News Kannada
Monday, October 03 2022

ಕರಾವಳಿ

ಧರ್ಮಸ್ಥಳ ಲಕ್ಷದೀಪೋತ್ಸವ ಸಂಪನ್ನ - 1 min read

Photo Credit :

ಧರ್ಮಸ್ಥಳ ಲಕ್ಷದೀಪೋತ್ಸವ ಸಂಪನ್ನ

ಬೆಳ್ತಂಗಡಿ: ಧರ್ಮಸ್ಥಳ ಲಕ್ಷದೀಪೋತ್ಸವದಲ್ಲಿ ಮಂಗಳವಾರ ರಾತ್ರಿ ಸಹಸ್ರಾರು ಭಕ್ತ ಸಮೂಹದ ಸಮ್ಮುಖದಲ್ಲಿ ಗೌರಿಮಾರುಕಟ್ಟೆ ಉತ್ಸವ ನಡೆದು, ಬುಧವಾರ ಶ್ರೀಚಂದ್ರನಾಥ ಸ್ವಾಮಿ ಸಮವಸರಣ ಪೂಜೆಯೊಂದಿಗೆ ಧರ್ಮಸ್ಥಳದ ಲಕ್ಷದೀಪೋತ್ಸವ ಸಂಪನ್ನಗೊಂಡಿತು.

ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಅವರ ಉಪಸ್ಥಿತಿಯಲ್ಲಿ ಧಾರ್ಮಿಕ ವಿಧಿವಿಧಾನಗಳು ನೆರವೇರಿದವು. ಶ್ರೀ ಮಂಜುನಾಥ ಸ್ವಾಮಿಯ ಗೌರಿಮಾರು ಕಟ್ಟೆ ಉತ್ಸವಕ್ಕೆ ಲಕ್ಷಾಂತರ ಭಕ್ತರು ಸಾಕ್ಷಿಯಾದರು.

ದೇವಸ್ಥಾನದಲ್ಲಿ ದೇವರ ಬಲಿ ಸುತ್ತುಗಳು ನಡೆದು, ಬಳಿಕ ದೀಪಗಳಿಂದ ಹಾಗೂ ಹೂವುಗಳಿಂದ ಅಲಂಕಾರಗೊಂಡಿದ್ದ ಬೆಳ್ಳಿ ರಥ, ಸ್ವರ್ಣ ಪಲ್ಲಕ್ಕಿಯಲ್ಲಿ ಶ್ರೀಮಂಜುನಾಥ ಸ್ವಾಮಿಯ ಮೆರವಣಿಗೆ  ನೆರೆದಿದ್ದ ಸಹಸ್ರಾರು ಸಂಖ್ಯೆಯ ಭಕ್ತ ಸಮೂಹದೊಂದಿಗೆ ದೇವಸ್ಥಾನದ ಬಳಿಯಿಂದ ಕ್ಷೇತ್ರದ ಮುಖ್ಯ ದ್ವಾರದ ಬಳಿಯ ಗೌರಿಮಾರು ಕಟ್ಟೆ ಬಳಿ ಸಾಗಿತು.

ಮೆರವಣಿಗೆಯಲ್ಲಿ ಶೃಂಗಾರಗೊಂಡ ಆನೆಗಳು, ನಿಶಾನೆಗಳು, ಬಿರುದಾವಳಿಗಳು, ಶಂಖ, ಜಾಗಟೆ, ಕೊಂಬು, ವೀರಗಾಸೆ, ಕರಡಿಮೇಳ, ಕಹಳೆ, ಚೆಂಡೆ, ಡೊಳ್ಳು, ವಾಲಗಗಳು, ಬ್ಯಾಂಡ್-ವಾದ್ಯಗಳ ಸೇವೆಯೊಂದಿಗೆ ಸಾಗಿದ ಮೆರವಣಿಗೆಯಲ್ಲಿ ಸಹಸ್ರಾರು ಭಕ್ತರು ಭಕ್ತಿಭಾವದಿಂದ ಪಾಲ್ಗೊಂಡಿದ್ದರು.

ಈ ಸಂದರ್ಭ ಮಾಣಿಲ ಶ್ರೀಧಾಮದ ಶ್ರೀ ಮೋಹನದಾಸ ಸ್ವಾಮೀಜಿ, ಡಿ.ಸುರೇಂದ್ರ ಕುಮಾರ್, ಡಿ.ಹರ್ಷೇಂದ್ರ ಕುಮಾರ್, ಶ್ರೇಯಸ್, ಡಾ.ಬಿ.ಯಶೋವರ್ಮ, ಹೆಗ್ಗಡೆ ಕುಟುಂಬಸ್ಥರು, ದೇವಳದ ಸಿಬ್ಬಂದಿಗಳು, ನಾಡಿನ ನಾನಾ ಭಾಗಗಳಿಂದ ಆಗಮಿಸಿದ ಭಕ್ತ ಸಮೂಹ ಇದ್ದರು. 

See also  ಕಾಸರಗೋಡು: ವಿಶ್ವ ತುಳುವೆರೆ ಆಯನೊ ಸಂಪನ್ನ
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published.

154
Deepak Atavale

Read More Articles
Subscribe to our Brand New YouTube Channel

Subscribe Newsletter

Get latest news karnataka updates on your email.

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು