ಮಂಗಳೂರು: ಶುಕ್ರವಾರ ರಾತ್ರಿಯಿಂದ ಸುರಿಯುತ್ತಿರುವ ಧಾರಾಕಾರ ಮಳೆಯಿಂದ ಕೊಡಗು ಮತ್ತು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಶಾಲಾಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ.
ದಕ್ಷಿಣ ಕನ್ನಡದ ಸುಳ್ಯ, ಪುತ್ತೂರು, ಬೆಳ್ತಂಗಡಿ, ಮೂಡುಬಿದಿರೆ ತಾಲೂಕುಗಳಲ್ಲಿ ಶಾಲೆಗಳಿಗೆ ಶನಿವಾರ ರಜೆ ಘೋಷಿಸಲಾಗಿದೆ.
ಮಂಗಳೂರಿನಲ್ಲೂ ಮಳೆಯಿಂದಾಗಿ ಕೆಲವೊಂದು ಕಡೆಗಳಲ್ಲಿ ಕೃತಕ ನೆರೆ ಪರಿಸ್ಥಿತಿ ನಿರ್ಮಾಣವಾಗಿದೆ. ಮಂಗಳೂರಿನಿಂದ ವಿಮಾನ ನಿಲ್ದಾಣಕ್ಕೆ ಹೋಗುವ ರಾಜ್ಯ ಹೆದ್ದಾರಿಯಲ್ಲಿ ಮರವೂರು ಸೇತುವೆ ಸಮೀಪ ಮರಬಿದ್ದು, ರಸ್ತೆ ಕುಸಿದು ಸಂಚಾರಕ್ಕೆ ಅಡ್ಡಿಯಾಗಿದೆ.