ಮೂಡುಬಿದಿರೆ : ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿ, ಶ್ರೀ ಮಹಾವೀರ ಕಾಲೇಜು, ಹಳೆ ವಿದ್ಯಾರ್ಥಿ ಸಂಘ ಮತ್ತು ತುಳುಕೂಟ ಇವುಗಳ ಸಹಭಾಗಿತ್ವದಲ್ಲಿ ಶ್ರೀ ಮಹಾವೀರ ಕಾಲೇಜಿನಲ್ಲಿ ನಡೆದ ‘ತುಳುನಾಡಸಿರಿ ಮದಿಪು-2019’ ಮಂಗಳೂರು ವಿಶ್ವವಿದ್ಯಾನಿಲಯ ಮಟ್ಟದ ಅಂತರ್ ಕಾಲೇಜು ತುಳು ಸಾಂಸ್ಕೃತಿಕ ಸ್ಪರ್ಧೆಯಲ್ಲಿ ಮೂಡುಬಿದಿರೆಯ ಆಳ್ವಾಸ್ ಕಾಲೇಜು ಸಮಗ್ರ ಪ್ರಶಸ್ತಿ ಪಡೆದುಕೊಂಡಿದೆ.
ಸಾಮೂಹಿಕ ವಿಭಾಗದಲ್ಲಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜು, ವಾಮದಪದವು (ಪ್ರಥಮ), ಆಳ್ವಾಸ್ ಕಾಲೇಜು, ಮೂಡುಬಿದಿರೆ (ದ್ವಿತೀಯ), ನಿರಂಜನಸ್ವಾಮಿ ಕಾಲೇಜು, ಸುಂಕದಕಟ್ಟೆ (ತೃತೀಯ), ಶ್ರೀ ದುರ್ಗಾ ಪರಮೇಶ್ವರಿ ದೇವಳ ಕಾಲೇಜು, ಕಟೀಲು ಮತ್ತು ಕಾಲೇಜು, ಐಕಳ (ಸಮಾಧಾನಕರ) ಮತ್ತು ಶ್ರೀ ದುರ್ಗಾ ಪರಮೇಶ್ವರಿ ದೇವಳ ಕಾಲೇಜು, ಕಟೀಲು (ಉತ್ತಮ ಕಾರ್ಯಕ್ರಮ ನಿರೂಪಣೆ) ಪ್ರಶಸ್ತಿಗಳನ್ನು ಪಡೆದುಕೊಂಡವು.