ಸುಳ್ಯ: ನಿವೃತ್ತ ಪ್ರಾಂಶುಪಾಲ, ಸಾಹಿತಿ ಯು.ಸುಬ್ರಾಯ ಗೌಡ(61) ನಿಧನರಾಗಿದ್ದಾರೆ. ಯುಸುಗೌ ಎಂದೇ ಪ್ರಸಿದ್ಧರಾಗಿದ್ದ ಅವರು ಕೆಲವು ಸಮಯದಿಂದ ಅಸೌಖ್ಯಕ್ಕೊಳಗಾಗಿ ಚಿಕಿತ್ಸೆ ಪಡೆಯುತ್ತಿದ್ದರು.
ಮಂಗಳೂರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಅವರನ್ನು ಬಳಿಕ ಸುಳ್ಯದ ಖಾಸಗಿ ಮೆಡಿಕಲ್ ಕಾಲೇಜಿಗೆ ದಾಖಲಿಸಲಾಗಿತ್ತು. ಚಿಕಿತ್ಸೆ ಫಲಕಾರಿಯಾಗದೆ ಬುಧವಾರ ಬೆಳಗ್ಗೆ ಕೊನೆಯುಸಿರೆಳೆದರು.
ಶಿಕ್ಷಕರಾಗಿ, ಉಪನ್ಯಾಸಕರಾಗಿ ಸೇವೆ ಸಲ್ಲಿಸಿದ್ದ ಅವರು ಬೆಳ್ಳಾರೆ ಪದವಿಪೂರ್ವ ಕಾಲೇಜಿನ ಪ್ರಾಂಶುಪಾಲರಾಗಿ ನಿವೃತ್ತರಾಗಿದ್ದರು. ಸಾಹಿತ್ಯ ಕ್ಷೇತ್ರದಲ್ಲೂ ಸಕ್ರಿಯರಾಗಿದ್ದ ಅವರು ಹಲವು ಕೃತಿಗಳನ್ನು ರಚಿಸಿದ್ದರು. ವಿವಿಧ ಸಂಘ ಸಂಸ್ಥೆಗಳಲ್ಲಿ ಸಕ್ರೀಯರಾಗಿದ್ದರು. ತರಬೇತುದಾರರೂ ಆಗಿದ್ದರು. ಸುಳ್ಯ ತಾಲೂಕಿನ ಗುತ್ತಿಗಾರಿನವರಾದ ಯು.ಸು.ಗೌ ಸುಳ್ಯ ಹಳೆಗೇಟು ವಿದ್ಯಾನಗರದಲ್ಲಿ ನೆಲೆಸಿದ್ದರು. ಪತ್ನಿ, ಪುತ್ರ ಮತ್ತು ಪುತ್ರಿಯನ್ನು ಅಗಲಿದ್ದಾರೆ.