ಮಂಗಳೂರು: ಸಿಟಿ ಸೆಂಟರ್ ಮಾಲ್ ನಾಲ್ಕನೇ ಮಹಡಿಯಲ್ಲಿ ಬೆಂಕಿ ಕಾಣಿಸಿಕೊಂಡ ಘಟನೆ ಇಂದು ನಡೆದಿದೆ. ಮಾಲ್ ನಲ್ಲಿ ಭಾರೀ ಹೊಗೆ ಆವರಿಸಿಕೊಂಡಿದ್ದು ಅಗ್ನಿ ಶಾಮಕ ದಳದ ಸಿಬ್ಬಂದಿ ಕಾರ್ಯಾಚರಣೆಯಲ್ಲಿ ತೊಡಗಿಕೊಂಡಿದ್ದಾರೆ.
ಲೈಟ್ ಹೌಸ್ ರಸ್ತೆ ಹಾಗೂ ಕೆ.ಎಸ್.ರಾವ್ ರಸ್ತೆಯಲ್ಲಿ ಜನಸ್ತೋಮ ಸೇರಿದ್ದು, ವಾಹನ ದಟ್ಟಣೆ ಕಾಣಿಸಿಕೊಂಡಿದೆ. ಮಂಗಳೂರು ಪೊಲೀಸರು ಹಾಗೂ ಅಗ್ನಿ ಶಾಮಕ ಸಿಬ್ಬಂದಿ ಈ ಎರಡು ರಸ್ತೆಗಳನ್ನು ಬಂದ್ ಮಾಡಿದ್ದು ಜನರನ್ನು ಸುರಕ್ಷಿತ ಸ್ಥಳಗಳಿಗೆ ಕಳುಹಿಸುತ್ತಿದ್ದಾರೆ.