊಲೆಯನ್ನು ಸಚಿವ ಬಿ.ರಮಾನಾಥ ರೈ ಮತ್ತು ಅವರ ಬೆಂಬಲಿಗರ ತಂಡ ನಡೆಸಿದೆ ಎಂದು ಕೆಲ ಸಮಯದ ಹಿಂದೆ ಆರೋಪಿಸಿದ್ದರು. ಇದರಿಂದ ಮನನೊಂದಿರುವ ಮಾಜಿ ಸಚಿವ ಬಿ.ರಮಾನಾಥ ರೈ ಅವರು ಶನಿವಾರ ಕಾರಣಿಕದ ಕ್ಷೇತ್ರ ಶ್ರೀ ನಾಲ್ಕರ್ ದೈವಸ್ಥಾನ ಕಾಣತ್ತೂರಿಗೆ ಭೇಟಿ ನೀಡಿ ದೂರು ನೀಡಿದ್ದಾರೆ. ಈ ಪ್ರಕರಣದಲ್ಲಿ ವಿನಾಕಾರಣ ನನ್ನ ಹೆಸರನ್ನು ಬಳಸಿ ಅಪಪ್ರಚಾರ ನಡೆಸಲಾಗಿದೆ.

ಇದರಿಂದ ಮಾನಸಿಕವಾಗಿ ನನಗೆ ತೀವ್ರ ನೋವಾಗಿದೆ. ನಾನು ತಪ್ಪು ಮಾಡಿದ್ದರೆ ನನಗೆ ಶಿಕ್ಷೆಯಾಗಬೇಕು.

ನನ್ನ ಮೇಲೆ ಇಲ್ಲಸಲ್ಲದ ಆರೋಪ ಮಾಡಿರುವವರನ್ನು ಕರೆದು ವಿಚಾರಣೆ ನಡೆಸಬೇಕು ಎಂದು ಬಿ.ರಮಾನಾಥ ರೈಯವರು ದೈವಸ್ಥಾನದ ಪ್ರಮುಖರಲ್ಲಿ ವಿನಂತಿ ಮಾಡಿದ್ದಾರೆ. ಈ ಸಂದರ್ಭದಲ್ಲಿ ಜಿಲ್ಲಾ ಪಂಚಾಯತು ಸದಸ್ಯರಾದ ಚಂದ್ರಪ್ರಕಾಶ್ ಶೆಟ್ಟಿ, ಬಿ.ಪದ್ಮಶೇಖರ್ ಜೈನ್, ಡಿಸಿಸಿ ಉಪಾಧ್ಯಕ್ಷ ಬೇಬಿ ಕುಂದರ್,ಕೆ.ಮಾಯಿಲಪ್ಪ ಸಾಲ್ಯಾನ್   ಮೊದಲಾದವರಿದ್ದರು.

See also  ಮಾನಸಿಕ ಅಸ್ವಸ್ಥನಿಗೆ ಹೊಸ ಬದುಕು ನೀಡಿದ ಬಂಟ್ವಾಳ ಯುವಕರು!
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published.

153
Mounesh V

Read More Articles
Subscribe to our Brand New YouTube Channel

Subscribe Newsletter

Get latest news karnataka updates on your email.

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು