ಮಂಗಳೂರು: ಪ್ರವಾಹಕ್ಕೆ ತತ್ತರಿಸಿ ಹೋದ ಜನರಿಗೆ ನೆರವಾಗಲೆಂದು ಎಂ. ಆರ್.ಪಿ.ಎಲ್ ಸಂಸ್ಥೆಯು 1 ಕೋಟಿ ರೂಪಾಯಿಯನ್ನು ಮುಖ್ಯಮಂತ್ರಿ ವಿಪತ್ತು ಪರಿಹಾರ ನಿಧಿಗೆ ನೀಡಿದೆ. ಶುಕ್ರವಾರ
ಶುಕ್ರವಾರ ದ.ಕ. ಜಿಲ್ಲಾಧಿಕಾರಿ ಸಸಿಕಾಂತ್ ಸೆಂಥಿಲ್ ಅವರಿಗೆ ಒಂದು ಕೋಟಿ ರೂ. ಚೆಕ್ ಅನ್ನು ಎಂಆರ್‌ಪಿಎಲ್ ವ್ಯವಸ್ಥಾಪಕ ನಿರ್ದೇಶಕ ಎಂ. ವೆಂಕಟೇಶ್ ಅವರು ಜಿಲ್ಲಾಧಿಕಾರಿ ಕಚೇರಿಯಲ್ಲಿ ನೀಡಿದರು.
ಈ ಸಂದರ್ಭದಲ್ಲಿ ಎಂಆರ್‌ಪಿಎಲ್ ಹಣಕಾಸು ನಿರ್ದೇಶಕ ಎ.ಕೆ. ಸಾಹೂ, ಗ್ರೂಪ್ ಜನರಲ್ ಮೆನೇಜರ್ ಬಿ.ಎಚ್.ವಿ. ಪ್ರಸಾದ್ ಮತ್ತಿತರರು ಉಪಸ್ಥಿತರಿದ್ದರು.