News Kannada
Wednesday, November 30 2022

ಕರಾವಳಿ

ಬಿ.ಸಿ.ರೋಡ್: ರಾ.ಹೆ. ಅವ್ಯವಸ್ಥೆ, ಮೋಟಾರ್ ವಾಹನ ಕಾಯ್ದೆಗೆ ವಿರುದ್ಧ ಪ್ರತಿಭಟನಾ ಸಭೆ - 1 min read

Photo Credit :

ಬಿ.ಸಿ.ರೋಡ್: ರಾ.ಹೆ. ಅವ್ಯವಸ್ಥೆ, ಮೋಟಾರ್ ವಾಹನ ಕಾಯ್ದೆಗೆ ವಿರುದ್ಧ ಪ್ರತಿಭಟನಾ ಸಭೆ

ಬಂಟ್ವಾಳ: ದ.ಕ.ಜಿಲ್ಲೆಯಾದ್ಯಂತ ರಾಷ್ಟ್ರೀಯ ಹೆದ್ದಾರಿಯ ಅವ್ಯವಸ್ಥೆ ಹಾಗೂ ಮೋಟಾರ್ ವಾಹನ ಕಾಯಿದೆ ನೆಪದಲ್ಲಿ ಚಾಲಕರಿಗೆ ದಂಡ ವಿಧಿಸುವ ವಿರುದ್ಧ ದ.ಕ. ಜಿಲ್ಲಾ ಟೂರಿಸ್ಟ್ ಕಾರು ಮತ್ತು ವ್ಯಾನು ಚಾಲಕರ ಸಂಘ ಇದರ ಬಂಟ್ವಾಳ ಘಟಕದ ವತಿಯಿಂದ ಶನಿವಾರ ಬಿ.ಸಿ.ರೋಡಿನಲ್ಲಿ ಪ್ರತಿಭಟನಾ ಸಭೆ ನಡೆಯಿತು.

ದ.ಕ. ಜಿಲ್ಲಾ ಟೂರಿಸ್ಟ್ ಕಾರು ಮತ್ತು ವ್ಯಾನು ಚಾಲಕರ ಸಂಘ ಇದರ ಬಂಟ್ವಾಳ ಘಟಕದ ಅಧ್ಯಕ್ಷ ಬಿ.ಎಂ.ಪ್ರಭಾಕರ ದೈವಗುಡ್ಡೆ ಪ್ರತಿಭಟನಾ ಸಭೆಯಲ್ಲಿ ಮಾತನಾಡಿ, ದ.ಕ. ಜಿಲ್ಲೆಯಾದ್ಯಂತ ಎಲ್ಲ ರಾಷ್ಟ್ರೀಯ ಹೆದ್ದಾರಿಗಳು ಸಂಪೂರ್ಣವಾಗಿ ಕೆಟ್ಟು ಹೋಗಿದ್ದು, ವಾಹನ ಸಂಚಾರಕ್ಕೆ ಯೋಗ್ಯವಾಗಿಲ್ಲ. ಸರಕಾರವು ರಾಷ್ಟ್ರೀಯ ಹೆದ್ದಾರಿಗಳ ಅಭಿವೃದ್ಧಿಗಾಗಿ ಸಾವಿರಾರು ಕೋಟಿ. ರೂ. ಖರ್ಚು ಮಾಡುತ್ತಿದೆ. ರಸ್ತೆ ಕಾಮಗಾರಿಯನ್ನು ಯೋಗ್ಯ ಗುತ್ತಿಗೆದಾರರಿಗೆ ನೀಡದೆ ಸ್ವ-ಹಿತಕ್ಕಾಗಿ ತಮಗೆ ಅನುಕೂಲವಾಗುವ ಗುತ್ತಿಗೆದಾರರಿಗೆ ನೀಡಿ ಜನರ ತೆರಿಗೆಯ ಹಣವನ್ನು ಪೋಲು ಮಾಡುತ್ತಿದೆ ಎಂದು ಆರೋಪಿಸಿದರು.

ಹೆದ್ದಾರಿ ಕಾಮಗಾರಿಗಳಿಗೆ ಹಣ ಬಿಡುಗಡೆ ಮಾಡುವಾಗ ಇರುವ ಕಾಳಜಿ, ರಸ್ತೆ ನಿರ್ಮಾಣಗೊಂಡ ನಂತರ ಕಾಮಗಾರಿಯನ್ನು ಪರಿಶೀಲನೆ ಮಾಡುವುದಿಲ್ಲ. ರಸ್ತೆ ಕಾಮಗಾರಿಯು ಎಪ್ರಿಲ್, ಮೇ ತಿಂಗಳಲ್ಲಿ ಪೂರ್ಣಗೊಳ್ಳುತ್ತದೆ. ನಂತರ ಜೂನ್ ತಿಂಗಳ ಮಳೆಯಲ್ಲಿ ರಸ್ತೆಯು ಪೂರ್ಣ ಕೆಟ್ಟು ಹೋಗುತ್ತದೆ. ಆದ್ದರಿಂದ ಈ ಕಳಪೆ ಕಾಮಗಾರಿಯ ಬಗ್ಗೆ ಜಿಲ್ಲಾಧಿಕಾರಿ ಅವರು ಕೂಡಲೇ ತನಿಖೆ ನಡೆಸಬೇಕು ಎಂದು ಅವರು ಒತ್ತಾಯಿಸಿದರು.

ಸಂಘದ ಪ್ರಧಾನ ಕಾರ್ಯದರ್ಶಿ ವಿನ್ಸೆಂಟ್ ರೊಡ್ರಿಗಸ್ ಪರ್ಲ ಮಾತನಾಡಿ, ಜಿಲ್ಲೆಯಲ್ಲಿ ರಾಷ್ಟ್ರೀಯ ಹೆದ್ದಾರಿಗೆ ಪ್ರತಿ ವರ್ಷ ನೂರಾರು ಕೋಟಿ ರೂ. ಹಣ ಖರ್ಚಾಗುತ್ತದೆ. ಆದರೆ, ರಸ್ತೆಯ ಬಾಳ್ವಿಕೆಯು ಮಾತ್ರ ಬರೇ ಒಂದು ತಿಂಗಳು ಎಂದು ದೂರಿದರು.

ವಾಹನಗಳನ್ನು ಇನ್ಸೂರೆನ್ಸ್ ಇಲ್ಲದೆ ಓಡಿಸುವುದು, ಲೈಸನ್ಸ್ ಹೊಂದಿರದೆ ಚಾಲನೆ ಮಾಡುವುದು, ಅಮಲು ಪದಾರ್ಥ ಸೇವನೆ ಮಾಡಿ ವಾಹನ ಚಲಾಯಿಸುತ್ತಿರುವವರ ಮೇಲೆ ಮೋಟಾರ್ ವಾಹನ ಕಾಯಿದೆಯಂತೆ ಕಾನೂನು ಕ್ರಮಗಳನ್ನು ಇಲಾಖೆಯು ಕೈಗೊಳ್ಳುವುದಕ್ಕೆ ನಮ್ಮ ವಿರೋಧವಿಲ್ಲ. ಆದರೆ ಸಣ್ಣ, ಪುಟ್ಟ ತಪ್ಪುಗಳಿಗೆ ಸಾವಿರಾರು ರೂ.ದಂಡ ವಿಧಿಸುವುದನ್ನು ಸಂಘಟನೆಯು ತೀವ್ರವಾಗಿ ಖಂಡಿಸುತ್ತದೆ ಎಂದು ಹೇಳಿದರು.

ಪ್ರತಿಭಟನೆಯ ಬಳಿಕ ಬಂಟ್ವಾಳ ತಹಶೀಲ್ದಾರರ ಮೂಲಕ ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಲಾಯಿತು.

See also  ಹಾಲು ಕುಡಿಯುತ್ತಿದ್ದ ಹಸುಗೂಸು ಮೃತ್ಯು
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published.

153
Mounesh V

Read More Articles

Subscribe Newsletter

Get latest news karnataka updates on your email.

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು