News Kannada
Wednesday, October 05 2022

ಕರಾವಳಿ

ಕಂಬಳಕ್ಕೆ ಮತ್ತೆ ಎದುರಾಗಿದೆ ನಿಷೇಧ ಭೀತಿ! - 1 min read

Photo Credit :

ಕಂಬಳಕ್ಕೆ ಮತ್ತೆ ಎದುರಾಗಿದೆ ನಿಷೇಧ ಭೀತಿ!

ನವದೆಹಲಿ: ಕರ್ನಾಟಕ ಕರಾವಳಿ ಭಾಗದ ಜಾನಪದ ಕ್ರೀಡೆಯಾಗಿರುವ ಕಂಬಳಕ್ಕೆ ಅವಕಾಶ ಕಲ್ಪಿಸುವ ಕಾಯ್ದೆ ವಿರೋಧಿಸಿ ಪೆಟಾ ಸಲ್ಲಿಸಿರುವ ಮೇಲ್ಮನವಿಯ ವಿಚಾರಣೆಯನ್ನು ಸುಪ್ರೀಂಕೋರ್ಟ್ ಸಂವಿಧಾನ ಪೀಠಕ್ಕೆ ವರ್ಗಾಯಿಸಿದೆ.

ಕಂಬಳಕ್ಕೆ ಮಾನ್ಯತೆ ಕಲ್ಪಿಸುವ ನಿಟ್ಟಿನಲ್ಲಿ ರಾಜ್ಯ ವಿಧಾನಸಭೆಯು ಪ್ರಾಣಿ ಹಿಂಸೆ ತಡೆ(ತಿದ್ದುಪಡಿ) ಮಸೂದೆ 2017ರಲ್ಲಿ ಜಾರಿ ಮಾಡಿತ್ತು. ಇದನ್ನು ಪ್ರಶ್ನಿಸಿ ಪೆಟಾ ಸುಪ್ರೀಂಕೋರ್ಟ್ ನಲ್ಲಿ ಮನವಿ ಸಲ್ಲಿಸಿತ್ತು. ಇದರ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಮದನ್ ಬಿ. ಲೋಕೂರ್ ನೇತೃತ್ವದ ಪೀಠವು ಇದನ್ನು ಸಂವಿಧಾನ ಪೀಠಕ್ಕೆ ವರ್ಗಾಯಿಸಿದೆ.

ಪೆಟಾವು ಸಲ್ಲಿಸಿರುವ ಅರ್ಜಿಯಲ್ಲಿ ಕಂಬಳಕ್ಕೆ ಅವಕಾಶ ನೀಡಿದಲ್ಲಿ ಕೇಂದ್ರದ ಪ್ರಾಣಿ ಹಿಂಸೆ ತಡೆ ಕಾಯ್ದೆ-1960ರ ಸ್ಪಷ್ಟ ಉಲ್ಲಂಘನೆಯಾಗುತ್ತದೆ ಎಂದು ಹೇಳಿದೆ. ಈ ಬಗ್ಗೆ ಕೇಂದ್ರ ಸರ್ಕಾರ ಹಾಗೂ ಭಾರತೀಯ ಪ್ರಾಣಿ ಕಲ್ಯಾಣ ಮಂಡಳಿಗೆ ನ್ಯಾಯಪೀಠವು ನೋಟಿಸ್ ಜಾರಿ ಮಾಡಿದೆ.

ಕಂಬಳದಲ್ಲಿ ಕೋಣಗಳಿಗೆ ಹಿಂದೆ ಬೆತ್ತದಿಂದ ಹೊಡೆಯಲಾಗುತ್ತಿದಾದರೂ ಇಂದಿನ ದಿನಗಳಲ್ಲಿ ಇದನ್ನು ಸಂಪೂರ್ಣ ನಿಲ್ಲಿಸಿ ಕಂಬಳ ಆಚರಿಸಲಾಗುತ್ತಿದೆ. ಆದರೂ ಪೆಟಾದವರೂ ತಕರಾರು ಮಾಡುತ್ತಿದ್ದಾರೆ. ಕಂಬಳಕ್ಕೆ ಇದರಿಂದ ಯಾವುದೇ ಅಡ್ಡಿಯಿಲ್ಲವೆಂದು ಕಂಬಳ ಸಮಿತಿಯವರು ತಿಳಿಸಿದ್ದಾರೆ.

See also  ಲಕ್ಷದೀಪೋತ್ಸವಕ್ಕಾಗಿ ಧರ್ಮಸ್ಥಳದಲ್ಲಿ ಸ್ವಚ್ಛತಾ ಕಾರ್ಯಕ್ರಮ
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published.

187
Subscribe to our Brand New YouTube Channel

Subscribe Newsletter

Get latest news karnataka updates on your email.

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು