ಮಂಗಳೂರು: ಸೆ.10ರಂದು ಪೆಟ್ರೋಲ್ ಮತ್ತು ಡಿಸೇಲ್ ಬೆಲೆ ಏರಿಕೆ ವಿರೋಧಿಸಿ ಕಾಂಗ್ರೆಸ್ ಕರೆ ನೀಡಿದ್ದ ಭಾರತ್ ಬಂದ್ ವೇಳೆ ಮಂಗಳೂರಿನ ಹೊಟೇಲ್ ವೊಂದರ ಮೇಲೆ ಕಲ್ಲು ತೂರಾಟ ನಡೆಸಿದ್ದ ಆರೋಪದ ಮೇಲೆ ವ್ಯಕ್ತಿಯೊಬ್ಬನ್ನು ಮಂಗಳೂರು ಪೊಲೀಸರು ಬಂಧಿಸಿದ್ದಾರೆ.
ಬಂಧಿತ ವ್ಯಕ್ತಿಯನ್ನು ಕಾಟಿಪಳ್ಳ 3ನೇ ಬ್ಲಾಕ್ ನಿವಾಸಿ ಅಮರ್ ಸೋನ್ಸ್ (28) ಎಂದು ಗುರುತಿಸಲಾಗಿದೆ.ಸೋಮವಾಋ ಬಂದ್ ನ ದಿನದಂದು ಅಮರ್ ಸೋನ್ಸ್ ಮತ್ತು ಆತನ ಸಹಚರ ಬೈಕ್ ನಲ್ಲಿ ಬಂದು ನಗರದ ಶಿವಭಾಗ್ ನಲ್ಲಿರುವ ಶಿವಭಾಗ್ ಹೊಟೇಲ್ ಮೇಲೆ ಕಲ್ಲು ಬಿಸಾಕಿದ್ದಾರೆ.
ಈ ಎಲ್ಲ ದೃಶ್ಯಾವಳಿಗಳು ಸಿಸಿಟಿವಿಯಲ್ಲಿ ಸೆರೆಯಾಗಿದ್ದು, ಘಟನೆ ಸಂಬಂಧ ನಗರದ ಕದ್ರಿ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿತ್ತು. ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆ ನಡೆಸಿದ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ. ಕೃತ್ಯದಲ್ಲಿ ಭಾಗಿಯಾಗಿದ್ದ ಇನ್ನೊಬ್ಬನಿಗೆ ಶೋಧ ಮುಂದುವರಿದಿದೆ.