ಮೂಡುಬಿದಿರೆ: ಆಳ್ವಾಸ್ ರೋಟರಿ ಬ್ಲಡ್ ಬ್ಯಾಂಕ್ ಹಾಗೂ ಆಳ್ವಾಸ್ ಹೆಲ್ತ್ ಸೆಂಟರ್ ವತಿಯಿಂದ `ಟ್ರಾನ್‍ಫ್ಯೂಷನ್ ಮೆಡಿಸಿನ್ ಆ್ಯಂಡ್ ಕ್ವಾಲಿಟಿ ಎಶ್ಶುರೆನ್ಸ್’ ಎಂಬ ವಿಷಯದ ಬಗ್ಗೆ ನಿರಂತರ ವೈದ್ಯಕೀಯ ಶಿಕ್ಷಣ ಕಾರ್ಯಕ್ರಮವು ಆಳ್ವಾಸ್ ಕಾಲೇಜಿನ ಕುವೆಂಪು ಸಭಾಂಗಣದಲ್ಲಿ ರವಿವಾರ ಉದ್ಘಾಟನೆಗೊಂಡಿತು.
ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಡಾ.ಎಂ.ಮೋಹನ ಆಳ್ವ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು.
ಆರ್ಗನ್ ಡೊನೇಶನ್ ಇಂಡಿಯಾ ಫೌಂಡೇಶನ್ ಅಧ್ಯಕ್ಷ ಲಾಲ್ ಗೊಯೆಲ್ ಕಾರ್ಯಕ್ರಮ ಉದ್ಘಾಟಿಸಿದರು.
ದ.ಕ. ಐ.ಎ.ಎಸ್ ಅಧಿಕಾರಿ ರಾಹುಲ್ ಶಿಂಧೆ, ಮಣಿಪಾಲ ಕೆ.ಎಂ.ಸಿ.ಯ ಟ್ರಾನ್ಸ್‍ಫ್ಯೂಷನ್ ಮೆಡಿಸಿನ್ ವಿಭಾಗ ಮುಖ್ಯಸ್ಥ ಡಾ.ಶಮೀ ಶಾಸ್ತ್ರಿ, ಮಣಿಪಾಲ ಕೆ.ಎಂ.ಸಿ.ಯ ಸಹಾಯಕ ಪ್ರಾಧ್ಯಾಪಕಿ ಡಾ.ಚೆನ್ನ ದೀಪಿಕಾ, , ಮಂಗಳೂರು ಫಾದರ್ ಮುಲ್ಲರ್ ಆಸ್ಪತ್ರೆಯ ರಕ್ತನಿಧಿ ಅಧಿಕಾರಿ ಹಾಗೂ ಸಹಾಯಕ ಪ್ರಾಧ್ಯಾಪಕ ಡಾ.ಕಿರಣ ಪೈಲೂರು, ಮಂಗಳೂರು ವೆನ್ಲಾಕ್ ಜಿಲ್ಲಾ ಆಸ್ಪತ್ರೆಯ ರಕ್ತನಿಧಿ ಅಧಿಕಾರಿ ಡಾ.ಶರತ್ ಕುಮಾರ್ ರಾವ್ ಜೆ., ಕರ್ನಾಟಕ ವೈದ್ಯಕೀಯ ಮಂಡಳಿಯ ವೀಕ್ಷಕ ಡಾ.ಕೆ.ಆರ್.ಕಾಮತ್, ಆಳ್ವಾಸ್ ಹೆಲ್ತ್ ಸೆಂಟರ್ ನ ಅಧೀಕ್ಷಕ ಡಾ.ಹರೀಶ್ ನಾಯಕ್ ವೇದಿಕೆಯಲ್ಲಿ ಉಪಸ್ಥಿತರಿದ್ದರು.
ಆಳ್ವಾಸ್ ಹೆಲ್ತ್ ಸೆಂಟರ್‍ನ ಆಡಳಿತಾಧಿಕಾರಿ ಭಾಸ್ಕರ್ ಉಪಸ್ಥಿತರಿದ್ದರು.ವಿಶೇಷ ಸಂಪನ್ಮೂಲ ವ್ಯಕ್ತಿಗಳಿಂದ ವೈದ್ಯಕೀಯ ಮಾಹಿತಿ ಕಾರ್ಯಕ್ರಮ ಜರುಗಿತು.ಜಿಲ್ಲೆಯ 100ಕ್ಕಿಂತ ಅಧಿಕ ವೈದ್ಯರು ಹಾಗೂ 200ಕ್ಕಿಂತ ಹೆಚ್ಚು ವಿದ್ಯಾರ್ಥಿಗಳು ಭಾಗವಹಿಸಿದ್ದರು.
ಆಳ್ವಾಸ್ ಹೆಲ್ತ್ ಸೆಂಟರ್‍ನ ವೈದ್ಯಕೀಯ ನಿರ್ದೇಶಕ ಡಾ.ವಿನಯ ಆಳ್ವ ಸ್ವಾಗತಿಸಿ, ಪ್ರಸೂತಿ ತಜ್ಞೆ ಡಾ.ಹನ ಶೆಟ್ಟಿ ವಂದಿಸಿದರು. ರಾಜೇಶ್ ಡಿಸೋಜಾ ಕಾರ್ಯಕ್ರಮ ನಿರೂಪಿಸಿದರು.