ಮಂಗಳೂರು: ಚಾಲಕನ ನಿಯಂತ್ರಣ ತಪ್ಪಿ ಗ್ಯಾಸ್ ಟ್ಯಾಂಕರ್ ಒಂದು ಪಲ್ಟಿ ಹೊಡೆದ ಘಟನೆ ಶನಿವಾರ ಮಧ್ಯಾಹ್ನ ನಗರದ ಪಡೀಲ್ ಸಮೀಪದ ಮರೋಳಿ ಬಳಿ ಸಂಭವಿಸಿದೆ.
ಬಿ.ಸಿ.ರೋಡ್ ಕಡೆಗೆ ಸಾಗುತ್ತಿದ್ದ ಗ್ಯಾಸ್ ಟ್ಯಾಂಕರ್ ಪಲ್ಟಿಯಾಗಿ ಗ್ಯಾಸ್ ಸೋರಿಕೆಯಾಗಿದೆ. ಆದರೆ ಅಗ್ನಿಶಾಮಕ ದಳದವರು ತಕ್ಷಣ ಸ್ಥಳಕ್ಕಾಗಮಿಸಿ ದೊಡ್ಡ ಅನಾಹುತ ತಪ್ಪಿಸಿದ್ದಾರೆ.
ಚಾಲಕನಿಗೆ ಯಾವುದೇ ಗಾಯವಾಗಿಲ್ಲ ಮತ್ತು ಗ್ಯಾಸ್ ಸೋರಿಕೆಯಿಂದ ಯಾವುದೇ ಅಪಾಯವು ಸಂಭವಿಸಿಲ್ಲ ಎಂದು ತಿಳಿದುಬಂದಿದೆ.