News Kannada
Thursday, February 09 2023

ಕರಾವಳಿ

ಘನತ್ಯಾಜ್ಯ ವಿಲೇವಾರಿ ಘಟಕ ಅವ್ಯವಸ್ಥೆ: ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡ ಶಾಸಕರು

Photo Credit :

ಘನತ್ಯಾಜ್ಯ ವಿಲೇವಾರಿ ಘಟಕ ಅವ್ಯವಸ್ಥೆ: ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡ ಶಾಸಕರು

ಮೂಡುಬಿದಿರೆ: ಕರಿಂಜೆ ಗ್ರಾಮದ ಮಾರಿಂಜ ಗುಡ್ಡೆಯಲ್ಲಿ ಇರುವ ಮೂಡುಬಿದಿರೆ ಪುರಸಭೆಯ ಘನ ತ್ಯಾಜ್ಯ ವಿಲೇವಾರಿ ಘಟಕ ನಿರ್ವಹಣೆಯಲ್ಲಿ ಅವ್ಯವಹಾರ ಮತ್ತು ಅಸಮರ್ಪಕ ನಿರ್ವಹಣೆಯ ಬಗ್ಗೆ ಸಾರ್ವಜನಿಕ ದೂರಿನ ಹಿನ್ನೆಲೆಯಲ್ಲಿ ಶಾಸಕ ಉಮಾನಾಥ ಕೋಟ್ಯಾನ್ ದಿಢೀರ್ ಭೇಟಿ ನೀಡಿ ಪರಿಶೀಲನೆ ನಡೆಸಿ ಪುರಸಭೆಯ ಮುಖ್ಯಾಧಿಕಾರಿ ಮತ್ತು ಪರಿಸರ ಅಧಿಕಾರಿಯನ್ನು ತೀವೃ ತರಾಟೆಗೆ ತೆಗೆದುಕೊಂಡ ಘಟನೆ ನಡೆದಿದೆ.

ಶಾಸಕರು ಯಾರಿಗೂ ಮಾಹಿತಿ ನೀಡದೆ ಮಾಧ್ಯಮಗಳೊಂದಿಗೆ ಘಟಕಕ್ಕೆ ದಿಢೀರ್ ಭೇಟಿ ನೀಡಿದ ಸಂದರ್ಭದಲ್ಲಿ ಮಿಶ್ರಗೊಂಡಿರುವ ಮಾಂಸ ಮತ್ತು ತರಕಾರಿಯ ತ್ಯಾಜ್ಯವು ರಾಶಿ ಬಿದ್ದಿದ್ದು, ವಾಸನೆ ಬೀರುತ್ತಿತ್ತು ಹಾಗೂ ಪ್ಲಾಸ್ಟಿಕ್ ಕ್ಯಾರಿಬ್ಯಾಗ್‍ಗಳು ರಾಶಿ ಬಿದ್ದಿದ್ದು ಈ ಅವ್ಯವಸ್ಥೆಯನ್ನು ಕಂಡು ಮುಖ್ಯಾಧಿಕಾರಿ ಶೀನ ನಾಯ್ಕ್ ಮತ್ತು ಪರಿಸರ ಅಧಿಕಾರಿ ಶಿಲ್ಪಾ ಅವರನ್ನು ಸ್ಥಳಕ್ಕೆ ಕರೆದರು.

ಅವ್ಯವಸ್ಥೆಯ ಬಗ್ಗೆ ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡ ಶಾಸಕರಿಗೆ ಅಧಿಕಾರಿಗಳು ಕಾರ್ಮಿಕರ ಕೊರತೆಯ ಬಗ್ಗೆ ವಿವರಿಸಿದರು. ಕಾರ್ಮಿಕರ ಸಂಖ್ಯೆಯ ಬಗ್ಗೆ ಮುಖ್ಯಾಧಿಕಾರಿಗಳನ್ನು ಶಾಸಕರು ಪ್ರಶ್ನಿಸಿದ್ದು ಈ ಸಂದರ್ಭ ಮುಖ್ಯಾಧಿಕಾರಿ ಬಳಿ ಉತ್ತರವಿರಲಿಲ್ಲ.

ಬಳಿಕ ಸುದ್ದಿಗಾರರ ಜೊತೆ ಮಾತನಾಡಿದ ಕೋಟ್ಯಾನ್, ಎಲ್ಲವನ್ನು ಎಲ್ಲರಿಂದ ಸರಿ ಮಾಡಲು ಸಾಧ್ಯವಿಲ್ಲ ನಿಜ. ಆದರೆ ತ್ಯಾಜ್ಯ ನಿರ್ವಹಣಾ ಘಟಕವೇ ಮಾರಕ ರೋಗಗಳನ್ನು ಹರಡುವ ಸ್ಥಿತಿಯಲ್ಲಿದೆ. ಕಾರ್ಮಿಕರ ಕೊರತೆಯಿಲ್ಲ. ಅಧಿಕಾರಿಗಳು ಅವರ ಜವಾಬ್ದಾರಿಯನ್ನು ಸರಿಯಾಗಿ ನಿರ್ವಹಿಸುತ್ತಿಲ್ಲ. ಇದರಿಂದಾಗಿ ಘಟಕದ ಆಸುಪಾಸಿನ ಗ್ರಾಮಸ್ಥರು ತೊಂದರೆ ಅನುಭವಿಸುತ್ತಿದ್ದಾರೆ. ಅಧಿಕಾರಿಗಳು ಎರಡು ದಿನಕ್ಕೊಮ್ಮೆ ಭೇಟಿ ನೀಡಿ ಸಮರ್ಪಕವಾಗಿ ಕಾರ್ಯನಿರ್ವಹಿಸುವಂತೆ ಅಧಿಕಾರಿಗಳಿಗೆ ಸೂಚಿಸಿದ್ದು ಇನ್ನೊಮ್ಮೆ ದಿಢೀರ್ ಭೇಟಿ ನೀಡಲಾಗುವುದು ಎಂದು ಎಚ್ಚರಿಸಿದರು.

See also  ಜಾತಿ ಸಂಘಟನೆಗಳು ವಿಘಟನೆಯಲ್ಲಿ ಸಮಾಪ್ತಿಯಾಗಬಾರದು: ಮಾಣಿಲ ಶ್ರೀ
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published. Required fields are marked *

193
Deevith S K

Read More Articles

Subscribe Newsletter

Get latest news karnataka updates on your email.

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು