ಮಂಗಳೂರು: ಬಿಜೆಪಿ ರಾಜ್ಯಾಧ್ಯಕ್ಷ ಬಿ ಎಸ್ ಯಡಿಯೂರಪ್ಪ ಅವರು ಮೈತ್ರಿ ಶಾಸಕರಿಗೆ ಆಮಿಷವೊಡ್ಡಿರುವ ಸಾಕ್ಷ್ಯ ಆಡಿಯೋ ಆರೋಪ ಸುಳ್ಳಾದರೆ ರಾಜಕೀಯ ನಿವೃತ್ತಿ ಪಡೆಯುತ್ತೇನೆ ಎಂದು ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರು ಎದುರೇಟು ನೀಡಿದ್ದಾರೆ.
ಶನಿವಾರ ಧರ್ಮಸ್ಥಳದಲ್ಲಿ ಕೆರೆ ಸಂಜೀವಿನಿ ಯೋಜನೆಗೆ ಚಾಲನೆ ನೀಡಿ ಬಳಿಕ ಪತ್ರಕರ್ತರೊಂದಿಗೆ ಮಾತನಾಡಿದರು.
ಶುಕ್ರವಾರ ಬಿಎಸ್ ಯಡಿಯೂರಪ್ಪ ಅವರು ಆಡಿಯೋ ತುಣುಕಿನಲ್ಲಿರುವ ಧ್ವನಿ ನನ್ನದೆಂದು ಸಾಬೀರಾದರೆ ರಾಜಕೀಯ ನಿವೃತ್ತಿ ಪಡೆಯುವುದಾಗಿ ಅವರು ಹೇಳಿದ್ದರು. ಈ ಸಂಬಂಧ ಪ್ರತಿಕ್ರಿಯಿಸಿದ ಸಿಎಂ ಕುಮಾರಸ್ವಾಮಿ ಅವರು, ಬಿಎಸ್ ವೈ ಅವರು ಧ್ವನಿ ಅವರದ್ದಲ್ಲ ಎಂದು ಸಾಬೀತು ಪಡಿಸಿದರೆ ಆಗ ಅವರ ಬದಲಿಗೆ ನಾನೇ ರಾಜಕೀಯ ನಿವೃತ್ತಿ ಪಡೆಯುತ್ತೇನೆ ಎಂದು ಹೇಳಿಕೆ ನೀಡಿದ್ದಾರೆ.