News Kannada
Friday, December 02 2022

ಕರಾವಳಿ

ಏ.23ರಂದು ಉತ್ತರ ಕನ್ನಡ ಲೋಕಸಭೆ ಚುನಾವಣೆ ಎದುರಿಸಲು ಜಿಲ್ಲಾಡಳಿತ‌ ಸಿದ್ದ

Photo Credit :

ಏ.23ರಂದು ಉತ್ತರ ಕನ್ನಡ ಲೋಕಸಭೆ ಚುನಾವಣೆ ಎದುರಿಸಲು ಜಿಲ್ಲಾಡಳಿತ‌ ಸಿದ್ದ

ಕಾರವಾರ:ಉತ್ತರ‌ಕನ್ನಡ ಲೋಕಸಭಾ‌ ಕ್ಷೇತ್ರದಲ್ಲಿ‌ ಏ.23 ರಂದು ನಡೆಯಲಿರುವ ಚುನಾವಣೆಯಲ್ಲಿ‌ ಒಟ್ಟೂ 15.50 ಲಕ್ಷ ಮತದಾರರು ತಮ್ಮ‌ ಅಧಿಕಾರ‌ ಚಲಾಯಿಸಲಿದ್ದಾರೆ. ಮುಕ್ತ ಹಾಗೂ ನ್ಯಾಯಸಮ್ಮತ ಮತದಾನಕ್ಕಾಗಿ ಜಿಲ್ಲಾಡಳಿತ ಸಿದ್ಧಗೊಂಡಿದೆ.

ಉತ್ತರ ಕನ್ನಡ ಲೋಕಸಭಾ ಕ್ಷೇತ್ರ ವ್ಯಾಪ್ತಿಯ ಒಟ್ಟು 1,922 ಮತಗಟ್ಟೆಗಳ ಪೈಕಿ ಉತ್ತರ ಕನ್ನಡ ಜಿಲ್ಲೆಯಲ್ಲಿ ನೆಲೆಸಿರುವ ಒಟ್ಟು 1,437 ಮತಗಟ್ಟೆಗಳಿಗೆ ತಲಾ ಒಬ್ಬ ಅಧ್ಯಕ್ಷಾಧಿಕಾರಿಗಳು ಮತ್ತು ಸಹಾಯಕ ಮತಗಟ್ಟೆ ಅಧ್ಯಕ್ಕಾಧಿಕಾರಿಗಳು ಹಾಗೂ ಇಬ್ಬರು ಮತಗಟ್ಟೆ ಅಧಿಕಾರಿಗಳನ್ನು ನೇಮಕ ಮಾಡಲಾಗಿದೆ. ಈ ಹೊರತು ಶೇ.25ರಷ್ಟು ಹೆಚ್ಚುವರಿ ಸಿಬ್ಬಂದಿಗಳನ್ನುಕಾಯ್ದಿರಿಸಿಕೊಳ್ಳಲಾಗಿದೆ.

ಉತ್ತರ ಕನ್ನಡ ಜಿಲ್ಲೆಯ ಒಟ್ಟು 6 ಕ್ಷೇತ್ರ ಹಾಗೂ ಬೆಳಗಾವಿ ಜಿಲ್ಲೆಯ ವ್ಯಾಪ್ತಿಯಲ್ಲಿ ಬರುವ ಖಾನಾಪುರ ಮತ್ತು ಕಿತ್ತೂರ ವಿಧಾನಸಭಾ ಕ್ಷೇತ್ರದ ಒಟ್ಟು 485 ಮತಗಟ್ಟೆಗಳಿಗೆ ಅಧಿಕಾರಿ/ಸಿಬ್ಬಂದಿಗಳನ್ನು ಬೆಳಗಾವಿ ಜಿಲ್ಲಾ ಚುನಾವಣಾಧಿಕಾರಿಗಳು ನಿಯೋಜಿಸಲಾಗಿದೆ. ಎಲ್ಲಾ ಮತಗಟ್ಟೆ ಅಧಿಕಾರಿ / ಸಿಬ್ಬಂದಿಗಳಿಗೆ ಮೂರು ಸುತ್ತಿನ ತರಬೇತಿಯನ್ನು ಆಯೋಜಿಸಲು ಉದ್ದೇಶಿಸಿದ್ದು, ಈಗಾಗಲೇ 2 ಸುತ್ತಿನ ತರಬೇತಿ ಮುಕ್ತಾಯಗೊಂಡಿರುತ್ತದೆ. ಪ್ರಸ್ತುತ ವರ್ಷ ಚುನಾವಣಾ ಆಯೋಗದ ನಿರ್ದೇಶನದಂತೆ ಮಹಿಳಾ ಸಿಬ್ಬಂದಿಗಳಿಗೆ ಅವರವರ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿನ ಮತಗಟ್ಟೆಗಳಿಗೆ ನಿಯೋಜಿಸಲು ವ್ಯವಸ್ಥೆ ಮಾಡಲಾಗಿದೆ. ಮತಗಟ್ಟೆ ಅಧಿಕಾರಿ / ಸಿಬ್ಬಂದಿಗಳು ತಾವು ಕರ್ತವ್ಯ ನಿರ್ವಹಿಸುತ್ತಿರುವ ವಿಧಾನಸಭಾ ಕ್ಷೇತ್ರದಿಂದ ಬೇರೆ  ವಿಧಾನಸಭಾ ಕ್ಷೇತ್ರಕ್ಕೆ ನಿಯೋಜಿಸಲ್ಲಟಲ್ಲಿ ಅವರ ಸಾಗಾಟಕ್ಕೆ ಕೆಎಸ್‌ಆರ್‌ಟಿಸಿ ಬಸ್ಸುಗಳ ವ್ಯವಸ್ಥೆ ಮಾಡಲಾಗಿದೆ. ತದನಂತರ ನಿರ್ಧಿಷ್ಟ ಪಡಿಸಿದ ಮತಗಟ್ಟೆಗಳಿಗೆ ತೆರಳಲು ಜಿಪಿಎಸ್ ಅಳವಡಿಸಿದ ವಾಹನಗಳ ವ್ಯವಸ್ಥೆ ಕಲ್ಪಿಸಲಾಗಿದೆ.

ವಿಶೇಷ ಮತಗಟ್ಟೆ: ಜಿಲ್ಲೆಯಲ್ಲಿ ಒಟ್ಟು 11 ಸಖಿ ಮತಗಟ್ಟೆಗಳನ್ನು ಸ್ಥಾಪಿಸಲಾಗಿದೆ. ಈ ಮತಗಟ್ಟೆಗಳನ್ನು ನೀಲಿ ಬಣ್ಣಗಳಿಂದ ಸೃಜಿಸಲಾಗುವುದು. ಹಾಗೂ ಈ ಮತಗಟ್ಟೆಗಳಿಗೆ ಮಹಿಳಾ ಸಿಬ್ಬಂದಿಗಳನ್ನು ನಿಯೋಜಿಸಲಾಗುವುದು. ಈ ಮತಗಟ್ಟೆಗಳನ್ನು ಮಹಿಳಾ ಸ್ನೇಹಿ ಮತಗಟ್ಟೆಗಳನ್ನಾಗಿ ಪರಿವರ್ತಿಸಲು ಕ್ರಮಕೈಗೊಳ್ಳಲಾಗಿದೆ. ಜಿಲ್ಲೆಯಲ್ಲಿ ಒಟ್ಟು 2 ದಿವ್ಯಾಂಗ ಸ್ನೇಹಿ ಮತಗಟ್ಟೆಗಳನ್ನು ಸ್ಥಾಪಿಸಲಾಗಿದೆ. ಈ ಮತಗಟ್ಟೆಗಳಲ್ಲಿ ವಿಕಲ ಚೇತನರಿಗೆ ಅನುಕೂಲವಾಗಲು ಅಗತ್ಯವಿರುವ ಮೂಲಭೂತ ಸೌಕರ್ಯಗಳನ್ನು ಕಲ್ಪಿಸಲಾಗಿದೆ. ಜಿಲ್ಲೆಯ ಪ್ರಮುಖ ಬುಡಕಟ್ಟು ಜನಾಂಗವಾದ ಸಿದ್ದಿ ಸಮುದಾಯದವರನ್ನು ಮತದಾನಕ್ಕೆ ಪ್ರೋತ್ಸಾಹಿಸಲು ಯಲ್ಲಾಪುರ ಮತ್ತು ಹಳಿಯಾಳ ತಾಲ್ಲೂಕುಗಳಲ್ಲಿ ತಲಾ 1 ಬುಡಕಟ್ಟು ಮತಗಟ್ಟೆಗಳನ್ನು ಸ್ಥಾಪಿಸಲಾಗಿದೆ.

ಸ್ಪರ್ಧಿಸಿರುವ ಅಭ್ಯರ್ಥಿಗಳು ಮತಗಟ್ಟೆ ಸ್ಥಳದಿಂದ ಕನಿಷ್ಠ ಎರಡು ನೂರು ಮೀಟರ್ ದೂರದಲ್ಲಿ ತಮ್ಮ ಬೂತ್ ಸ್ಥಾಪಿಸಲು ಮಾತ್ರ ಅವಕಾಶವಿದೆ. ಆದರೆ ಯಾವುದೇ ರೀತಿಯ ಪ್ರಚಾರವನ್ನು ಮಾಡುವಂತಿಲ್ಲ. ಮತದಾರರಿಗೆ ನೀಡುವ ಸ್ಲಿಪ್‌ನಲ್ಲಿ ಅವರು ಮತದಾರರ ಭಾಗ ಸಂಖ್ಯೆ, ಕ್ರಮ ಸಂಖ್ಯೆ ಮತ್ತು ಹೆಸರನ್ನು ಮಾತ್ರ ಬರೆಯಬಹುದಾಗಿದ್ದು ಯಾವುದೇ ರೀತಿಯ ಚಿಹ್ನೆಗಳು, ಅಭ್ಯರ್ಥಿಗಳ ಭಾವಚಿತ್ರಗಳು ಇರದಂತೆ ಎಚ್ಚರ ವಹಿಸಲು ಸೂಚಿಸಿದೆ. 2 ಚೇರ್, ಒಂದು ಮೇಜು, 3*4.5 ಫಿಟ್ ಬ್ಯಾನರ್‌ಗಳನ್ನು ಹಾಕಿಕೊಳ್ಳಲು ಅವಕಾಶವಿದ್ದು, ಚುನಾವಣಾಧಿಕಾರಿ ಹಾಗೂ ಸ್ಥಳೀಯ ಪ್ರಾಧಿಕಾರದ ಅನುಮತಿ ಪಡೆಯಬೇಕು.

ಪೋಲಿಂಗ್ ಎಜೆಂಟ್ ನೇಮಕಾತಿ: ಎಲ್ಲಾ ಅಭ್ಯರ್ಥಿಗಳು ಮತಗಟ್ಟೆಗೆ ಒಬ್ಬರಂತೆ ಮತದಾನ ಎಜೆಂಟರನ್ನು ನೇಮಿಸಬಹುದಾಗಿದೆ. ಈ ಎಜೆಂಟರು ಮತಗಟ್ಟೆಯಲ್ಲಿ ಕುಳಿತುಕೊಳ್ಳಲು ಮತದಾನಾಧಿಕಾರಿಗಳು ಅವಕಾಶವನ್ನು ಮಾಡಿಕೊಡುತ್ತಾರೆ. ಬದಲಿ ಎಜೆಂಟರನ್ನು ನೇಮಿಸಿಕೊಂಡಿದ್ದರು ಸಹ ಏಕ ಕಾಲದಲ್ಲಿ ಒಬ್ಬ ಎಜೆಂಟ್‌ರು ಮಾತ್ರ ಮತಗಟ್ಟೆಯಲ್ಲಿ ಇರಲು
ಅವಕಾಶವಿರುತ್ತದೆ. ಈ ಅಂಶದ ಬಗ್ಗೆ ಅಭ್ಯರ್ಥಿಗಳಿಗೆ ಸೂಕ್ತ ತಿಳುವಳಿಕೆ ನೀಡಲಾಗಿದೆ ಎಂದು ಜಿಲ್ಲಾ ಚುನಾವಣಾಧಿಕಾರಿ ಡಾ. ಹರೀಶ್ ಕುಮಾರ್ ಕೆ ಮಾಹಿತಿ ನೀಡಿದರು.

See also  ಧಾರ್ಮಿಕ ಭಾವನೆಗೆ ಧಕ್ಕೆ: ಬಂಟ್ವಾಳದಲ್ಲಿ ನಾಲ್ವರ ಬಂಧನ

ಮಾದರಿ ನೀತಿ ಸಂಹಿತೆ: ಉತ್ತರ ಕನ್ನಡ ಜಿಲ್ಲಾ ವ್ಯಾಪ್ತಿಯಲ್ಲಿ ಚುನಾವಣೆ ಪ್ರಕ್ರಿಯೆ ಜಾರಿಗೊಂಡ ಏ.19ರವರೆಗೆ 25 ಪ್ರಕರಣಗಳಲ್ಲಿ ಎಫ್.ಐ.ಆರ್ ದಾಖಲಾಗಿರುತ್ತದೆ. ಅಲ್ಲದೆ ಅಬಕಾರಿ ಕಾಯ್ದೆ ಅಡಿಯಲ್ಲಿ ಈ ವರೆಗೆ ಒಟ್ಟು 133 ಘೋರ ಮೊಕದ್ದಮೆಗಳು ದಾಖಲಾಗಿರುತ್ತದೆ. ಈ ಪ್ರಕರಣಗಳಿಂದ ಒಟ್ಟು ರೂ. 26,25 ಲಕ್ಷ ನಗದು, 32.68 ಸಾವಿರ ಲೀ, ಅಕ್ರಮ ಮದ್ಯ ವಶಪಡಿಸಿಕೊಳ್ಳಲಾಗಿದೆ (ಅಂದಾಜು ಬೆಲೆ ರೂ. 62.04 ಲಕ್ಷಗಳು), ಚುನಾವಣಾ ಪ್ರಚಾರ ಸಾಮಗ್ರಿಗಳು, ವಾಹನಗಳು, ಬಂಗಾರದ ಒಡವೆಗಳು ಹಾಗೂ ಇತರ ವಸ್ತುಗಳನ್ನು ವಶಪಡಿಸಿಕೊಳ್ಳಲಾಗಿದ್ದು, ಅದರ ಅಂದಾಜು ಬೆಲೆ 2.81 ಕೋಟಿ ರೂ. ಆಗಿದೆ.

ಏ.23ರಂದು ನಡೆಯಲಿರುವ ಲೋಕಸಭಾ ಚುನಾವಣೆ ಸಂಬಂಧ ಮತದಾನ ಅಂತ್ಯಗೊಳ್ಳುವುದಕ್ಕೆ ನಿಗದಿಯಾಗಿರುವ ಸಮಯದ 48 ಗಂಟೆಗಳ ಮೊದಲು ಎಲ್ಲ ರೀತಿಯ ಬಹಿರಂಗ ಪ್ರಚಾರ ನಿಷೇಧಿಸಿರುವುದರಿಂದ ಬಹಿರಂಗ ಪ್ರಚಾರ ಏ.21ರ ಸಂಜೆ 6 ಗಂಟೆಗೆ ಅಂತ್ಯಗೊಳ್ಳಲಿದೆ. ಈ ಗಂಟೆಗಳ ಅವಧಿಯಲ್ಲಿ ಚುನಾವಣೆ ಫಲಿತಾಂಶದ ಮೇಲೆ ಪರಿಣಾಮ ಬೀರುವ ಎಲ್ಲ ರೀತಿಯ ಬಹಿರಂಗ ಪ್ರಚಾರ ಟೆಲಿವಿಷನ್/ರೇಡಿಯೋ ಹಾಗೂ ಕೇಬಲ್ ನೆಟ್ವರ್ಕ್ ಇಂತಹ ಇತರ ಮಾಧ್ಯಮದಲ್ಲಿ ಚುನಾವಣಾ ವಿಷಯ ಚರ್ಚೆ, ಪ್ರಚಾರ, ಸಂದರ್ಶನ ಜಾಹೀರಾತು ಹಾಗೂ ಚುನಾವಣೆ ಸಂಬಂಧಿತ ಅಭಿಪ್ರಾಯಗಳ ಪ್ರಸಾರಗಳು ಈ ನಿಷೇಧಕ್ಕೆ ಏ.22 ಮತ್ತು 23ರಂದು ಪತ್ರಿಕಾ ಮಾಧ್ಯಮದಲ್ಲಿ ಪ್ರಕಟವಾಗುವ ಯಾವುದೇ ರೀತಿಯ ರಾಜಕೀಯ ಜಾಹೀರಾತುಗಳನ್ನು ನೀಡಬೇಕಾಗಿದ್ದಲ್ಲಿ, ಮಾಧ್ಯಮ ಪ್ರಮಾಣೀಕರಣ ಹಾಗೂ ಕಣ್ಗಾವಲು ಸಮಿತಿ (ಎಂ.ಸಿ.ಎಂ.ಸಿ) ತಂಡದಿಂದ ಕಡ್ಡಾಯವಾಗಿ ಅನುಮತಿಯನ್ನು ಪಡೆಯಬೇಕು ಎಂದು‌ ಜಿಪಂ ಸಿಇಒ ಎಂ. ರೋಷನ್ ಮಾಹಿತಿ ನೀಡಿದರು.

ಭದ್ರತಾ ವ್ಯವಸ್ಥೆ:ಚುನಾವಣಾ ಆಯೋಗದ ಮಾನದಂಡವನ್ನಾಧರಿಸಿ ಉತ್ತರ ಕನ್ನಡ ಲೋಕಸಭಾ ಚುನಾವಣಾ ಕ್ಷೇತ್ರದ ವ್ಯಾಪ್ತಿಯಲ್ಲಿ ಒಟ್ಟೂ 364 ಮತಗಟ್ಟೆಗಳನ್ನು ಸೂಕ್ಷ್ಮ ಎಂದು ಗುರುತಿಸಲಾಗಿದೆ. ಅವುಗಳಲ್ಲಿ ಒಟ್ಟು 63 ಮತಗಟ್ಟೆ ಸ್ಥಳಗಳಿಗೆ 1/2 ತುಕಡಿ ಸಿ.ಎ.ಪಿ.ಎಫ್ ನಿಯೋಜಿಸಲಾಗುತ್ತಿದೆ.

ಸೂಕ್ಷ್ಮ ಮತಗಟ್ಟೆಗಳ ಪೈಕಿ 96 ಮತಗಟ್ಟೆಗಳಿಗೆ ವೆಬ್ ಕಾಸ್ಟಿಂಗ್ ಸೌಲಭ್ಯ, 198 ಮತಗಟ್ಟೆಗಳಿಗೆ ಮೈಕೋ ಆಬ್ಸರ್ವರ್ ಮತ್ತು 52 ಮತಗಟ್ಟೆಗಳಿಗೆ ವಿಡಿಯೋಗ್ರಾಫರ್ ಗಳನ್ನು ನಿಯೋಜನೆ ಮಾಡಲಾಗುವುದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ವಿನಾಯಕ ಪಾಟೀಲ್ ತಿಳಿಸಿದರು.

 

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published.

178
Srinivas Badkar

Read More Articles

Subscribe Newsletter

Get latest news karnataka updates on your email.

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು