ಉಡುಪಿ: ಶಿರೂರು ಮಠಾಧೀಶರಾಗಿದ್ದ ಲಕ್ಷ್ಮೀವರ ತೀರ್ಥ ಸ್ವಾಮೀಜಿ ಅವರ ಅಸಹಜ ಸಾವಿನ ಪ್ರಕರಣಕ್ಕೆ ಸಂಬಂಧಿಸಿ ತನಿಖೆ ಪ್ರಗತಿಯಲ್ಲಿದ್ದು, ಯಾರನ್ನೂ ಇದುವರೆಗೆ ಬಂಧಿಸಿಲ್ಲವೆಂದು ಪಶ್ಚಿಮ ವಲಯ ಐಜಿಪಿ ಅರುಣ್ ಚಕ್ರವರ್ತಿ ತಿಳಿಸಿದ್ದಾರೆ.
ಮಂಗಳವಾರ ಎಸ್ ಪಿ ಕಚೇರಿಯಲ್ಲಿ ಪ್ರಕರಣದ ತನಿಖೆಯ ಪ್ರಗತಿ ಕುರಿತು ಅಧಿಕಾರಿಗಳೊಂದಿಗೆ ಸಭೆ ನಡೆಸಿದ ಬಳಿಕ ಸುದ್ದಿಗಾರರ ಜತೆಗೆ ಮಾತನಾಡಿದರು.
ಶಿರೂರು ನಿಧನದ ಬಳಿಕ ಅಂತಿಮ ವಿಧಿವಿಧಾನ ವೇಳೆ ಉಪಸ್ಥಿತರಿದ್ದ ಐಜಿಪಿ ಅವರು ಇಂದು ಶಿರೂರು ಮೂಲ ಮಠಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.