News Kannada
Friday, September 30 2022

ಕರಾವಳಿ

ವೈದ್ಯರಿಗೆ ರೋಗಿಗಳ ಮೇಲೆ ಸಿಂಪಥಿ ಇರಬೇಕು: ಡಾ. ಸಿ.ಎನ್.ಮಂಜುನಾಥ್ - 1 min read

Photo Credit :

ವೈದ್ಯರಿಗೆ ರೋಗಿಗಳ ಮೇಲೆ ಸಿಂಪಥಿ ಇರಬೇಕು: ಡಾ. ಸಿ.ಎನ್.ಮಂಜುನಾಥ್

ಬೆಳ್ತಂಗಡಿ: ರೋಗಿಗಳ ಸೇವೆಯೇ ದೇವರ ಸೇವೆಯಾಗಿದೆ. ವೈದ್ಯರು ರೋಗಿಗಳೊಂದಿಗೆ ನಗು ಮೊಗದಿಂದ ಮಾನವೀತೆಯಿಂದ ಮಾತನಾಡಿ, ಶುಶ್ರೂಷೆ ನೀಡಬೇಕು ಎಂದು ಬೆಂಗಳೂರಿನ ಶ್ರೀ ಜಯದೇವ ಹೃದ್ರೋಗ ಸಂಸ್ಥೆಯ ನಿರ್ದೇಶಕ ಡಾ.ಸಿ.ಎನ್. ಮಂಜುನಾಥ್ ಹೇಳಿದರು.

ಅವರು ಸೋಮವಾರ ಧರ್ಮಸ್ಥಳದಲ್ಲಿ ಅಮೃತವರ್ಷಿಣಿ ಸಭಾ ಭವನದಲ್ಲಿ ಎರಡನೆ ರಾಷ್ಟ್ರೀಯ ಪ್ರಕೃತಿ ಚಿಕಿತ್ಸಾ ದಿನಾಚರಣೆಯನ್ನು ಉದ್ಘಾಟಿಸಿ ಮಾತನಾಡಿದರು.

ವೈದ್ಯರು ಮಾನವೀಯತೆಯೊಂದಿಗೆ ಹಾಗೂ ನಗುಮುಖದದಿಂದ ಮಾತೃ ಹೃದಯದೊಂದಿಗೆ ರೋಗಿಗಳ ಸೇವೆ ಮಾಡಬೇಕು. ಆಸ್ಪತ್ರೆ, ಜೈಲು ಮತ್ತು ರುದ್ರಭೂಮಿ ನೋಡಿದಾಗ ನಮಗೆ ಆಧುನಿಕ ಜೀವನದ ಸಮಸ್ಯೆಗಳ ಅರಿವಾಗುತ್ತದೆ. ಆಧುನಿಕ ಜೀವನ ಶೈಲಿ, ಆಹಾರ ಸೇವನಾ ಕ್ರಮ, ಸದಾ ಒತ್ತಡದ ಕೆಲಸಗಳು, ಅತಿಯಾದ ತಂತ್ರಜ್ಞಾನದ ಬಳಕೆ, ವಾಯು ಮಾಲಿನ್ಯ ಮೊಬೈಲ್ ಫೋನ್ ಬಳಕೆ ಇತ್ಯಾದಿ ಕಾರಣಗಳಿಂದ ಇಂದು ಎಳೆಯ ಪ್ರಾಯದಲ್ಲೇ ಮನುಷ್ಯರು ಮಧುಮೇಹ, ರಕ್ತದೊತ್ತಡ, ಕ್ಯಾನ್ಸರ್, ಹೃದಯಾಘಾತ ಮೊದಲಾದ ಭೀಕರ ರೋಗಗಳಿಗೆ ಬಲಿಯಾಗುತ್ತಾರೆ. ಯೋಗ ಮತ್ತು ಪ್ರಕೃತಿಚಿಕಿತ್ಸಾ ವಿಧಾನದಿಂದ ನಾವು ಸಂಪೂರ್ಣ ಆರೋಗ್ಯ ಭಾಗ್ಯವನ್ನು ಹೊಂದಬಹುದು ಎಂದು ಅವರು ಹೇಳಿದರು.

ಕೀಳರಿಮೆ ಹಾಗೂ ಅಹಂ ತ್ಯಜಿಸಿ ಧನಾತ್ಮಕ ಚಿಂತನೆಯೊಂದಿಗೆ ಸದಾ ಒಳ್ಳೆಯ ಕೆಲಸಗಳನ್ನು ಮಾಡಬೇಕು ಎಂದು ಅವರು ಕಿವಿಮಾತು ಹೇಳಿದರು.

ಅಲೋಪತಿ, ಹೋಮಿಯೋಪತಿ, ನೇಚುರೋಪತಿ ಇತ್ಯಾದಿ ವೈದ್ಯಕೀಯ ಪದ್ಧತಿಗಳಿಗಿಂತಲೂ ಮಿಗಿಲಾಗಿ ವೈದ್ಯರಿಗೆ ರೋಗಿಗಳಲ್ಲಿ “ಸಿಂಪತಿ’’ ಇರಬೇಕು ಎಂದು ಅವರು ಹೇಳಿದರು.

ಉಪವಾಸ, ವ್ಯಾಯಾಮ, ಯೋಗಾಭ್ಯಾಸ, ನಿತ್ಯ ನಡಿಗೆ ಇತ್ಯಾದಿ ಕ್ರಿಯೆಗಳಿಂದ ಆರೋಗ್ಯ ಭಾಗ್ಯ ಪಡೆಯಬಹುದು ಎಂದು ಡಾ.ಮಂಜುನಾಥ್ ಅಭಿಪ್ರಾಯಪಟ್ಟರು.

ಅಧ್ಯಕ್ಷತೆ ವಹಿಸಿದ ಧರ್ಮಸ್ಥಳದ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರು ಮಾತನಾಡಿ, ನಾವು ಪಂಚೇಂದ್ರಿಯಗಳ ದಾಸರಾಗಬಾರದು. ಒಡೆಯರಾಗಬೇಕು. ಪಂಚೇಂದ್ರೀಯಗಳ ನಿಯಂತ್ರಣದಿಂದ ರೋಗರಹಿತವಾಗಿ ಆರೋಗ್ಯಪೂರ್ಣ ಜೀವನ ನಡೆಸಬಹುದು. ಧಾರ್ಮಿಕ ಆಚಾರ-ವಿಚಾರಗಳ ಅನುಷ್ಠಾದಿಂದ, ಸದಾಚಾರದೊಂದಿಗೆ ಆದರ್ಶಜೀವನ ನಡೆಸಬೇಕು. ರಾಷ್ಟ್ರಪಿತ ಮಹಾತ್ಮಾ ಗಾಂಧೀಜಿ ಅವರ ಯೋಗ, ಪ್ರಾರ್ಥನೆ, ಧ್ಯಾನ ಮತ್ತು ಪ್ರಕೃತಿ ಚಿಕಿತ್ಸಾ ಪದ್ಧತಿಯನ್ನು ಸ್ವಯಂ ಅನುಷ್ಠಾನ ಮಾಡಿ “ಆಚಾರ್ಯ’’ ರಾದರು ಎಂದು ಹೆಗ್ಗಡೆ ಅವರು ಹೇಳಿದರು.

ಪ್ರಕೃತಿಚಿಕಿತ್ಸಾ ವೈದ್ಯರು ಕೀಳರಿಮೆ ಹೊಂದದೆಅಭಿಮಾನದಿಂದ ಈ ಪದ್ಧತಿಯ ರಾಯಭಾರಿಗಳಾಗಬೇಕು ಎಂದು ಹೆಗ್ಗಡೆಯವರು ಸಲಹೆ ನೀಡಿದರು.

ಡಾ. ನವೀನ್ ಕೆ.ವಿ. ಪ್ರಾಸ್ತಾವಿಕವಾಗಿ ಮಾತನಾಡಿ, ಪ್ರಕೃತಿಚಿಕಿತ್ಸಾ ದಿನಾಚರಣೆಯ ಮಹತ್ವ ವಿವರಿಸಿದರು.

ಆಯುಷ್ ಇಲಾಖೆಯ ಜಂಟಿ ನಿರ್ದೇಶಕ ಡಾ.ಶ್ರೀಧರ ಭಟ್, ಹೇಮಾವತಿ ವಿ. ಹೆಗ್ಗಡೆಯವರು, ಡಿ. ಹರ್ಷೇಂದ್ರಕುಮಾರ್, ಸುಪ್ರಿಯಾ ಹರ್ಷೇಂದ್ರಕುಮಾರ್ ಉಪಸ್ಥಿತರಿದ್ದರು.

See also  ಪಣೋಲಿಬೈಲು ದೇವಸ್ಥಾನದ ಅನುವಂಶಿಕ ಅರ್ಚಕ ರಮೇಶ್ ಮೂಲ್ಯ ನಿಧನ
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published.

154
Deepak Atavale

Read More Articles
Subscribe to our Brand New YouTube Channel

Subscribe Newsletter

Get latest news karnataka updates on your email.

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು