News Kannada
Tuesday, November 29 2022

ಕರಾವಳಿ

ಡಿಕೆಶಿ ಬಂಧನ ಖಂಡಿಸಿ ಬೆಳ್ತಂಗಡಿಯಲ್ಲಿ ಕಾಂಗ್ರೆಸ್ ಪ್ರತಿಭಟನೆ - 1 min read

Photo Credit :

ಡಿಕೆಶಿ ಬಂಧನ ಖಂಡಿಸಿ ಬೆಳ್ತಂಗಡಿಯಲ್ಲಿ ಕಾಂಗ್ರೆಸ್ ಪ್ರತಿಭಟನೆ

ಬೆಳ್ತಂಗಡಿ: ಕಾಂಗ್ರೆಸ್‍ನ ಡಿ.ಕೆ.ಶಿವಕುಮಾರ್ ಅವರನ್ನು ಜಾರಿ ನಿರ್ದೇಶನಾಲಯ(ಇಡಿ) ಅಧಿಕಾರಿಗಳು ಬಂಧಿಸಿರುವುದನ್ನು ಖಂಡಿಸಿ ಬೆಳ್ತಂಗಡಿ ಬ್ಲಾಕ್ ಕಾಂಗ್ರೆಸ್ ಹಾಗೂ ಯುವ ಕಾಂಗ್ರೆಸ್ ಕಾರ್ಯಕರ್ತರು ಬುಧವಾರ ಬೆಳ್ತಂಗಡಿ ಮುಖ್ಯರಸ್ತೆಯನ್ನು ತಡೆದು ಪ್ರತಿಭಟನೆ ನಡೆಸಿದರು. ಪ್ರತಿಭಟನೆ ನಡೆಸುತ್ತಿದ್ದ ಕಾರ್ಯಕರ್ತರನ್ನು ಬೆಳ್ತಂಗಡಿ ಪೊಲೀಸರು ಬಂಧಿಸಿ ಬಿಡುಗಡೆಗೊಳಿಸಿದರು. 

ಪ್ರಾರಂಭದಲ್ಲಿ ಬೆಳ್ತಂಗಡಿ ಮೂರು ಮಾರ್ಗದ ಬಳಿ ರಸ್ತೆ ತಡೆ ಪ್ರತಿಭಟನೆ ನಡೆಸಿದ ಕಾರ್ಯಕರ್ತರು ಬಳಿಕ ಬಸ್ ನಿಲ್ದಾಣದ ಬಳಿ ರಸ್ತೆ ತಡೆ ನಡೆಸಿದರು. ಪೊಲೀಸರು ಅಲ್ಲಿ ಕಾರ್ಯಕರ್ತರನ್ನು ಬಂಧಿಸಿದರು. ಕೇಂದ್ರ ಹಾಗೂ ರಾಜ್ಯ ಸರಕಾರ, ಬಿಜೆಪಿ ನಾಯಕರ ವಿರುದ್ಧ ಘೋಷಣೆಗಳನ್ನು ಕೂಗಲಾಯಿತು. 

ಪ್ರತಿಭಟನಾಕಾರರನ್ನು ಉದ್ದೇಶಿಸಿ ಬೆಳ್ತಂಗಡಿ ಎಪಿಎಂಸಿ ಅಧ್ಯಕ್ಷ ಕೇಶವ ಪಿ.ಬೆಳಾಲು ಮಾತನಾಡಿ, ಬಿಜೆಪಿ ಸರಕಾರವು ತನ್ನ ವೈಫಲ್ಯಗಳನ್ನು ಮುಚ್ಚುವ ದೃಷ್ಟಿಯಿಂದ ಇಂತಹ ಹೀನ ಕೃತ್ಯಗಳನ್ನು ಮಾಡುತ್ತಿದೆ. ತನಿಖಾ ಸಂಸ್ಥೆಗಳನ್ನು ದುರ್ಬಳಕೆ ಮಾಡಿ ಕಾಂಗ್ರೆಸ್ ನಾಯಕರ ಶಕ್ತಿ ಕುಗ್ಗಿಸುವ ಕೆಲಸ ಮಾಡುತ್ತಿದ್ದಾರೆ. ಆದರೆ ಬಿಜೆಪಿಯು ಇದೇ ರೀತಿ ಮುಂದುವರಿದಲ್ಲಿ ಅದರ ವಿರುದ್ಧ ಉಗ್ರ ಪ್ರತಿಭಟನೆ ಮಾಡಲಾಗುವುದು ಎಂದು ಎಚ್ಚರಿಸಿದರು.

 ಬೆಳ್ತಂಗಡಿ ನಗರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ರಾಜಶೇಖರ ಅಜ್ರಿ ಮಾತನಾಡಿ, ಬಿಜೆಪಿಯು ತನ್ನ ಅಧಿಕಾರ ದುರ್ಬಳಕೆ ಮಾಡಿಕೊಂಡು ಹೀನಕೃತ್ಯಗಳನ್ನು ನಡೆಸುತ್ತಿದೆ. ಕಾಂಗ್ರೆಸ್ ನಾಯಕ ಡಿ.ಕೆ.ಶಿವಕುಮಾರ್ ಅವರನ್ನು ಬಿಡುಗಡೆಗೊಳಿಸಿ ಪ್ರಜಾಪ್ರಭುತ್ವವನ್ನು ಎತ್ತಿ ಹಿಡಿಯುವ ಕೆಲಸ ಮಾಡಬೇಕಿದೆ ಎಂದು ತಿಳಿಸಿದರು. 

ಪ್ರತಿಭಟನೆಯಲ್ಲಿ ಜಿ.ಪಂ.ಸದಸ್ಯ ಶೇಖರ ಕುಕ್ಕೇಡಿ, ಮಾಜಿ ಸದಸ್ಯ ಶೈಲೇಶ್‍ಕುಮಾರ್ ಕುರ್ತೋಡಿ, ಬೆಳ್ತಂಗಡಿ ಯುವ ಕಾಂಗ್ರೆಸ್ ಅಭಿನಂದನ್ ಹರೀಶ್, ಕೆಪಿಸಿಸಿ ಮುಂದಾಳು ರಾಮಚಂದ್ರ ಗೌಡ, ತಾ.ಪಂ.ಸದಸ್ಯ ಪ್ರವೀಣ್ ಗೌಡ, ನ.ಪಂ.ಸದಸ್ಯ ಜಗದೀಶ್ ಡಿ., ಪ್ರಮುಖರಾದ ಅನಿಲ್ ಪೈ, ಬಿ.ಕೆ.ವಸಂತ್, ನಾಗರಾಜ್ ಲಾೈಲ, ಚಂದು ಎಲ್., ಅಶ್ರಫ್ ನೆರಿಯ, ನೇಮಿರಾಜ್ ಕಿಲ್ಲೂರು, ಜೆಸಿಂತಾ ಮೋನಿಸ್, ಪ್ರಭಾಕರ ಓಡಿಲ್ನಾಳ, ಸಲೀಂ ಗುರುವಾಯನಕೆರೆ, ಅನೂಪ್ ಪಾಯಸ್, ಅಬ್ದುಲ್ ರಹಿಮಾನ್ ಮೊದಲಾದವರು ಪಾಲ್ಗೊಂಡಿದ್ದರು.

 

See also  ಶಾಲೆಗೆ ಹೋಗಲು ಹಿಂದೇಟು: ವಿದ್ಯಾರ್ಥಿ ಆತ್ಮಹತ್ಯೆಗೆ ಶರಣು
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published.

193
Deevith S K

Read More Articles

Subscribe Newsletter

Get latest news karnataka updates on your email.

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು