News Kannada
Friday, January 27 2023

ಕರಾವಳಿ

ಮೋದಿ ಮತ್ತೊಮ್ಮೆ ಪ್ರಧಾನಿಯಾದರೆ ಭಾರತ ವಿಶ್ವಕ್ಕೆ ಗುರು: ಸುರೇಶ್ ಕುಮಾರ್

Photo Credit :

ಮೋದಿ ಮತ್ತೊಮ್ಮೆ ಪ್ರಧಾನಿಯಾದರೆ ಭಾರತ ವಿಶ್ವಕ್ಕೆ ಗುರು:  ಸುರೇಶ್ ಕುಮಾರ್

ಮಂಗಳೂರು: ದೇಶದ ಭದ್ರತೆ ಹಾಗೂ ಸಮಗ್ರ ಅಭಿವೃದ್ಧಿಗಾಗಿ ಭಾರತವನ್ನು ಬಲಿಷ್ಠ ದೇಶವಾಗಿಸಲು ಹಗಲಿರುಳು ಶ್ರಮಿಸುತ್ತಿರುವ ನರೇಂದ್ರ ಮೋದಿಯವರು ಮತ್ತೆ ಪ್ರಧಾನಿಯಾಗಬೇಕು. ಪ್ರಧಾನಮಂತ್ರಿಯ ನೇತೃತ್ವದಲ್ಲಿ ಮತ್ತೊಮ್ಮೆ ಪ್ರಚಂಡ ಬಹುಮತದ ಸರ್ಕಾರ ಬಂದಲ್ಲಿ ಭಾರತ ವಿಶ್ವಕ್ಕೆ ಗುರುವಾಗಲಿದೆ ಎಂದು ಬಿಜೆಪಿಯ ಹಿರಿಯ ಮುಖಂಡ ಮಾಜಿ ಸಚಿವ ಸುರೇಶ್ ಕುಮಾರ್ ಹೇಳಿದರು.

ನಗರದ ಚಿಲಿಂಬಿಗುಡ್ಡೆಯ ಶ್ರೀ ರಾಮಾಂಜನೇಯ ಯುವಕ ಮಂಡಲದ ಸಭಾಂಗಣದಲ್ಲಿ ಮಂಗಳವಾರ ನಡೆದ 24ನೇ ವಾರ್ಡಿನ ಬಿಜೆಪಿ ಕಾರ್ಯಕರ್ತರ ಸಭೆಯನ್ನುದ್ದೇಶಿಸಿ ಅವರು ಮಾತನಾಡಿದರು. 1996ನೇ ಇಸವಿಯಿಂದ ದ.ಕ.ಜಿಲ್ಲೆ ಬಿಜೆಪಿಯ ಭದ್ರಕೋಟೆಯಾಗಿದೆ. ಹಾಲಿ ಸಂಸದ ಹಾಗೂ ಬಿಜೆಪಿ ಲೋಕಸಭಾ ಅಭ್ಯರ್ಥಿ ನಳಿನ್ ಕುಮಾರ್ ಕಟೀಲ್ ಅವರು ಈಗಾಗಲೇ ಜಿಲ್ಲೆಯ ಸಮಗ್ರ ಅಭಿವೃದ್ಧಿಗಾಗಿ ಬಹಳಷ್ಟು ಶ್ರಮಿಸಿದ್ದಾರೆ. ದ.ಕ.ಜಿಲ್ಲೆಗೆ ನಳಿನ್ ಕುಮಾರ್ ಅವರು ಬಹಳಷ್ಟು ಕೊಡುಗೆಗಳನ್ನು ನೀಡಿದ್ದಾರೆ. ಈ ಹಿನ್ನೆಲೆಯಲ್ಲಿ ರಾಷ್ಟ್ರ ರಾಜಕಾರಣದಲ್ಲಿ ದ.ಕ.ಜಿಲ್ಲೆಯಿಂದ ದೊಡ್ಡ ಮಟ್ಟಿನ ಅಪೇಕ್ಷೆ ಇಡಲಾಗಿದೆ. ಜನಸಾಮಾನ್ಯರಿಂದ ಹಿಡಿದು ಸೈನಿಕರವರೆಗೆ ಸಾಕಷ್ಟು ಯೋಜನೆಗಳನ್ನು ರೂಪಿಸಿದ ಏಕೈಕ ಪ್ರಧಾನಿ ಮೋದಿ. ಮತ್ತೊಮ್ಮೆ ಮೋದಿಯವರು ಪ್ರಧಾನಿಯಾಗಬೇಕಾದರೆ ಈ ಜಿಲ್ಲೆಯ ಜನತೆ ನಳಿನ್ ಕುಮಾರ್ ಕಟೀಲ್ ಅವರನ್ನು ಮೂರನೇ ಬಾರಿಗೆ ಗೆಲ್ಲಿಸಿ ಸಂಸತ್‌ಗೆ ಕಳಿಸ ಬೇಕು ಎಂದು ಹೇಳಿದರು.

ಇದೇ ವೇಳೆ ಮತದಾನ ನಮ್ಮ ಪರಮ ಕರ್ತವ್ಯವಾಗಿದ್ದು, ಪ್ರತಿಯೊಬ್ಬರು ಮತದಾನ ಮಾಡುವ ಮೂಲಕ ತಮ್ಮ ಕರ್ತವ್ಯ ನಿಭಾಯಿಸಬೇಕು ಎಂದು ಸುರೇಶ್ ಕುಮಾರ್ ಕರೆ ನೀಡಿದರು.

ಮಂಗಳೂರು ದಕ್ಷಿಣ ಶಾಸಕ ವೇದವ್ಯಾಸ ಕಾಮಾತ್ ಮಾತನಾಡಿ, ಪ್ರಧಾನಿ ಮೋದಿಯವರು ದೇಶದಲ್ಲಿ ತಾಂಡವಾಡುತ್ತಿರುವ ಭ್ರಷ್ಟಾಚಾರವನ್ನು ನಿರ್ಮೂಲನೆ ಮಾಡುವ ಸಂಕಲ್ಪತೊಟ್ಟಿದ್ದಾರೆ. ಜೊತೆಗೆ ದೇಶದಲ್ಲಿ ಭಯೋತ್ಪಾದನೆ ನಿಗ್ರಹ ಮಾಡುವಲ್ಲಿಯೂ ಸತತ ಪ್ರಯತ್ನಗಳನ್ನು ಮಾಡುತ್ತಿದ್ದಾರೆ. ದೇಶದ ಪ್ರತಿಯೊಬ್ಬ ವ್ಯಕ್ತಿ ಕೂಡಾ ಚೌಕಿದಾರನಾಗಿ, ಭಾರತವನ್ನು ಯಶಸ್ವಿಯಾಗಿ ಮುನ್ನಡೆಸಬೇಕು. ಅದರ ಮೂಲಕ ಭ್ರಷ್ಟಾಚಾರವನ್ನು ನಿರ್ಮೂಲನೆ ಮಾಡಬೇಕು ಎಂಬ ಉದ್ದೇಶ ಹೊಂದಿದ್ದಾರೆ. ಹಾಗಾಗಿ‌ ದ.ಕ ಜಿಲ್ಲೆಯಲ್ಲಿ 2 ಲಕ್ಷಕ್ಕೂ ಅಧಿಕ ಮತ ಪಡೆದು ಬಿಜೆಪಿ ಅಭ್ಯರ್ಥಿ ನಳಿನ್ ಕುಮಾರ್ ಕಟೀಲು ಅವರು ಗೆಲ್ಲುತ್ತಾರೆ. ದೇಶದಲ್ಲಿ 300 ಕ್ಕೂ ಅಧಿಕ ಸ್ಥಾನಗಳನ್ನು ಬಿಜೆಪಿ ಗೆಲ್ಲುತ್ತದೆ. ನರೇಂದ್ರ ಮೋದಿಯವರು ಮತ್ತೊಮ್ಮೆ ಪ್ರಧಾನಿಯಾಗುತ್ತಾರೆ. ಮೋದಿಯವರ ಸತತ ಪರಿಶ್ರಮದಿಂದ ನಮ್ಮ ದೇಶ ವಿಶ್ವಗುರುವಾಗಲಿದೆ ಎಂದು ಹೇಳಿದರು.

ಕಾರ್ಯಕ್ರಮದಲ್ಲಿ ಪಕ್ಷದ ಪ್ರಮುಖರಾದ ರಾಮಚಂದ್ರ ಬೈಕಂಪಾಡಿ, ಜನಾರ್ಧನ ಕುಡ್ವ, ರಮೇಶ್ ಕಂಡೆಟ್ಟು, ಉಮಾನಾಥ ಅಮಿನ್, ವಾಸುದೇವ್, ಗುರು ಪ್ರಸಾದ್, ಉಮೇಶ್ ಶೆಟ್ಟಿ, ಸಚಿನ್ ರಾಜ್‌ಗೋಪಾಲ್ ರೈ, ಸಂತೋಷ್ ಉಳ್ಳಾಲ್, ಪಕ್ಷದ ಸ್ಥಳೀಯ ಮುಖಂಡರಾದ ಗುರುದತ್, ಸುನಂದ, ಸುರೇಖ ಹೆಗ್ಡೆ, ಚಂದ್ರಾವತಿ, ಲೋಲಾಕ್ಷಿ ಮುಂತಾದವರು ಉಪಸ್ಥಿತರಿದ್ದರು.

ಕಾರ್ಯಕ್ರಮದ ರೂವಾರಿ ಬಿಜೆಪಿ ಮುಖಂಡ ರಾಜ್‌ಗೋಪಾಲ್ ರೈ ಸ್ವಾಗತಿಸಿದರು. ಕಾರ್ಯಕ್ರಮ ನಿರ್ವಾಹಿಸಿದರು. ವಾರ್ಡ್ ಅಧ್ಯಕ್ಷ ಸುರೇಶ್ ಕುಮಾರ್ ವಂದಿಸಿದರು.

 

See also  ಭಾರೀ ಮಳೆ: ಶಾಲಾ ಕಾಲೇಜುಗಳಿಗೆ ರಜೆ
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published. Required fields are marked *

149
Editor's Pick

Subscribe Newsletter

Get latest news karnataka updates on your email.

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು