ಮಂಗಳೂರು: ಈಚೆಗೆ ಕಾಂಗ್ರೆಸ್ ಶಾಸಕ ತನ್ವೀರ್ ಸೇಠ್ ಮೇಲೆ ನಡೆದ ಹಲ್ಲೆ ಬೆನ್ನಲ್ಲೇ ಮುಸ್ಲಿಂ ಸಮುದಾಯದ ಕಾಂಗ್ರೆಸ್ ಶಾಸಕ ಯು.ಟಿ.ಖಾದರ್ ಅವರಿಗೆ ಮಂಗಳೂರು ನಗರ ಪೊಲೀಸರು ಗನ್ ಮ್ಯಾನ್ ಒಬ್ಬರನ್ನು ಭದ್ರತೆಗೆ ನಿಯೋಜಿಸಿದ್ದಾರೆ.
ತನ್ವೀರ್ ಸೇಠ್ ಮೇಲೆ ನಡೆದ ಕೊಲೆ ಯತ್ನ ತನಿಖೆ ವೇಳೆ ಮಾಜಿ ಸಚಿವ ಯು.ಟಿ.ಖಾದರ್ ಮತೀಯ ಸಂಘಟನೆಯೊಂದರ ಹಿಟ್ ಲಿಸ್ಟ್ ನಲ್ಲಿದ್ದಾರೆ ಎಂಬ ವಿಚಾರ ಬೆಳಕಿಗೆ ಬಂದಿದೆ. ಈ ಹಿನ್ನೆಲೆ ಇದೀಗ ಯು.ಟಿ,.ಖಾದರ್ ಅವರಿಗೆ ಗನ್ ಮ್ಯಾನ್ ಭದ್ರತೆ ಒದಗಿಸಲಾಗಿದೆ.
ನವೆಂಬರ್ 17ರಂದು ಸಂಜೆ ವಿವಾಹ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದ ಶಾಸಕ ತನ್ವೀರ್ ಸೇಠ್ ಮೇಲೆ ಯುವಕನೊಬ್ಬ ಮಾರಣಾಂತಿಕ ಹಲ್ಲೆ ನಡೆಸಿದ್ದ. ಪ್ರಕರಣ ಸಂಬಂಧ ಎಸ್ ಡಿಪಿಐ ಹಾಗೂ ಪಿಎಫ್ ಐ ಕಾರ್ಯಕರ್ತ ಫರ್ಹಾನ್ ಪಾಷಾ ಅವರನ್ನು ಪೊಲೀಸರು ಬಂಧಿಸಿ ತನಿಖೆ ನಡೆಸುತ್ತಿದ್ದಾರೆ. ತನಿಖೆ ವೇಳೆ ಇವರ ತಂಡ ಪ್ರಮುಖ ಮುಸ್ಲಿಂ ನಾಯಕರನ್ನು ಟಾರ್ಗೆಟ್ ಮಾಡುತ್ತಿದೆ ಎಂದು ತಿಳಿದುಬಂದಿದೆ. ಈ ಹಿನ್ನೆಲೆ ಶಾಸಕ ಯು.ಟಿ.ಖಾದರ್ ಅವರಿಗೆ ಭದ್ರತೆ ನೀಡಲಾಗಿದೆ.