ಮಣಿಪಾಲ: ಗ್ರಾಮ ಲೆಕ್ಕಿಗರೊಬ್ಬರು ತಾನು ವಾಸವಿದ್ದ ಮನೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆಯು ಅತ್ರಾಡಿಯಲ್ಲಿ ನಡೆದಿದೆ.
34ರ ಹರೆಯದ ವನಿತಾ ಎಂಬವರು ಆತ್ಮಹತ್ಯೆ ಮಾಡಿಕೊಂಡವರು. ಅತ್ರಾಡಿ ಗ್ರಾಮ ಪಂಚಾಯತ್ ನಲ್ಲಿ ಗ್ರಾಮ ಲೆಕ್ಕಿಗರಾಗಿದ್ದ ವನಿತಾ ಅವರು ಪರ್ಕಳ ಹೆರ್ಗ ದೇವಸ್ಥಾನಕ್ಕೆ ಹೋಗುವ ರಸ್ತೆಯಲ್ಲಿರುವ ವಸತಿ ಗೃಹದಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆಗೈದಿದ್ದಾರೆ.
ಎರಡು ವರ್ಷದ ಹಿಂದೆ ಕಾರ್ಕಳದಿಂದ ಅತ್ರಾಡಿಗೆ ವರ್ಗವಾಗಿದ್ದ ವನಿತಾ ಅವರಿಗೆ ಇಬ್ಬರು ಮಕ್ಕಳಿದ್ದಾರೆ. ಮಣಿಪಾಲ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.