ಮಂಗಳೂರು: ಸುಪ್ರೀಂ ಕೋರ್ಟ್ ರಾಮಜನ್ಮಭೂಮಿ-ಬಾಬರಿ ಮಸೀದಿ ವಿವಾದದ ಬಗ್ಗೆ ನೀಡಿರುವ ತೀರ್ಪನ್ನು ಸ್ವಾಗತಿಸುವುದಾಗಿ ಮಾಜಿ ಪ್ರಧಾನಿ, ಜೆಡಿಎಸ್ ರಾಷ್ಟ್ರೀಯ ಅಧ್ಯಕ್ಷ ಎಚ್.ಡಿ. ದೇವೇಗೌಡ ತಿಳಿಸಿದರು.
ನಗರದಲ್ಲಿ ಪತ್ರಿಕಾಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ ಅವರು, ಹಿಂದೂಗಳಿಗೆ ಅಯೋಧ್ಯೆಯಲ್ಲಿ ಮಂದಿರ ನಿರ್ಮಾಣ ಮಾಡಲು ಈ ತೀರ್ಪು ನೆರವಾಗಲಿದೆ ಮತ್ತು ಹಲವಾರ ವರ್ಷಗಳ ಹಿಂದೂಗಳ ಕನಸು ನನಸಾಗಿದೆ. ಕೇಂದ್ರ ಹಾಗೂ ಉತ್ತರ ಪ್ರದೇಶದಲ್ಲಿ ಬಿಜೆಪಿ ಸರ್ಕಾರವಿರುವ ಕಾರಣ ಮಂದಿರ ನಿರ್ಮಾಣದ ಟ್ರಸ್ಟ್ ಆರ್ ಎಸ್ ಎಸ್ ಹಿಡಿತದಲ್ಲಿ ಇರುತ್ತದೆಯಾ ಅಥವಾ ಬೇರೆಯವರು ಇದರಲ್ಲಿ ಇರುತ್ತಾರೆಯಾ ಎಂದು ಕಾದು ನೋಡಬೇಕು ಎಂದು ಅವರು ಹೇಳಿದರು.
ಬಾಬರಿ ಮಸೀದಿ ಒಡೆದು ಹಾಕಿರುವುದು ತಪ್ಪು ಎಂದು ಸುಪ್ರೀಂ ತನ್ನ ತೀರ್ಪಿನಲ್ಲಿ ಹೇಳಿದೆ. ಆದರೆ ಕೋರ್ಟ್ ಅಲ್ಪಸಂಖ್ಯಾತರಿಗೆ ಹೊಸ ಮಸೀದಿ ನಿರ್ಮಾಣಕ್ಕೆ ಆರ್ಥಿಕ ನೆರವು ನೀಡಬೇಕಿತ್ತು ಎಂದರು.