News Kannada
Wednesday, December 07 2022

ಕರಾವಳಿ

ನದಿಗಳಿಗೆ ತ್ಯಾಜ್ಯ ನೀರು: ಕಠಿಣ ಕ್ರಮಕ್ಕೆ ತಾಲೂಕು ಪಂಚಾಯಿತಿ ಸಭೆಯಲ್ಲಿ ನಿರ್ಧಾರ

Photo Credit :

ನದಿಗಳಿಗೆ ತ್ಯಾಜ್ಯ ನೀರು: ಕಠಿಣ ಕ್ರಮಕ್ಕೆ ತಾಲೂಕು ಪಂಚಾಯಿತಿ ಸಭೆಯಲ್ಲಿ ನಿರ್ಧಾರ

ಸುಳ್ಯ: ಸುಬ್ರಹ್ಮಣ್ಯದಲ್ಲಿ ಲಾಡ್ಜ್ ಗಳಿಂದ ಮತ್ತು ತಾಲೂಕಿನ ಇತರ ಕೆಲವು ಕಡೆಗಳಲ್ಲಿ ರಬ್ಬರ್ ಕಾರ್ಖಾನೆಗಳಿಂದ ತ್ಯಾಜ್ಯ ನೀರು ಹರಿಯ ಬಿಟ್ಟು ನದಿಯ ನೀರು ಕಲುಷಿತಗೊಳಿಸುವುದರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲು ಸುಳ್ಯ ತಾಲೂಕು ಪಂಚಾಯಿತಿ ಸಭೆಯಲ್ಲಿ ನಿರ್ಣಯ ಕೈಗೊಳ್ಳಲಾಗಿದೆ.

ತಾಲೂಕು ಪಂಚಾಯಿತಿ ಅಧ್ಯಕ್ಷ ಚನಿಯ ಕಲ್ತಡ್ಕ ಅಧ್ಯಕ್ಷತೆಯಲ್ಲಿ ನಡೆದ ಸಾಮಾನ್ಯ ಸಭೆಯಲ್ಲಿ ಈ ಕುರಿತು ಗಂಭೀರ ಚರ್ಚೆ ನಡೆಯಿತು. ಸಭೆಯಲ್ಲಿ ವಿಷಯ ಪ್ರಸ್ತಾಪಿಸಿದ ಸದಸ್ಯ ಅಶೋಕ್ ನೆಕ್ರಾಜೆ, ಸುಬ್ರಹ್ಮಣ್ಯದ ಲಾಡ್ಜ್ ಗಳಿಂದ ತ್ಯಾಜ್ಯ ನೀರು ನದಿಗೆ ಹರಿಯುತ್ತಿರುವುದರ ಕುರಿತು ಹಲವು ತಿಂಗಳ ಹಿಂದೆಯೇ ಸಭೆಯಲ್ಲಿ ಪ್ರಸ್ತಾಪಿಸಿ ಕ್ರಮಕ್ಕೆ ಆಗ್ರಹಿಸಿದರೂ ಯಾವುದೇ ಕ್ರಮ ಕೈಗೊಂಡಿಲ್ಲ ಎಂದರು. ಈ ಕುರಿತು ಪ್ರತಿಕ್ರಿಯಿಸಿದ ತಾಲೂಕು ಆರೋಗ್ಯಾಧಿಕಾರಿ ಸುಬ್ರಹ್ಮಣ್ಯ ಮತ್ತು ಸುಳ್ಯದಲ್ಲಿ ನದಿಗಳಿಗೆ ತ್ಯಾಜ್ಯ ಮತ್ತು ಕೊಳಚೆ ಬಿಡುವುದು ಕಂಡು ಬಂದಿದೆ. ಈ ಕುರಿತು ಸಂಬಂಧಪಟ್ಟವರಿಗೆ ವರದಿ ಸಲ್ಲಿಸಲಾಗಿದ್ದು. ಗ್ರಾಮ ಪಂಚಾಯಿತಿ ಅಥವಾ ನಗರ ಪಂಚಾಯಿತಿ ಈ ಕುರಿತು ಕ್ರಮ ಕೈಗೊಳ್ಳಬೇಕು ಎಂದು ಹೇಳಿದರು.

ಸುಬ್ರಹ್ಮಣ್ಯದಲ್ಲಿ ಕೊಳಚೆ ನೀರು ನದಿಗೆ ಬಿಡುವುದರ ಬಗ್ಗೆ ಜಿಲ್ಲಾಧಿಕಾರಿಯವರ ಗಮನಕ್ಕೂ ಬಂದಿದೆ. ಹಿಂದಿನ ಜಿಲ್ಲಾಧಿಕಾರಿ ಪರಿಶೀಲನೆ ನಡೆಸಿದ್ದರು ಎಂದು ತಾ.ಪಂ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಭವಾನಿಶಂಕರ ಸಭೆಗೆ ತಿಳಿಸಿದರು. ನೀರು ಕಲುಷಿತಗೊಂಡು ಆರೋಗ್ಯದ ಸಮಸ್ಯೆ ಉಂಟಾಗುವ ಗಂಭೀರ ವಿಷಯವಾಗಿದ್ದರೂ ಅಧಿಕಾರಿಗಳು ಕೇವಲ ನೋಟಿಸ್ ನೀಡಿ ಜವಾಬ್ದಾರಿಯಿಂದ ಜಾರಿಕೊಳ್ಳುತ್ತಿದ್ದಾರೆ ಎಂದು ಸದಸ್ಯರಾದ ಅಶೋಕ್ ನೆಕ್ರಾಜೆ, ಅಬ್ದುಲ್ ಗಫೂರ್ ಹೇಳಿದರು. ಕೆಲವು ಕಡೆ ರಬ್ಬರ್ ಫ್ಯಾಕ್ಟರಿಗಳಿಂದಲೂ ಕೊಳಚೆ ನದಿಗೆ ಬಿಡುವ ಪ್ರಸಂಗ ಕಂಡು ಬಂದಿದ್ದು ಇದರ ಕುರಿತು ಸೂಕ್ತವಾದ ಕ್ರಮ ಜರುಗಿಸಬೇಕು ಎಂದು ಜಿ.ಪಂ.ಸದಸ್ಯ ಹರೀಶ್ ಕಂಜಿಪಿಲಿ ಒತ್ತಾಯಿಸಿದರು. ಈ ಕುರಿತು ಕಟ್ಟು ನಿಟ್ಟಿನ ಕ್ರಮಕ್ಕೆ ಸೂಚಿಸಿದ ಅಧ್ಯಕ್ಷ ಚನಿಯ ಕಲ್ತಡ್ಕ ಈ ಕುರಿತು ಸಂಬಂಧಪಟ್ಟ ಅಧಿಕಾರಿಗಳ ಮತ್ತು ಜನಪ್ರತಿನಿಧಿಗಳ ಸಭೆ ಕರೆದು ಚಚಿಸಿ ಕ್ರಮ ಕೈಗೊಳ್ಳುವುದಾಗಿ ಹೇಳಿದರು.

See also  ಆಳ್ವಾಸ್ ಇಂಜಿನಿಯರಿಂಗ್ ಕಾಲೇಜಿನಲ್ಲಿ ಅತಿಥಿ ಉಪನ್ಯಾಸ
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published.

180

Subscribe Newsletter

Get latest news karnataka updates on your email.

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು