News Kannada
Friday, December 02 2022

ಕರಾವಳಿ

ಕೇಂದ್ರ ಸರ್ಕಾರ ತಾರತಮ್ಯ ನೀತಿ ವಿರೋಧಿಸಿ ಕಾಂಗ್ರೆಸ್ ಪ್ರತಿಭಟನೆ

Photo Credit :

ಕೇಂದ್ರ ಸರ್ಕಾರ ತಾರತಮ್ಯ ನೀತಿ ವಿರೋಧಿಸಿ ಕಾಂಗ್ರೆಸ್ ಪ್ರತಿಭಟನೆ

ಬೆಳ್ತಂಗಡಿ: ಅತಿವೃಷ್ಟಿ ಹಾಗೂ ಪ್ರವಾಹದಿಂದ ತಾಲೂಕಿನ ಹಲವೆಡೆ ಸುಮಾರು 500 ಕೋಟಿ ರೂ.ಗಳಷ್ಟು ನಷ್ಟವಾಗಿದ್ದು, ಇದನ್ನು ವೀಕ್ಷಿಸಲು ಕೇಂದ್ರದ ತಂಡ ತಾಲೂಕಿಗೆ ಬರದೆ ಬೇರೆ ಜಿಲ್ಲೆಗಳಿಗೆ ಬಂದು ಹೋಗಿದ್ದು, ಇದರಲ್ಲಿ ತಾಲೂಕಿನ ನೆರೆ ಸಂತ್ರಸ್ತರನ್ನು ಕೇಂದ್ರ ಸರಕಾರ ಕಡೆಗಣಿಸಿರುವುದನ್ನು ಕಾಂಗ್ರೆಸ್ ಖಂಡಿಸುತ್ತದೆ ಎಂದು ಮಾಜಿ ಶಾಸಕ ಕೆ. ವಸಂತ ಬಂಗೇರ ಹೇಳಿದ್ದಾರೆ.

ಅವರು ಗುರುವಾರ ಕಿರಿಯವಿಧಾನಸೌಧದ ಬಳಿ ತಾಲೂಕಿನ ನೆರೆಸಂತ್ರಸ್ತರಿಗೆ ಅನ್ಯಾಯವಾಗಿರುವುದು ಮತ್ತು ಪರಿಹಾರ ವಿತರಣೆಯಲ್ಲಿ ತಾರತಮ್ಯ ಮಾಡುವುದರ ವಿರುದ್ಧ ನಡೆದ ಪ್ರತಿಭಟನೆಯಲ್ಲಿ ಮಾತನಾಡಿದರು.

2008ರಲ್ಲಿ ಜಿಲ್ಲೆಯಲ್ಲಿ ನೆರೆಪ್ರವಾಹ ಬಂದಾಗ ಆಗಿನ ಪ್ರಧಾನಿ ಮನಮೋಹನ್ ಸಿಂಗ್‍ರವರು ತಕ್ಷಣವಾಗಿ 1600ಕೋಟಿ ರೂ. ಬಿಡುಗಡೆ ಮಾಡಿದ್ದರು. ಆದರೆ ಈಗಿನ ಕೇಂದ್ರ ಸರಕಾರ ಪ್ರವಾಹ ಬಂದು 15 ದಿನ ಕಳೆದರೂ ಯಾವುದೇ ಪರಿಹಾರ ನೀಡಿಲ್ಲ. ತಾಲೂಕಿನಲ್ಲಿ ಪ್ರವಾಹ ಸಂತ್ರಸ್ತರಿಗೆ ದಾನಿಗಳು ಅನೇಕ ರೂಪದಲ್ಲಿ ದಾನ ನೀಡುತ್ತಿದ್ದು, ಇಲ್ಲಿನ ಶಾಸಕರು ಅನುದಾನ ಹಂಚಿಕೆಯಲ್ಲಿ ರಾಜಕೀಯ ಮಾಡುವುದಲ್ಲದೆ ಅಲ್ಪಸಂಖ್ಯಾತರ ಪ್ರದೇಶಕ್ಕೆ ಹೋಗದೇ ಅಲ್ಪಸಂಖ್ಯಾತರನ್ನು ನಿರ್ಲಕ್ಷ್ಯ ವಹಿಸುತ್ತಿದ್ದಾರೆ. ಇದನ್ನು ಕಾಂಗ್ರೆಸ್ ಪಕ್ಷ ಸಹಿಸುವುದಿಲ್ಲ, ಮುಂದೆ ಎಲ್ಲರಿಗೂ ಸಮಾನವಾಗಿ ಪರಿಹಾರ ನೀಡದಿದ್ದರೆ ಉಗ್ರ ಹೋರಾಟ ಮಾಡಲಾಗುವುದು ಎಂದರು.

ಇಲ್ಲಿನ ತಹಶಿಲ್ದಾರ್ ಮತ್ತು ಅಧಿಕಾರಿ ವರ್ಗದವರು ಪ್ರಾಮಾಣಿಕವಾಗಿ ಶ್ರಮಿಸುತ್ತಿದ್ದು, ಇವರನ್ನು ದುರುಪಯೋಗಪಡಿಸಿಕೊಳ್ಳುವುದು ಬೇಡ ಎಂದರು.

ಬಳಿಕ ರಾಜ್ಯಪಾಲರಿಗೆ ಹಾಗೂ ಜಿಲ್ಲಾಧಿಕಾರಿಗಳಿಗೆ ಪರಿಹಾರ ನೀಡುವಲ್ಲಿ ತಾರತಮ್ಯ ಮಾಡುವ ಬಗ್ಗೆ ತನಿಖೆ ನಡೆಸುವಂತೆ ತಹಶಿಲ್ದಾರ್ ಮೂಲಕ ಮನವಿ ನೀಡಿದರು.

 

See also  ಪವರ್ ಲಿಫ್ಟಿಂಗ್ ಚಾಂಪಿಯನ್ ಶಿಪ್: ಆಳ್ವಾಸ್ ಗೆ ಚಿನ್ನದ ಪದಕ
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published.

154
Deepak Atavale

Read More Articles

Subscribe Newsletter

Get latest news karnataka updates on your email.

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು