ಮಂಗಳೂರು: ಬಸ್ ವೊಂದು ಸ್ಕೂಟರ್ ನ್ನು ಓವರ್ ಟೇಕ್ ಮಾಡುವ ಭರದಲ್ಲಿ ಡಿಕ್ಕಿ ಹೊಡೆದ ಪರಿಣಾಮ ಸ್ಕೂಟರ್ ನಲ್ಲಿದ್ದ ೧೧ ವರ್ಷದ ಬಾಲಕಿ ಮೃತಪಟ್ಟ ಘಟನೆ ಮಂಗಳೂರಿನ ನಂತೂರಿನಲ್ಲಿ ನಡೆದಿದೆ.
ಮೃತಳನ್ನು ಕಾಟಿಪಳ್ಳ ನಿವಾಸಿ ರೋಶನ್ ಮತ್ತು ನೂರು ಜಹಾನ್ ದಂಪತಿ ಪುತ್ರಿ ಮದೀಹ(೧೧) ಎಂದು ಗುರುತಿಸಲಾಗಿದೆ. ಮೂಲತಃ ಇವರು ಶಿವಮೊಗ್ಗ ನಿವಾಸಿಗಳು. ನೂರು ಜಹಾನ್ ತನ್ನ ಮಗಳು ಮದೀಹ ಹಾಗೂ ನಾಲ್ಕು ವರ್ಷದ ಪುತ್ರ ತೈಯಬ್ ಅನ್ಸರ್ ಜತೆ ಸ್ಕೂಟರ್ ನಲ್ಲಿ ಸಾಗುತ್ತಿದ್ದಾಗ ಖಾಸಗಿ ಬಸ್ ವೊಂದು ಓವರ್ ಟೇಕ್ ಮಾಡುವ ಭರದಲ್ಲಿ ಸ್ಕೂಟರ್ ಗೆ ಡಿಕ್ಕಿ ಹೊಡೆದಿದೆ.
ಘಟನೆಯಲ್ಲಿ ಗಂಭೀರವಾಗಿ ಗಾಯಗೊಂಡ ಮೂವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ತಲೆಗೆ ಗಂಭೀರವಾಗಿ ಗಾಯಗೊಂಡಿದ್ದ ಮದೀಹ ಚಿಕಿತ್ಸೆಗೆ ಸ್ಪಂದಿಸದೆ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಾಳೆ.