ಮಂಗಳೂರು: ಲೋಕಸಭಾ ಚುನಾವಣಾ ಹಿನ್ನೆಲೆ ಇಂದು ಪ್ರಧಾನಿ ನರೇಂದ್ರ ಮೋದಿ ಅವರು ಮಂಗಳೂರಿನ ನೆಹರೂ ಮೈದಾನದಲ್ಲಿ ಬಿಜೆಪಿ ಪ್ರಚಾರ ಸಮಾವೇಶದಲ್ಲಿ ಪಾಲ್ಗೊಳ್ಳಲಿದ್ದಾರೆ.
ಈ ಹಿನ್ನೆಲೆ ಮೈದಾನದ ಸುತ್ತಾ ಮುತ್ತಾ ಬಿಗಿ ಬಂದೋಬಸ್ತ್ ನ್ನು ಹಮ್ಮಿಕೊಳ್ಳಲಾಗಿದ್ದು ಮಧ್ಯಾಹ್ನ 3.15ಕ್ಕೆ ನಗರದ ಅಂಬೇಡ್ಕರ್ ವೃತ್ತದ ಬಳಿಯಿಂದ ರಾಲಿ ನಡೆಯಲಿದೆ.
ಬಳಿಕ 4.20ಕ್ಕೆ ಮೋದಿ ಚುನಾವಣಾ ಪ್ರಚಾರ ನಡೆಯಲಿದೆ. ಸಮಾವೇಶದಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಹಾಗೂ ಶಾಸಕ ಸಿ.ಟಿ ರವಿ, ಸಂಸದ ನಳಿನ್ ಕುಮಾರ್ ಕಟೀಲ್ ಹಾಗು ಜಿಲ್ಲೆಯ ಶಾಸಕರು ಭಾಗವಹಿಸಲಿದ್ದಾರೆ. ಸಮಾವೇಶದಲ್ಲಿ ಒಂದು ಲಕ್ಷಕ್ಕೂ ಮೀರಿ ಜನರು ಭಾಗವಹಿಸುವ ನಿರೀಕ್ಷೆಯಿದೆ.