ಬಂಟ್ವಾಳ: ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿ ಅವರ ಕನಸಿನ ಯೋಜನೆಯಲ್ಲೊಂದಾದ ಸುಮಾರು 20 ಕೋಟಿ ರೂ. ಅಂದಾಜು ವೆಚ್ಚದ ಬಿ.ಸಿ.ರೋಡ್ ಸುಂದರೀಕರಣ ಯೋಜನೆಗೆ ಸೋಮವಾರ ಚಾಲನೆ ನೀಡಲಾಯಿತು.
ದ.ಕ.ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಶಿಲಾನ್ಯಾಸ ಅವರು ಬಿ.ಸಿ.ರೋಡಿನ ಖಾಸಗಿ ಬಸ್ ನಿಲ್ದಾಣದ ಮುಂಭಾಗದ ಮೇಲ್ಸೆತುವೆಯ ಅಡಿಭಾಗದಲ್ಲಿ ಯೋಜನೆಗೆ ಶಿಲಾನ್ಯಾಸ ನೆರವೇರಿಸಿದರು.ಸಂಸದ ನಳಿನ್ ಕುಮಾರ್ ಕಟೀಲ್, ಕಂದಾಯ ಸಚಿವ ಆರ್. ಅಶೋಕ್, ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿ ಅವರು ಶಿಲಾನ್ಯಾಸಕ್ಕೆ ಸಾಥ್ ನೀಡಿದರು.
ಈ ಯೋಜನೆಗೆ10 ಕೋಟಿ ರೂ ಸಿ.ಎಸ್.ಆರ್ ಫಂಡ್ ನಿಂದ ದೊರಕಲಿದ್ದರೆ, ಮುಖ್ಯಮಂತ್ರಿಯವರು ಈಗಾಗಲೇ 5 ಕೋಟಿ ರೂಗಳನ್ನು ಘೋಷಿಸಿದ್ದಾರೆ. ಉಳಿದದ್ದನ್ನು ಶಾಸಕರ ನಿಧಿಯಿಂದ ಒದಗಿಸಲಾಗುತ್ತದೆ.
ಶಾಸಕರುಗಳಾದ ವೇದವ್ಯಾಸ ಕಾಮತ್, ಡಾ. ಭರತ್ ಶೆಟ್ಟಿ, ಸಂಜೀವ ಮಠಂದೂರು, ಮಾಜಿ ಸಚಿವ ನಾಗರಾಜ ಶೆಟ್ಟಿ, ಮಾಜಿ ಶಾಸಕರಾದ ರುಕ್ಮಯಪೂಜಾರಿ, ಪದ್ಮನಾಭ ಕೊಟ್ಟಾರಿ, ಜಿಪಂ ಅಧ್ಯಕ್ಷೆ ಮೀನಾಕ್ಷಿ ಶಾಂತಿಗೂಡು, ಉಪಾಧ್ಯಕ್ಷೆ ಕಸ್ತೂರಿ ಪಂಜ, ಜಿ.ಪಂ.ಸದಸ್ಯ ರಾದ ತುಂಗಪ್ಪ ಬಂಗೇರ, ಕಮಾಲಾಕ್ಷಿ ಕೆ.ಪೂಜಾರಿ, ರವೀಂದ್ರಕಂಬಳಿ, ತಾ.ಪಂ.ಅಧ್ಯಕ್ಷ ಚಂದ್ರಹಾಸ ಕರ್ಕೇರ, ಉಪಾಧ್ಯಕ್ಷ ಅಬ್ಬಾಸ್ ಅಲಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಲಕ್ಮೀಪ್ರಸಾದ್, ಪುತ್ತೂರು ಡಿ.ವೈಎಸ್ ಪಿ ದಿನಕರ ಶೆಟ್ಟಿ, ಜಿ.ಪಂ.ಸಿಇಒ ಡಾ .ಆರ್ ಸೆಲ್ವಮಣಿ, ಎನ್.ಎಚ್.ಎ.ಐ.ನ ಪ್ರಾಜೆಕ್ಟ್ ಡೈರೆಕ್ಟರ್ ಶಿಶುಮೋಹನ್ , ತಹಶೀಲ್ದಾರ್ ರಶ್ಮಿ ಮತ್ತಿತರರು ಹಾಜರಿದ್ದರು.