ಬೆಳ್ತಂಗಡಿ : ಭಾರತೀಯ ಜನತಾ ಪಾರ್ಟಿ ಬೆಳ್ತಂಗಡಿ ಮಂಡಲದ ನೂತನ ಅಧ್ಯಕ್ಷರಾಗಿ ಜಯಂತ ಕೋಟ್ಯಾನ್ ಆಯ್ಕೆಯಾಗಿದ್ದಾರೆ.
ಇವರು ಮರೋಡಿ ಗ್ರಾಮ ಪಂಚಾಯಿತಿಯ ಮಾಜಿ ಸದಸ್ಯರಾಗಿ, ಮಾಜಿ ಉಪಾಧ್ಯಕ್ಷರಾಗಿ, ಮಾಜಿ ಅಧ್ಯಕ್ಷರಾಗಿ, ನಾರಾವಿ ಕ್ಷೇತ್ರದ ತಾಲೂಕು ಪಂಚಾಯಿತಿಯ ಮಾಜಿ ಸದಸ್ಯರಾಗಿ, ತಾಲೂಕು ಪಂಚಾಯಿತಿ ಮಾಜಿ ಸ್ಥಾಯಿ ಸಮಿತಿ ಅಧ್ಯಕ್ಷರಾಗಿ, ಬೆಳ್ತಂಗಡಿ ಮಂಡಲ ಮಾಜಿ ಪ್ರಧಾನ ಕಾರ್ಯದರ್ಶಿಯಾಗಿ ಸೇವೆ ಸಲ್ಲಿಸಿದ್ದು, ಪ್ರಸ್ತುತ ಮಂಡಲ ಉಪಾಧ್ಯಕ್ಷರಾಗಿದ್ದರು.
ರಾಜಕೀಯ ಕ್ಷೇತ್ರ ಮಾತ್ರವಲ್ಲದೆ ಸಂಘ ಸಂಸ್ಥೆಗಳ ಜವಾಬ್ಧಾರಿಯನ್ನೂ ನಿರ್ವಹಿಸಿದ ಇವರು ಪೆರಾಡಿ ವ್ಯವಸಾಯ ಸೇವಾ ಸಹಕಾರಿ ಬ್ಯಾಂಕಿನ ಮಾಜಿ ನಿರ್ದೇಶಕರಾಗಿ, ಬೆಳ್ತಂಗಡಿ ಶ್ರೀ ಗುರುನಾರಾಯಣ ಸ್ವಾಮಿ ಸೇವಾ ಸಂಘದ ಮಾಜಿ ನಿರ್ದೇಶಕರಾಗಿ ಸೇವೆ ಸಲ್ಲಿಸಿದ್ದು, ಪ್ರಸ್ತುತ ಮರೋಡಿ ಗ್ರಾಮ ಅರಣ್ಯ ಸಮಿತಿ ಅಧ್ಯಕ್ಷರಾಗಿ, ಮರೋಡಿ ಅರುಣೋದಯ ಯುವಕಮಂಡಲದ ಗೌರವಾಧ್ಯಕ್ಷರಾಗಿ, ಪಲರಗೋಳಿ ಆದಿಶಕ್ತಿ ಸೇವಾ ಸಮಿತಿ ಗೌರವಾಧ್ಯಕ್ಷರಾಗಿ, ಮರೋಡಿ ಶ್ರೀ ಗುರುನಾರಾಯಣ ಸ್ವಾಮಿ ಸೇವಾ ಸಂಘದ ಗೌರವ ಸಲಹೆಗಾರರಾಗಿ ಸೇವೆ ಸಲ್ಲಿಸುತ್ತಿದ್ದಾರೆ.