ಮೂಡುಬಿದಿರೆ: ಅಯೋಧ್ಯೆಯಲ್ಲಿ ಭವ್ಯ ರಾಮಮಂದಿರ ನಿರ್ಮಾಣಕ್ಕಾಗಿ ಕೇಂದ್ರ ಸರ್ಕಾರವು ಮಸೂದೆಯನ್ನು ಮಂಡಿಸಿ ಹಾದಿ ಸುಗಮಗೊಳಿಸಬೇಕು ಎಂದು ಆಗ್ರಹಿಸಿ ವಿ.ಹಿಂ. ಪ ನೇತೃತ್ವದಲ್ಲಿ ಮಂಗಳೂರಿನ ಕೇಂದ್ರ ಮೈದಾನದಲ್ಲಿ ನ. 25 ರಂದು ಆಯೋಜಿಸಿದ ಬೃಹತ್ ಜನಾಗ್ರಹ ಸಭೆಯಲ್ಲಿ ಸಂಘಪರಿವಾರದ ನೇತೃತ್ವದಲ್ಲಿ ಮೂಡುಬಿದಿರೆ ಪ್ರಖಂಡದಿಂದ 5 ಸಾವಿರ ರಾಮಭಕ್ತರು ಪಾಲ್ಗೊಳ್ಳಲಿದ್ದಾರೆ ಎಂದು ವಿ.ಹಿಂ.ಪ ಕಾರ್ಯಾಧ್ಯಕ್ಷ ಶ್ಯಾಮ ಹೆಗ್ಡೆ ಹೇಳಿದರು.
ಪತ್ರಿಕಾಗೋಷ್ಠಿಯಲ್ಲಿ ಅವರು ಈ ಕುರಿತು ಮಾಹಿತಿ ನೀಡಿದರು.
ರಾಮಮಂದಿರಕ್ಕಾಗಿ ಕಳೆದ 80 ವರ್ಷಗಳಿಂದ ನಿರಂತರ ಹೋರಾಟ ನಡೆಯುತ್ತಿದೆ. ಸರ್ವೋಚ್ಛ ನ್ಯಾಯಾಲಯವು ಅಡ್ಡ ಗೋಡೆಯ ಮೇಲೆ ಗೋಡೆ ಇಟ್ಟಂತೆ ತೀರ್ಪು ನೀಡಿದ್ದು ಈಗ ಸುಗ್ರೀವಾಜ್ಞೆಯನ್ನು ಜಾರಿಗೆ ತರುವುದೇ ಸೂಕ್ತ ಎಂದರು. ಈ ಹಕ್ಕೋತ್ತಾಯ ಮಂಡಿಸಿ ಮಂಗಳೂರು, ಬೆಂಗಳೂರು, ಹುಬ್ಬಳ್ಳಿಗಳಲ್ಲಿ ಏಕಕಾಲದಲ್ಲಿ ಹೋರಾಟ ನಡೆಯಲಿದೆ ಎಂದರು.
ಪತ್ರಿಕಾಗೋಷ್ಠಿಯಲ್ಲಿ ಉಪಾಧ್ಯಕ್ಷ ಸೋಮನಾಥ ಕೋಟ್ಯಾನ್, ಕಾರ್ಯದರ್ಶಿ ಶಾಂತಾರಾಮ ಕುಡ್ವ, ಭಜರಂಗದಳ ಸಂಚಾಲಕ ಸುಚೇತನ ಜೈನ್, ಶರತ್ ಉಪಸ್ಥಿತರಿದ್ದರು.