ವಿದ್ಯಾಗಿರಿ: ಸ್ಪಿಯರ್‍ಹೆಡ್ ಮೀಡಿಯಾ ಪ್ರೈವೆಟ್ ಲಿಮಿಟೆಡ್ ಮತ್ತು ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಸ್ನಾತಕೋತ್ತರ ಮತ್ತು ಪದವಿ ಪತ್ರಿಕೋದ್ಯಮ ವಿಭಾಗದ ನಡುವೆ ಒಡಂಬಡಿಕೆಯನ್ನು ಮಾಡಿಕೊಳ್ಳಲಾಯಿತು.
ಸ್ಪಿಯರ್‍ಹೆಡ್ ಮೀಡಿಯಾ ಪ್ರೈವೆಟ್ ಲಿಮಿಟೆಡ್‍ನ ನಿರ್ದೇಶಕರಾದ ಎನ್.ವಿ ಪೌಲೋಸ್ ಮತ್ತು ಕ್ಯನ್ಯೂಟ್ ಪಿಂಟೊ ಹಾಗೂ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಪ್ರತಿಷ್ಠಾನದ ಮ್ಯಾನೇಜ್‍ಮೆಂಟ್ ಟ್ರಸ್ಟಿಗಳಾದ ಮಿಜಾರುಗುತ್ತು ಆನಂದ ಆಳ್ವ, ವಿವೇಕ್ ಆಳ್ವ, ಸ್ನಾತಕೋತ್ತರ ಪತ್ರಿಕೋದ್ಯಮ ವಿಭಾಗದ ಸಂಯೋಜಕ ಶ್ರೀನಿವಾಸ ಪೆಜತ್ತಾಯ ಮತ್ತು ಉಪನ್ಯಾಸಕ ಪ್ರಸಾದ್ ಶೆಟ್ಟಿ ಉಪಸ್ಥಿತರಿದ್ದರು.
ಈ ಒಡಂಬಡಿಕೆಯ ಮೂಲಕ ಭವಿಷ್ಯದಲ್ಲಿ ವಿವಿಧ ಯೋಜನೆಗಳನ್ನು ಸಹಭಾಗಿತ್ತ್ವದಲ್ಲಿ ಕೈಗೊಂಡು, ಯಶಸ್ವಿಗೊಳಿಸುವ ಪ್ರಯತ್ನ ನಡೆಯಲಿದೆ. ಇದರ ಮೂಲಕ ಆಳ್ವಾಸ್ ಕಾಲೇಜಿನ ಪತ್ರಿಕೋದ್ಯಮ ವಿದ್ಯಾರ್ಥಿಗಳಿಗೆ ಹೊಸ ಕೌಶಲ್ಯಗಳನ್ನು ಅಭಿವೃದ್ಧಿಪಡಿಸಿಕೊಳ್ಳಲು ಸಹಕಾರಿಯಾಗಲಿದೆ.