News Kannada
Tuesday, September 27 2022

ಕರಾವಳಿ

ಭೀಕರ ರಸ್ತೆ ಅಪಘಾತಕ್ಕೆ ನಾಲ್ವರು ಬಲಿ - 1 min read

Photo Credit :

ಭೀಕರ ರಸ್ತೆ ಅಪಘಾತಕ್ಕೆ ನಾಲ್ವರು ಬಲಿ

ಬಂಟ್ವಾಳ: ಭಟ್ಕಳದ ನಿವಾಸಿಗಳು ತೆರಳುತ್ತಿದ್ದ ಕಾರಿಗೆ ಟ್ಯಾಂಕರ್ ಡಿಕ್ಕಿ ಹೊಡೆದ ಪರಿಣಾಮ ನಾಲ್ಕು ಮಂದಿ ದುರ್ಮರಣವನ್ನಪ್ಪಿದ ಘಟನೆಯು ಬಂಟ್ವಾಳದ ಬ್ರಹ್ಮರ ಕೂಟ್ಲು ಟೋಲ್ ಗೇಟ್ ಬಳಿ ಇಂದು ಮಧ್ಯಾಹ್ನ ನಡೆದಿದೆ.

ಕಾರು ಚಾಲಕನ ನಿಯಂತ್ರಣ ತಪ್ಪಿ ಬುಲೆಟ್ ಟ್ಯಾಂಕರ್ ಗೆ ಡಿಕ್ಕಿ ಹೊಡೆದಿದೆ. ಮೂರು ಮಂದಿ ಸ್ಥಳದಲ್ಲೇ ಮೃತಪಟ್ಟರೆ, ಒಬ್ಬರು ಆಸ್ಪತ್ರೆಯಲ್ಲಿ ಮೃತಪಟ್ಟರು ಎಂದು ತಿಳಿದುಬಂದಿದೆ.

ಮೃತರೆಲ್ಲರೂ ಭಟ್ಕಳದ ಗಾಂಧಿನಗರದ ನಿವಾಸಿಗಳು ಎಂದು ಗುರುತಿಸಲಾಗಿದೆ. ಮೃತರನ್ನು ಗೋವಿಂದ, ಅವರ ಪತ್ನಿ ಪದ್ಮಾವತಿ, ಮಕ್ಕಳಾದ ನಾಗರಾಜ ಮತ್ತು ಗಣೇಶ ಮೃತಪಟ್ಟಿದ್ದಾರೆ.

ಗಾಯಾಳುಗಳಲ್ಲಿ ಶಿವಾನಂದ ಸ್ಥಿತಿ ಗಂಭೀರವಾಗಿದ್ದು, ಅವರ ಪತ್ನಿ ಜ್ಯೋತಿ ಮತ್ತು ಆಕೆ ಇಬ್ಬರು ಮಕ್ಕಳು ಕೂಡ ಆಸ್ಪತ್ರೆಗೆ ದಾಖಲಾಗಿದ್ದಾರೆ.

ಬಾಡಿಗೆ ವಾಹನದಲ್ಲಿ ವಿವಿಧ ದೇವಾಲಯಗಳ ದರ್ಶನಕ್ಕೆ ಎರಡು ಕುಟುಂಬಗಳು ತೆರಳುತ್ತಿದ್ದ ವೇಳೆ ಈ ಘಟನೆ ನಡೆದಿದೆ. ಇವರು ಧರ್ಮಸ್ಥಳಕ್ಕೆ ಭೇಟಿ ನೀಡಿ ಅಲ್ಲಿಂದ ಭಟ್ಕಳಕ್ಕೆ ತೆರಳುತ್ತಿದ್ದಾಗ ಈ ಘಟನೆ ನಡೆದಿದೆ.

See also  ಕಡಲಬ್ಬರಕ್ಕೆ ತತ್ತರಿಸಿದ ಕರಾವಳಿ: 6 ಬೋಟ್ ಗಳು ನೀರುಪಾಲು
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published.

187
Subscribe to our Brand New YouTube Channel

Subscribe Newsletter

Get latest news karnataka updates on your email.

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು