News Kannada
Thursday, October 06 2022

ಕರಾವಳಿ

ಮೂಡುಬಿದಿರೆ ಸಾಲುಮರದ ತಿಮ್ಮಕ್ಕ ವೃಕ್ಷೋದ್ಯಾನ ಲೋಕಾರ್ಪಣೆ - 1 min read

Photo Credit :

ಮೂಡುಬಿದಿರೆ ಸಾಲುಮರದ ತಿಮ್ಮಕ್ಕ ವೃಕ್ಷೋದ್ಯಾನ ಲೋಕಾರ್ಪಣೆ

ಮೂಡುಬಿದಿರೆ: ಪುರಸಭಾ ವ್ಯಾಪ್ತಿಯ ಕಡಲಕೆರೆ ನಿಸರ್ಗಧಾಮದಲ್ಲಿ ಅರಣ್ಯ ಇಲಾಖೆಯ ವತಿಯಿಂದ ನಿರ್ಮಿಸಿರುವ ಸಾಲುಮರದ ತಿಮ್ಮಕ್ಕ ವೃಕ್ಷೋದ್ಯಾನವನ್ನು ಶಾಸಕ ಉಮಾನಾಥ ಕೋಟ್ಯಾನ್ ಸೋಮವಾರ ಲೋಕಾರ್ಪಣೆಗೊಳಿಸಿದರು.

ನಂತರ ಮಾಧ್ಯಮದೊಂದಿಗೆ ಮಾತನಾಡಿದ ಕೋಟ್ಯಾನ್ ಅವರು, ಕಡಲಕೆರೆಯನ್ನು ಪಿಲಿಕುಳ ನಿಸರ್ಗಧಾಮ ಮಾದರಿಯಲ್ಲಿ ಅಭಿವೃದ್ಧಿಪಡಿಸಲಾಗುವುದು. ಈ ನಿಟ್ಟಿನಲ್ಲಿ ಹಂತ ಹಂತವಾಗಿ ಅಭಿವೃದ್ಧಿ ಪಡಿಸಲಾಗುತ್ತಿದೆ. ಯೋಜನೆಗಳನ್ನು ಅನುಷ್ಠಾನಗೊಳಿಸಲು 3 ಕೋಟಿ ರೂಪಾಯಿಯ ಪ್ರಸ್ತಾವನೆಯನ್ನು ಮುಖ್ಯಮಂತ್ರಿಗಳಿಗೆ ಸಲ್ಲಿಸಲಾಗಿದೆ. ರೋಟರಿ ಸಹಿತ ಖಾಸಗಿ ಸಂಸ್ಥೆಗಳು ಕೈಜೋಡಿಸಬೇಕು ಎಂದು ಹೇಳಿದರು.

ಅಪರ ಪ್ರಧಾನ ಅರಣ್ಯಾಧಿಕಾರಿ ಬ್ರಿಜೇಶ್‍ಕುಮಾರ್ ಮಾತನಾಡಿ, ರಾಜ್ಯದಲ್ಲಿ 130 ಸಾಲುಮರದ ತಿಮ್ಮಕ್ಕ ವೃಕ್ಷೋದ್ಯಾನವನ್ನು ನಿರ್ಮಿಸಿದ್ದು, 225 ಉದ್ಯಾನವನವನ್ನು ನಿರ್ಮಿಸುವ ಗುರಿ ಹೊಂದಿದೆ. ಮೂಡುಬಿದಿರೆ ವೃಕ್ಷೋದ್ಯಾನಕ್ಕೆ ಈಗಾಗಲೇ 2 ಕೋಟಿ ರೂನಷ್ಟು ಖರ್ಚು ಮಾಡಿದ್ದು ಮುಂದಿನ ದಿನಗಳಲ್ಲಿಯೂ ಅನುದಾನ ಒದಗಿಸಲಾಗುವುದು. ರಾಜ್ಯದಲ್ಲಿರುವ ಇಂತಹ ವೃಕ್ಷೋದ್ಯಾನವನ್ನು ಸ್ಥಳೀಯ ಭೌಗೋಳಿಕ ಮತ್ತು ಸಾಂಸ್ಕೃತಿಕ ಹಿನ್ನೆಲೆಯನ್ನು ಇಟ್ಟುಕೊಂಡು ಅಭಿವೃದ್ಧಿಪಡಿಸಲಾಗುತ್ತಿದೆ ಎಂದರು.

See also  ಚಲಿಸುತ್ತಿದ್ದ ಕಾರಿನ ಮೇಲೆ ಮರ ಬಿದ್ದು ಯುವಕರಿಬ್ಬರ ದುರ್ಮರಣ
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published.

193
Deevith S K

Read More Articles
Subscribe to our Brand New YouTube Channel

Subscribe Newsletter

Get latest news karnataka updates on your email.

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು