ಕಾಸರಗೋಡು: ಇಂಧನ ಬೆಲೆ ಏರಿಕೆಯನ್ನು ಖಂಡಿಸಿ ಕಾಂಗ್ರೆಸ್ ಪಕ್ಷ ಕರೆದಿರುವ ಭಾರತ್ ಬಂದ್ ಗೆ ಕಾಸರಗೋಡಿನಲ್ಲೂ ವ್ಯಾಪಕ ಬೆಂಬಲ ವ್ಯಕ್ತವಾಗಿದೆ. ಬೆಳಗ್ಗಿನಿಂದಲೇ ಅಂಗಡಿಮುಂಗಟ್ಟುಗಳು ಬಂದಾಗಿದ್ದು, ಬಸ್ ಸಂಚಾರ ಸಂಪೂರ್ಣ ಸ್ಥಗಿತಗೊಂಡಿದೆ.
ಕೇರಳದಲ್ಲಿ ಆಡಳಿತ ಪಕ್ಷ ಎಲ್.ಡಿ.ಎಫ್ ಹಾಗೂ ವಿರೋಧ ಪಕ್ಷ ಯುಡಿಎಫ್ ಒಟ್ಟು ಸೇರಿ ಬೆಳಗ್ಗೆ 6 ರಿಂದ ಸಂಜೆ 6 ರ ತನಕ ಬಂದ್ ಗೆ ಕರೆ ನೀಡಿದೆ. ಬಂದ್ ಹಿನ್ನೆಲೆ ಜಿಲ್ಲೆಯ ಬಹುತೇಕ ಶಾಲೆಗಳಿಗೆ ರಜೆ ಘೋಷಿಸಲಾಗಿದೆ. ಸರ್ಕಾರಿ ಕಚೇರಿಗಳಲ್ಲೂ ನೌಕರರಿಲ್ಲದೆ ಸ್ತಬ್ಧವಾಗಿದೆ.
ಇನ್ನೂ ಸರಕು ವಾಹನಗಳು ಅಲ್ಲಲ್ಲಿ ರಸ್ತೆ ಬದಿಯಲ್ಲಿ ಟೆಂಟ್ ಹಾಕಿವೆ. ಕೆಲವೇ ಕೆಲವು ಖಾಸಗಿ ವಾಹನಗಳು ಸಂಚರಿಸುತ್ತಿದ್ದು, ಬೆಳಗ್ಗಿ ರೈಲಿನಲ್ಲಿ ಬಂದ ಪ್ರಯಾಣಿಕರು ವಾಹನಗಳಿಲ್ಲದೆ ಪರದಾಡುವ ಸ್ಥಿತಿ ನಿರ್ಮಾಣವಾಗಿದೆ. ಅಹಿತಕರ ಘಟನೆ ನಡೆಯದಂತೆ ಪೊಲೀಸರು ಮುನ್ನೆಚ್ಚರಿಕಾ ಕ್ರಮ ಕೈಗೊಂಡಿದ್ದಾರೆ.