ಬೆಳ್ತಂಗಡಿ: ಬಿಜೆಪಿ ಮಂಡಲದ ಮುಂದಿನ ಮೂರು ವರ್ಷಗಳ ಅವಧಿಗೆ ಅಧ್ಯಕ್ಷರಾಗಿ ಜಯಂತ್ ಕೋಟ್ಯಾನ್ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.
ಬೆಳ್ತಂಗಡಿಯ ಮಂಜುನಾಥೇಶ್ವರ ಕಲಾಮಂದಿರದಲ್ಲಿ ಮಂಗಳವಾರ ನಡೆದ ಮಂಡಲದ ಬೂತ್ ಸಮಿತಿ ಅಧ್ಯಕ್ಷರ ಕಾರ್ಯಕಾರಿಣಿ ಸಭೆಯಲ್ಲಿ ಜಯಂತ್ ಕೋಟ್ಯಾನ್ ಅವರನ್ನು ಮತ್ತೆ ಅಧ್ಯಕ್ಷರನ್ನಾಗಿ ಆಯ್ಕೆ ಮಾಡಲಾಯಿತು.
ಜಯಂತ್ ಕೋಟ್ಯಾನ್ ಕಳೆದ ವಿಧಾನಸಭಾ ಚುನಾವಣೆಯ ಬಳಿಕ ಮಂಡಲದ ಅಧ್ಯಕ್ಷರಾಗಿ ನೇಮಕಗೊಂಡಿದ್ದರು. ಇದೀಗ ಮಂಡಲದ ಸಮಿತಿಗೆ ಮುಂದಿನ ಮೂರು ವರ್ಷಗಳ ಅವಧಿಗೆ ಸಮಿತಿಯನ್ನು ಆಯ್ಕೆ ಮಾಡುವವ ನಿಟ್ಟಿನಲ್ಲಿ ಅಧ್ಯಕ್ಷರನ್ನು ಆಯ್ಕೆ ಮಾಡಲಾಗಿದೆ. ಮುಂದಿನ 15 ದಿನಗಳಲ್ಲಿ ಮಂಡಲದ 61 ಮಂದಿ ಪದಾಧಿಕಾರಿಗಳ ಆಯ್ಕೆ ಮಾಡಲಾಗುತ್ತದೆ.
ಶಾಸಕ ಹರೀಶ ಪೂಂಜ, ಮಂಗಳೂರು ವಿಭಾಗದ ಪ್ರಭಾರಿ ಉದಯಕುಮಾರ್ ಶೆಟ್ಟಿ, ಸಹಪ್ರಭಾರಿ ಗೋಪಾಲಕೃಷ್ಣ ಹೇರಳೆ, ಮಂಡಲ ಚುನಾವಣಾ ಪ್ರಮುಖ್ ಬಾಲಕೃಷ್ಣ ಶೆಟ್ಟಿ ಸವಣಾಲು, ಸಹ ಚುನಾವಣಾ ಪ್ರಮುಖ್ ಸದಾನಂದ ಪೂಜಾರಿ ಉಂಗಿಲಬೈಲು ಉಪಸ್ಥಿತರಿದ್ದರು.
ಸೀತಾರಾಮ ಬಿ.ಎಸ್. ಸ್ವಾಗತಿಸಿ, ಪ್ರಭಾಕರ ಶೆಟ್ಟಿ ಉಪ್ಪಡ್ಕ ವಂದಿಸಿದರು.