News Kannada
Thursday, September 29 2022

ಕರಾವಳಿ

ಅಭಯದಾನ ಅತ್ಯಂತ ಶ್ರೇಷ್ಠ ದಾನ: ಡಾ.ಡಿ.ವೀರೇಂದ್ರ ಹೆಗ್ಗಡೆ - 1 min read

Photo Credit :

ಅಭಯದಾನ ಅತ್ಯಂತ ಶ್ರೇಷ್ಠ ದಾನ: ಡಾ.ಡಿ.ವೀರೇಂದ್ರ ಹೆಗ್ಗಡೆ

ಬೆಳ್ತಂಗಡಿ: ಧರ್ಮಸ್ಥಳದಲ್ಲಿ ಅನ್ನದಾನ, ಔಷಧಿದಾನ, ವಿದ್ಯಾದಾನ ಮತ್ತು ಅಭಯದಾನ ಎಂಬ ಚತುರ್ವಿಧ ದಾನಗಳು ನಿತ್ಯೋತ್ಸವವಾಗಿದ್ದು, ನೊಂದು ಬಂದವರಿಗೆ ಸಾಂತ್ವನ ಹೇಳಿ ಧೈರ್ಯ ಮತ್ತು ಆತ್ಮವಿಶ್ವಾಸ ಮೂಡಿಸುವ ಅಭಯದಾನ ಅತ್ಯಂತ ಶ್ರೇಷ್ಠ ಹಾಗೂ ವಿಶಿಷ್ಠ ದಾನವಾಗಿದೆ. ಶ್ರೀ ಮಂಜುನಾಥ ಸ್ವಾಮಿ ಧರ್ಮಾಧಿಕಾರಿಗಳಾದ “ಹೆಗ್ಗಡೆ”ಯವರಿಗೆ ನೀಡಿದ ವಿಶೇಷ ಅನುಗ್ರಹ ಇದಾಗಿದೆ ಎಂದು ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ. ವೀರೇಂದ್ರ ಹೆಗ್ಗಡೆಯವರು ಹೇಳಿದರು.

ಅವರು ಶುಕ್ರವಾರ ಧರ್ಮಸ್ಥಳದಲ್ಲಿ ಅಮೃತವರ್ಷಿಣಿ ಸಭಾ ಭವನದಲ್ಲಿ ಲಕ್ಷದೀಪೋತ್ಸವ ಸಂದರ್ಭದಲ್ಲಿ ಉಜಿರೆಯಿಂದ ಧರ್ಮಸ್ಥಳಕ್ಕೆ ಪಾದಯಾತ್ರೆಯಲ್ಲಿ ಬಂದ ಹತ್ತು ಸಾವಿರಕ್ಕೂ ಮಿಕ್ಕಿ ಭಕ್ತರನ್ನು ಉದ್ದೇಶಿಸಿ ಮಾತನಾಡಿದರು.

ವ್ಯವಹಾರದಲ್ಲಿ ನಷ್ಟ, ಶಾಪ ದೋಷ, ವಾಕ್‍ದೋಷ, ಕೌಟುಂಬಿಕ ಕಲಹ, ವ್ಯಾಪಾರದಲ್ಲಿ ಸೋಲು, ಮನಸ್ತಾಪ, ಇತ್ಯಾದಿಗಳಿಂದ ನೊಂದವರು ಧರ್ಮಸ್ಥಳಕ್ಕೆ ಬಂದು ಹೆಗ್ಗಡೆಯವರಲ್ಲಿ ನಿವೇದನೆ ಮಾಡಿಕೊಂಡಾಗ, ಶ್ರೀ ಸ್ವಾಮಿಗೆ ಶರಣಾಗಿ, ಹೆದರಬೇಡಿ, ಧೈರ್ಯವಾಗಿರಿ ಎಂದು ಅವರಿಗೆ ಸಾಂತ್ವನ ಹೇಳಿ ಹೆಗ್ಗಡೆಯವರು ಅಭಯ ನೀಡುತ್ತಾರೆ. ಜನರಿಗೆ ಬದುಕು ಕಟ್ಟಿಕೊಳ್ಳಲು ಪ್ರೇರಣೆ, ಮಾರ್ಗದರ್ಶನ ನೀಡುತ್ತಾರೆ. ಇದು “ಹೆಗ್ಗಡೆ” ಪೀಠಕ್ಕೆ ಶ್ರೀ ಮಂಜುನಾಥ ಸ್ವಾಮಿ ನೀಡಿದ ವಿಶೇಷ ಅನುಗ್ರಹವಾಗಿದೆ ಎಂದು ಅವರು ತಿಳಿಸಿದರು.

ಅವರವರ ವೃತ್ತಿ, ಪ್ರವೃತ್ತಿಯನ್ನು ಪ್ರೀತಿಸಿ, ಗೌರವಿಸಿದಾಗ ಬದುಕು ಪ್ರಿಯವಾಗುತ್ತದೆ. ಸುಂದರವಾಗುತ್ತದೆ ಹಾಗೂ ಹಗುರವಾಗುತ್ತದೆ. ಕಷ್ಟಗಳು ಬಂದಾಗ ಒತ್ತಡ ಹೆಚ್ಚಾದಾಗ ಬದುಕು ಭಾರವಾಗುತ್ತದೆ. ಧರ್ಮದ ಮೂಲ ಉದ್ದೇಶವೇ ಬದುಕನ್ನು ಸುಖ-ಶಾಂತಿಯಿಂದ, ಪ್ರೀತಿ-ವಿಶ್ವಾಸದಿಂದ ಅನುಭವಿಸಲು ಪ್ರೇರಣೆ ನೀಡುವುದೇ ಆಗಿದೆ.

ನಿರಂತರ ಪರಿವರ್ತನಾಶೀಲವಾದ ಜಗತ್ತಿನಲ್ಲಿ ನಾವು ಸಂದರ್ಭಕ್ಕೆ ಹಾಗೂ ಕಾಲಕ್ಕೆ ಸರಿಯಾಗಿ ಹೊಂದಿಕೊಂಡು ಆದರ್ಶ ವ್ಯಕ್ತಿತ್ವ ಬೆಳೆಸಿಕೊಳ್ಳಬೇಕು. ಹೊಗಳಿಕೆಗೆ ಹಿಗ್ಗಬೇಡಿ, ತೆಗಳಿಕೆಗೆ ಕುಗ್ಗಬೇಡಿ. ಎಲ್ಲವನ್ನೂ ಆತ್ಮವಿಶ್ವಾಸದಿಂದ ಮತ್ತು ಸಮಚಿತ್ತದಿಂದ ಸ್ವೀಕರಿಸಿ ಆದರ್ಶ ಜೀವನ ನಡೆಸಿ ಎಂದು ಸಲಹೆ ನೀಡಿದ ಹೆಗ್ಗಡೆಯವರು ಶ್ರೀ ಮಂಜುನಾಥ ಸ್ವಾಮಿಯ ಅನುಗ್ರಹದಿಂದ ಮತ್ತು ಜನರ ಪ್ರೀತಿ – ವಿಶ್ವಾಸದಿಂದ ಇನ್ನಷ್ಟು ಹೆಚ್ಚು ಸೇವಾಕಾರ್ಯಗಳನ್ನು ಮಾಡಿ ಬೆಳ್ತಂಗಡಿ ತಾಲ್ಲೂಕನ್ನು ಮಾದರಿ ತಾಲ್ಲೂಕಾಗಿ ಅಭಿವೃದ್ಧಿಪಡಿಸಲಾಗುವುದು ಎಂದು ಹೆಗ್ಗಡೆಯವರು ಭರವಸೆ ನೀಡಿದರು.

ಶಾಸಕ ಹರೀಶ್ ಪೂಂಜ, ವಿಧಾನಪರಿಷತ್ ಸದಸ್ಯ ಕೆ. ಹರೀಶ್ ಕುಮಾರ್, ಉಜಿರೆಯ ಶ್ರೀ ಜನಾರ್ದನ ಸ್ವಾಮಿ ದೇವಸ್ಥಾನದ ಆಡಳಿತ ಮೊಕ್ತೇಸರ ವಿಜಯರಾಘವ ಪಡ್ವೆಟ್ನಾಯ ಉಪಸ್ಥಿತರಿದ್ದರು.

ಪ್ರೊ. ಎಸ್. ಪ್ರಭಾಕರ್, ಹೇಮಾವತಿ ವಿ. ಹೆಗ್ಗಡೆ, ಡಿ. ಹರ್ಷೇಂದ್ರ ಕುಮಾರ್, ಸುಪ್ರಿಯಾ ಹರ್ಷೇಂದ್ರ ಕುಮಾರ್, ಡಾ. ಬಿ. ಯಶೋವರ್ಮ ಇದ್ದರು. ಸಮಿತಿಯ ಸಂಚಾಲಕ ಕೆ. ಪ್ರತಾಪಸಿಂಹ ನಾಯಕ್ ಪ್ರಸ್ತಾವಿಸಿ, ಸ್ವಾಗತಿಸಿದರು. ಕಾರ್ಯಕ್ರಮ ನಿರ್ವಹಿಸಿದ ಶ್ರೀನಿವಾಸ್ ರಾವ್ ಧರ್ಮಸ್ಥಳ ಕೊನೆಯಲ್ಲಿ ಧನ್ಯವಾದವಿತ್ತರು.

See also  ಡಿ.13, 15 ಮೂಡುಬಿದಿರೆಯಲ್ಲಿ ರಾಜ್ಯಮಟ್ಟದ ಕರಾಟೆ ಸ್ಪರ್ಧೆ
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published.

154
Deepak Atavale

Read More Articles
Subscribe to our Brand New YouTube Channel

Subscribe Newsletter

Get latest news karnataka updates on your email.

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು