ಮೂಡುಬಿದಿರೆ: ಆಳ್ವಾಸ್ ಕಾಲೇಜಿನ ವಿದ್ಯಾರ್ಥಿನಿಯೋರ್ವಳು ವಿದ್ಯಾಗಿರಿಯ ಹಾಸ್ಟೇಲ್ನಲ್ಲಿ ನೇಣುಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಬುಧವಾರ ಬೆಳಿಗ್ಗೆ ನಡೆದಿದೆ.
ಬೆಂಗಳೂರು ಆನೆಕಲ್ಲು ನಿವಾಸಿ ರಾಮಚಂದ್ರ ರೆಡ್ಡಿ ಅವರ ಪುತ್ರಿ ವಿನುತ(18) ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿನಿಯೆಂದು ಗುರುತಿಸಲಾಗಿದೆ. ಈಕೆ ಆಳ್ವಾಸ್ನ ದ್ವಿತೀಯ ಪಿಯುಸಿ ವಿಜ್ಞಾನ ವಿಭಾಗದ ವಿದ್ಯಾರ್ಥಿನಿಯಾಗಿದ್ದು ಹೇಮಾವತಿ ಹಾಸ್ಟೇಲ್ನಲ್ಲಿ ಬುಧವಾರ ಬೆಳಿಗ್ಗೆ ಸುಮಾರು 6 ಗಂಟೆಗೆ ಈಕೆಯ ರೂಮೇಟು ಸ್ನಾನಕ್ಕೆಂದು ತೆರಳಿದ ಸಂದರ್ಭ ವಿನುತ ಚೂಡಿದಾರದ ಶಾಲಿನಿಂದ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ.
ಶೈಕ್ಷಣಿಕವಾಗಿ ಮುಂಚೂಣಿಯಲ್ಲಿದ್ದ ಈಕೆ ಪ್ರತಿಭಾನ್ವಿತ ವಿದ್ಯಾರ್ಥಿನಿಯಾಗಿದ್ದು ಪ್ರಥಮ ಪಿಯುಸಿಯಲ್ಲಿ ಶೇಕಡಾ 95 ಅಂಕ ಪಡೆದಿದ್ದಾರೆನ್ನಲಾಗಿದೆ. ಈ ಬಾರಿ ನಡೆದ ನೀಟ್ ಪರೀಕ್ಷೆಯಲ್ಲಿ ಕಡಿಮೆ ಅಂಕ ಗಳಿಸಿದ್ದರಿಂದ ಈ ಬಗ್ಗೆ ತನ್ನ ಸಹಪಾಠಿ ಜೊತೆಗೆ ಬೇಸರ ವ್ಯಕ್ತಪಡಿಸಿಕೊಂಡಿದ್ದಾಳೆನ್ನಲಾಗಿದೆ. ಮೂಡುಬಿದಿರೆ ಪೊಲೀಸರು ಪ್ರಕರಣ ದಾಖಲಿಸಿ ತನಿಖೆ ನಡೆಸುತ್ತಿದ್ದಾರೆ.