News Kannada
Thursday, February 09 2023

ಕರಾವಳಿ

ಪೂಜ್ಯ ನಿಸ್ಪೃಹ ಸಾಗರ ಮುನಿಮಹಾರಾಜರ ಸಮಾಧಿ ಮರಣ

Photo Credit :

ಪೂಜ್ಯ ನಿಸ್ಪೃಹ ಸಾಗರ ಮುನಿಮಹಾರಾಜರ ಸಮಾಧಿ ಮರಣ

ಬೆಳ್ತಂಗಡಿ: ಪೂಜ್ಯ ನಿಸ್ಪೃಹ ಸಾಗರ ಮುನಿಮಹಾರಾಜರು (75) ಮಂಗಳವಾರ ಮುಂಜಾನೆ ಏಳು ಗಂಟೆಗೆ ಧರ್ಮಸ್ಥಳದಲ್ಲಿ ಭಗವಾನ್ ಶ್ರೀ ಚಂದ್ರನಾಥ ಸ್ವಾಮಿ ಬಸದಿ ಬಳಿ ಮುನಿಗಳು ವಾಸ್ತವ್ಯ ಇರುವ ಕುಟೀರದಲ್ಲಿ ಸಮಾಧಿ ಮರಣ ಹೊಂದಿದರು. ಇದೇ 18 ರಂದು ಸೋಮವಾರ ಅವರು ಸಲ್ಲೇಖನ ವ್ರತ ಧಾರಣೆ ಮಾಡಿದ್ದರು. ಆಮರಣಾಂತ ಉಪವಾಸ ಕೈಗೊಳ್ಳುವುದಕ್ಕೆ “ಸಲ್ಲೇಖನ ವ್ರತ” ಎನ್ನುತ್ತಾರೆ.

ಜೈನ ಸಂಪ್ರದಾಯದಂತೆ ಮರಣವೇ ಮಹಾನವಮಿ ಎಂದು ಭಾವಿಸಿ ಸಾವನ್ನು ಕೂಡಾ ಮಹೋತ್ಸವ ಆಗಿ ಆಚರಿಸಿ ಸಂಭ್ರಮಿಸುತ್ತಾರೆ. ಏಕೆಂದರೆ ಸಾವು ದೇಹಕ್ಕೆ ಮಾತ್ರ. ಆತ್ಮಕ್ಕೆ ಸಾವಿಲ್ಲ. ದೇಹ ನಶ್ವರ, ಆತ್ಮ ಶಾಶ್ವತ.
ಪರಿಚಯ: ನಿಸ್ಪೃಹ ಸಾಗರ ಮುನಿ ಮಹಾರಾಜರು ಮೂಲತಃ ರಾಜಸ್ಥಾನದ ಕಿಶನ್‍ಗಡ್ ನಿವಾಸಿ. ಎಸ್.ಎಸ್.ಎಲ್.ಸಿ. ತನಕ ಶಿಕ್ಷಣವನ್ನು ಹುಟ್ಟೂರಲ್ಲಿಯೇ ಪಡೆದಿದ್ದರು. ಬಾಲ್ಯದಿಂದಲೇ ಅವರಿಗೆ ತಪಸ್ಸು, ಧ್ಯಾನ, ಧರ್ಮ, ಅಹಿಂಸೆ, ಸ್ವಾಧ್ಯಾಯದಲ್ಲಿ ವಿಶೇಷ ಆಸಕ್ತಿ, ಅಭಿರುಚಿ. ಅವರ ಪೂರ್ವಾಶ್ರಮದ ಹೆಸರು ಪ್ರೇಮಚಂದ್ ಪಹಾಡಿಯಾ.

2009ರಲ್ಲಿ ಜೈನರ ಪವಿತ್ರ ತೀರ್ಥಕ್ಷೇತ್ರ ಚಂಪಾಪುರಿಯಲ್ಲಿ ಆಚಾರ್ಯ ಶ್ರೀ ವರ್ಧಮಾನ ಸಾಗರ ಮುನಿ ಮಹಾರಾಜರಿಂದ ಅವರು ಮುನಿ ದೀಕ್ಷೆ ಪಡೆದಿದ್ದರು. ಬಳಿಕ ಅವರು ಮುನಿ ಸಂಘದಲ್ಲಿದ್ದರು.

ಧರ್ಮಸ್ಥಳದಲ್ಲಿ ಫೆ. 9 ರಿಂದ 18 ರವರೆಗೆ ನಡೆದ ಭಗವಾನ್ ಬಾಹುಬಲಿ ಮಹಾ ಮಸ್ತಕಾಭಿಷೇಕದಲ್ಲಿ ಪಾವನ ಸಾನ್ನಿಧ್ಯ ನೀಡಲು ಪೂಜ್ಯ ಶ್ರೀ 108 ವರ್ಧಮಾನ ಸಾಗರ ಮುನಿಮಹಾರಾಜರ ಸಂಘದಲ್ಲಿ ಪೂಜ್ಯ ನಿಸ್ಪೃಹ ಸಾಗರ ಮುನಿ ಮಹಾರಾಜರು ಕೂಡಾ ಫೆ. 3 ರಂದು ಧರ್ಮಸ್ಥಳ ಪುರ ಪ್ರವೇಶ ಮಾಡಿದ್ದರು.

ಫೆ. 16, 17 ಮತ್ತು 18 ರಂದು ನಡೆದ ಬಾಹುಬಲಿ ಮಸ್ತಕಾಭಿಷೇಕವನ್ನು ಕೂಡಾ ವೀಕ್ಷಿಸಿದ್ದರು. ಧರ್ಮಸ್ಥಳದಲ್ಲಿ ಬಸದಿ ಬಳಿ ಇರುವ ಕುಟೀರದಲ್ಲಿ ಮುನಿ ಸಂಘದೊಂದಿಗೆ ಅವರು ಜಪ, ತಪ, ಧ್ಯಾನ, ಸ್ವಾಧ್ಯಾಯದಲ್ಲಿ ನಿರತರಾಗಿದ್ದರು. ಸೋಮವಾರ ಸಂಜೆ ಸಲ್ಲೇಖನ ವ್ರತಧಾರಣೆ ಮಾಡಿ ಮಂಗಳವಾರ ಮುಜಾನೆ ಏಳು ಗಂಟೆಗೆ ಸಮಾಧಿ ಮರಣ ಹೊಂದಿದರು.

ತ್ಯಾಗಿಗಳ ಉಪವಾಸ: ಮುನಿ ಸಂಘದವರೆಲ್ಲರೂ ಹಾಗೂ ಮಾತಾಜಿಯವರು ಕೂಡಾ ಮಂಗಳವಾರ ಉಪವಾಸ ವ್ರತ ಆಚರಿಸಿದರು. ಜಪ, ತಪ, ಧ್ಯಾನದಲ್ಲಿ ನಿರತರಾದರು.

ಸೋಮವಾರ ಚತುರ್ದಶಿ ನಿಮಿತ್ತ ಹೆಚ್ಚಿನವರು ಉಪವಾಸ ವ್ರತ ಮಾಡಿದ್ದರು. ಹಾಗಾಗಿ ಕೆಲವರು ಸತತ ಎರಡು ದಿನ ಉಪವಾಸ ವ್ರತ ಮಾಡಿದರು.

ಅಂತ್ಯ ಸಂಸ್ಕಾರ: ಪೂಜ್ಯ ಶ್ರೀ 108 ಆಚಾರ್ಯ ಶ್ರೀ ವರ್ಧಮಾನ ಸಾಗರ ಮುನಿ ಮಹಾರಾಜರು ಮತ್ತು ಪೂಜ್ಯ ಶ್ರೀ 108 ಪುಷ್ಪದಂತ ಸಾಗರ ಮುನಿ ಮಹಾರಾಜರ ನೇತೃತ್ವದಲ್ಲಿ ಬಸದಿಯ ಬಳಿ ಅಂತ್ಯ ಸಂಸ್ಕಾರ ನಡೆಸಲಾಯಿತು.

ಹೇಮಾವತಿ ವಿ. ಹೆಗ್ಗಡೆಯವರು, ಡಿ. ಸುರೇಂದ್ರ ಕುಮಾರ್, ಅನಿತಾ ಸುರೇಂದ್ರ ಕುಮಾರ್, ಹರ್ಷೇಂದ್ರ ಕುಮಾರ್ ಮತ್ತು ಸುಪ್ರಿಯಾ ಹರ್ಷೇಂದ್ರ ಕುಮಾರ್ ಹಾಗೂ ಡಾ. ಬಿ. ಯಶೋವರ್ಮ ಅಂತಿಮ ಗೌರವ ಸಲ್ಲಿಸಿದರು.

See also  ಶಿರಾಡಿ ಘಾಟ್ ನಲ್ಲಿ ಹತ್ತು ದಿನದೊಳಗೆ ಲಘು ವಾಹನಕ್ಕೆ ಸಂಚಾರಕ್ಕೆ ಅವಕಾಶ: ರೇವಣ್ಣ

ಸಕಲ ವೈಭವದ ಮೆರವಣಿಗೆಯೊಂದಿಗೆ ಪಂಚನಮಸ್ಕಾರ ಮಂತ್ರ ಪಠಣ ಮಾಡುತ್ತಾ, ಕುಟೀರದಿಂದ ಅಲಂಕೃತ ಆಸನದಲ್ಲಿ ಕೊಂಡು ಹೋಗಿ ಬಸದಿಯ ಬಳಿ ಇರುವ ಜಾಗದಲ್ಲಿ ತ್ರಿಕೋನಾಕಾರದಲ್ಲಿ ಚಿತೆಯನ್ನು ರೂಪಿಸಿ, ದೇಹವನ್ನು ಪದ್ಮಾಸನದಲ್ಲಿ ಕುಳ್ಳಿರಿಸಿ, ಧಾರ್ಮಿಕ ವಿಧಿ-ವಿಧಾನಗಳೊಂದಿಗೆ ಅಂತ್ಯ ಸಂಸ್ಕಾರ ನಡೆಸಲಾಯಿತು.

ಮುನಿಗಳು ಮೃತ ದೇಹಕ್ಕೆ ನೀರು, ಹಾಲು, ತುಪ್ಪ ಮತ್ತು ಸಕ್ಕರೆಯ ಸೇಚನದೊಂದಿಗೆ ಅಭಿಷೇಕ ಮಾಡಿದರು. ಎಲ್ಲಾ ಮುನಿಗಳು ಮತ್ತು ಮಾತಾಜಿಯವರು ಪಂಚ ನಮಸ್ಕಾರ ಮಂತ್ರ ಪಠಣದೊಂದಿಗೆ ಮೂರು ಸುತ್ತು ಪ್ರದಕ್ಷಿಣೆ ಹಾಕಿದರು.

ನಿಸ್ಪೃಹ ಸಾಗರ ಮುನಿ ಮಹಾರಾಜರ ಪೂರ್ವಾಶ್ರಮದ ಮಕ್ಕಳಾದ ಸಂಜಯಕುಮಾರ್ ಮತ್ತು ಪುನೀತ್ ಕುಮಾರ್ ಚಿತೆಗೆ ಅಗ್ನಿಸ್ಪರ್ಶ ಮಾಡಿದರು. ಚಿತೆಗೆ ಗಂಧ ಮತ್ತು ಚಂದನದ ಕೊರಡುಗಳನ್ನು ಬಳಸಿ ಮೇಲೆ ತುಪ್ಪ ಸುರಿಯಲಾಯಿತು.

ಚಿತೆಯ ಸನಿಹದಲ್ಲಿ ಮುನಿ ಸಂಘದವರು ಮತ್ತು ಮಾತಾಜಿಯವರು ಸಾಮೂಹಿಕ ಪ್ರತಿಕ್ರಮಣ ಮಾಡಿದರು. (ಪ್ರಾಯಶ್ಚಿತ್ತ ಮಾಡಿಕೊಳ್ಳುವುದಕ್ಕೆ ಪ್ರತಿ ಕ್ರಮಣ ಎನ್ನುತ್ತಾರೆ. ಮುನಿಗಳು ಪ್ರತಿ ದಿನ ಮೂರು ಬಾರಿ ಪ್ರತಿಕ್ರಮಣ ಮಾಡುತ್ತಾರೆ.)

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published. Required fields are marked *

154
Deepak Atavale

Read More Articles

Subscribe Newsletter

Get latest news karnataka updates on your email.

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು