News Kannada
Monday, September 26 2022

ಕರಾವಳಿ

ರಾಜ್ಯದ ಪ್ರವಾಹ ಪರಿಸ್ಥಿತಿ ಯಶಸ್ವಿಯಾಗಿ ನಿರ್ವಹಣೆ: ಆರ್. ಅಶೋಕ್ - 1 min read

Photo Credit :

ರಾಜ್ಯದ ಪ್ರವಾಹ ಪರಿಸ್ಥಿತಿ ಯಶಸ್ವಿಯಾಗಿ ನಿರ್ವಹಣೆ: ಆರ್. ಅಶೋಕ್

ಬಂಟ್ವಾಳ:  ರಾಜ್ಯದ ಪ್ರವಾಹ ಪರಿಸ್ಥಿತಿಯನ್ನು ಸರಕಾರ ಯಶಸ್ವಿಯಾಗಿ ನಿಭಾಯಿಸಿದ್ದು, ಸುಮಾರು 250 ಕೋ.ರೂ.ಗಳಲ್ಲಿ ಪ್ರತಿ ಸಂತ್ರಸ್ತ ಕುಟುಂಬಗಳಿಗೆ 10 ಸಾವಿರ ರೂ.ಗಳ ತಕ್ಷಣದ ಪರಿಹಾರ ನೀಡಿದೆ. ಮನೆ ಕಳೆದುಕೊಂಡವರಿಗೆ 5 ಲಕ್ಷ ರೂ.ಗಳ ಪರಿಹಾರ ಘೋಷಿಸಿ ಈಗಾಗಲೇ 50 ಶೇ.ಕ್ಕೂ ಅಧಿಕ ಮಂದಿಗೆ ಪ್ರಥಮಹಂತವಾಗಿ 1 ಲಕ್ಷ ರೂ.ಗಳ ಪರಿಹಾರ ನೀಡಲಾಗಿದೆ ಎಂದು ರಾಜ್ಯದ ಕಂದಾಯ ಹಾಗೂ ಪೌರಾಡಳಿತ ಸಚಿವ ಆರ್ ಆಶೋಕ್ ಹೇಳಿದ್ದಾರೆ.

ಸೋಮವಾರ ಬಿ.ಸಿ.ರೋಡಿನ ಮಿನಿ ವಿಧಾನಸೌಧದ ಮುಂಭಾಗದಲ್ಲಿ ಬಂಟ್ವಾಳ ತಾಲೂಕಿನ 94ಸಿ ಹಾಗೂ 94ಸಿಸಿ ಫಲಾನುಭವಿಗಳಿಗೆ ಹಕ್ಕುಪತ್ರ ವಿತರಿಸಿ ಮಾತನಾಡಿದ ಅವರು, ಮಧ್ಯವರ್ತಿಗಳ ಹಾವಳಿಯನ್ನು ತಪ್ಪಿಸಲು ಪರಿಹಾರ ಧನವನ್ನು ಕೂಡ  ಚೆಕ್ಕಿನ ಬದಲು ಆರ್‌ಟಿಜಿಎಸ್ ಮೂಲಕ ಬ್ಯಾಂಕ್ ಖಾತೆಗೆ ಜಮೆ ಮಾಡಲಾಗಿದೆ ಎಂದರು.

ರಾಜ್ಯದ ನಿವೇಶನ ರಹಿತ ಕುಟುಂಬಗಳಿಗೆ ಭೂಮಿ ನೀಡಲು ರಾಜ್ಯ ಸರಕಾರ ಬದ್ಧವಾಗಿದೆ, ಮುಂದಿನ ನವೆಂಬರ್ ಅಂತ್ಯದೊಳಗೆ ರಾಜ್ಯದ ಸುಮಾರು 15 ಸಾವಿರಕ್ಕೂ ಅಧಿಕ ಫಲಾನುಭವಿಗಳಿಗೆ 94ಸಿ ಹಾಗೂ 94ಸಿಸಿ ಯೋಜನೆಯ ಹಕ್ಕುಪತ್ರ ವಿತರಿಸುವ ನಿಟ್ಟಿನಲ್ಲಿ ಕ್ರಮ ಕೈಗೊಳ್ಳಲಾಗಿದೆ ಎಂದು  ಸಚಿವ ಆರ್.ಅಶೋಕ್ ಹೇಳಿದರು.

ಪ್ರವಾಹ ಸಂತ್ರಸ್ಥರ ನೆರವಿಗಾಗಿ ಈಗಾಗಲೇ 35 ಕೋ.ರೂ.ಗಳನ್ನು ಜಿಲ್ಲಾಧಿಕಾರಿಗಳ ಖಾತೆಗೆ ಜಮೆ ಮಾಡಲಾಗಿದೆ ಎಂದ ಅವರು, ದ.ಕ.ಜಿಲ್ಲೆಯಲ್ಲಿ 94ಸಿ ಯೋಜನೆಯ 1,07,242 ಅರ್ಜಿಗಳಲ್ಲಿ 40,992 ಮಂದಿ ಫಲಾನುಭವಿಗಳಿಗೆ ಹಕ್ಕುಪತ್ರ ವಿತರಿಸಲಾಗಿದ್ದರೆ, 94ಸಿಸಿ ಯೋಜನೆಯಲ್ಲಿ 40,245 ಅರ್ಜಿಗಳಲ್ಲಿ 23,609 ಹಕ್ಕುಪತ್ರ ವಿತರಣೆ ಮಾಡಲಾಗಿದೆ ಎಂದರು.

ಸ್ವಾತಂತ್ರ್ಯ ಬಂದು ಇಷ್ಟು ವರ್ಷ ವಾದರೂ ಸಾಮಾನ್ಯ ಜನರು ತುಂಡು ಭೂಮಿಯಲ್ಲಿ ನೆಲೆಸಲು ಅಲೆದಾಡುತ್ತಿದ್ದಾರೆ. ಈ ಬಗ್ಗೆ ನಮ್ಮ ಸರಕಾರ ವಿಶೇಷ ಮುತುವರ್ಜಿ ವಹಿಸಿದ್ದು,ನಿವೇಶನ ರಹಿತರಿಗೆ  ಶೀಘ್ರ  ನಿವೇಶನ ಕಲ್ಪಿಸಲಾಗುವುದು ಎಂದ ಸಚಿವರು,  ಅರಣ್ಯ ಪ್ರದೇಶದಲ್ಲಿ ಸುದೀರ್ಘ ಕಾಲದಿಂದ ವಾಸ್ತವ್ಯವಿರುವ ಜನರಿಗೆ ಆದೇ ಜಮೀನಿಗೆ ಹಕ್ಕುಪತ್ರ ನೀಡುವಂತೆ ಆದೇಶಿಸಲಾಗಿದೆ ಎಂದರು.

ದ.ಕ.ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಮಾತನಾಡಿ, ಬಡವರಿಗೆ ನಿವೇಶನ ನೀಡುವುದು ಪುಣ್ಯದ ಕಾರ್ಯವಾಗಿದೆ. ಡೀಮ್ಡ್ ಫಾರೆಸ್ಟ್, ಕುಮ್ಕಿ ಹಕ್ಕು, ಮೂಲಗೇಣಿ, ಗೇರುಲೀಝ್ ಮೊದಲಾದ ಭೂಮಿ ಹಕ್ಕಿನ ಗೊಂದಲಗಳ ಕುರಿತು ಸರಕಾರ ಶೀಘ್ರ ತೀರ್ಮಾನ ತೆಗೆದುಕೊಳ್ಳಬೇಕೆಂದರು. ಜತೆಗೆ ದ.ಕ.ಜಿಲ್ಲಾಧಿಕಾರಿ ಕಚೇರಿ ಸಂಕೀರ್ಣದ ಕಾಮಗಾರಿ ವೇಗ ಪಡೆಯುವ ನಿಟ್ಟಿನಲ್ಲಿ ಕಂದಾಯ ಸಚಿವರು ಸೂಕ್ತ ನಿರ್ದೇಶನ ನೀಡಬೇಕಿದೆ ಎಂದರು.

ಅಧ್ಯಕ್ಷತೆ ವಹಿಸಿದ್ದ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿಗುತ್ತು, ದ.ಕ.ಸಂಸದ ನಳಿನ್‌ಕುಮಾರ್ ಕಟೀಲು, ಶಾಸಕರಾದ ಡಿ.ವೇದವ್ಯಾಸ ಕಾಮತ್, ಸಂಜೀವ ಮಠಂದೂರು, ಜಿ.ಪಂ.ಅಧ್ಯಕ್ಷೆ ಮೀನಾಕ್ಷಿ ಶಾಂತಿಗೋಡು, ಉಪಾಧ್ಯಕ್ಷೆ ಕಸ್ತೂರಿ ಪಂಜ, ಸದಸ್ಯರಾದ ಎಂ.ತುಂಗಪ್ಪ ಬಂಗೇರ ಮೊದಲಾದವರು ಉಪಸ್ಥಿತರಿದ್ದರು.

See also  ಸಾರ್ವಜನಿಕ ಗಣೇಶೋತ್ಸವಕ್ಕೆ ಜಿಲ್ಲಾಡಳಿತ ಬ್ರೇಕ್ : ದ.ಕ‌
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published.

153
Mounesh V

Read More Articles
Subscribe to our Brand New YouTube Channel

Subscribe Newsletter

Get latest news karnataka updates on your email.

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು