ಮೂಡುಬಿದಿರೆ : ತಾಲೂಕು ಕಾನೂನು ಸೇವೆಗಳ ಪ್ರಾಧಿಕಾರ ಮೂಡುಬಿದಿರೆ, ವಲಯ ಅರಣ್ಯ ಇಲಾಖೆ ಮೂಡುಬಿದಿರೆ ಇವುಗಳ ಸಹಯೋಗದಲ್ಲಿ ನ್ಯಾಯಾಲಯದ ಆವರಣದಲ್ಲಿ ಶನಿವಾರ ಗಿಡ ನೆಡುವ ಕಾರ್ಯಕ್ರಮ ನಡೆಯಿತು.
ಮೂಡುಬಿದಿರೆ ಸಿವಿಲ್ ಜಡ್ಜ್ ಮತ್ತು ಜೆಎಂಎಫ್ಸಿ ನ್ಯಾಯಾಲಯದ ನ್ಯಾಯಾಧೀಶ ಯಶವಂತ್ ಕುಮಾರ್ ಅವರು ಗಿಡ ನೆಡುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆಯನ್ನು ನೀಡಿದರು.
ವಲಯ ಅರಣ್ಯಾಧಿಕಾರಿ ಪ್ರಕಾಶ್ ಪೂಜಾರಿ, ವಕೀಲರ ಸಂಘದ ಉಪಾಧ್ಯಕ್ಷ ನಾಗೇಶ್ ಶೆಟ್ಟಿ ಡಿ, ಉಪ ವಲಯಾರಣ್ಯಾಧಿಕಾರಿಗಳಾದ ಮಂಜುನಾಥ್ ಗಾಣಿಗ, ಅಶ್ವಿತ್ ಗಟ್ಟಿ, ಅಪರಾಧ ವಿಭಾಗದ ಪಿಎಸ್ಐ ಕೃಷ್ಣ, ಹಿರಿಯ ವಕೀಲರುಗಳಾದ ಎಂ.ಎಸ್.ಕೋಟ್ಯಾನ್, ಎಂ.ಎಸ್.ತಂತ್ರಿ, ಪೊಲೀಸ್ ಇಲಾಖೆ, ಅರಣ್ಯ ಇಲಾಖೆಯ ಸಿಬಂದಿ ಇದ್ದರು.