ಮಂಗಳೂರು: ಯಕ್ಷಧ್ರುವ ಪಟ್ಲ ಸಂಭ್ರಮ ಕಾರ್ಯಕ್ರಮವನ್ನು ಭಾನುವಾರ ಅಡ್ಯಾರ್ ಗಾರ್ಡನ್ ಲ್ಲಿ ಮುಂಬಯಿನ ಇಸಿಒವೈ ಇಂಡಸ್ಟ್ರೀಸ್ ಆಡಳಿತ ನಿರ್ದೇಶಕ ಕೆ.ಎಂ.ಶೆಟ್ಟಿ ಅವರು ಉದ್ಘಾಟಿಸಿದರು.
ಅಬ್ಬರ ತಾಳದೊಂದಿಗೆ ಕಾರ್ಯಕ್ರಮ ಆರಂಭಗೊಂಡಿದ್ದು, ನಿಟ್ಟೆ ಶಿಕ್ಷಣ ಟ್ರಸ್ಟ್ ಅಧ್ಯಕ್ಷ ಡಾ.ಎನ್.ವಿನಯ ಹೆಗ್ಡೆ ಅಧ್ಯಕ್ಷತೆ ವಹಿಸಿದ್ದಾರೆ. ಕಾರ್ಯಕ್ರಮ ರಾತ್ರಿ 12ರ ವರೆಗೆ ನಡೆಯಲಿದ್ದು ವೇದಿಕೆಯಲ್ಲಿ ಯಕ್ಷಗಾನ ವೈಭವ ನಡೆಯಲಿದೆ. ಸಂಜೆ 5 ಗಂಟೆಗೆ ಸಭಾ ಕಾರ್ಯಕ್ರಮ ನಡೆಯಲಿದೆ.
ಪ್ರಭಾಕರ ಜೋಷಿಗೆ ಪಟ್ಲ ಪ್ರಶಸ್ತಿ: ಹಿರಿಯ ವಿದ್ವಾಂಸ, ಯಕ್ಷಗಾನ ವಿಮರ್ಶಕ ಡಾ.ಎಂ.ಪ್ರಭಾಕರ ಜೋಷಿ ಅವರಿಗೆ 2019ನೇ ಸಾಲಿನ ಪಟ್ಲ ಪ್ರಶಸ್ತಿ ಲಭಿಸಲಿದೆ.