ಮಂಗಳೂರು: ಉಪಚುನಾವಣೆ ಬಳಿಕ ನಾನೇ ಮುಖ್ಯಮಂತ್ರಿ ಎಂದು ಹೇಳುತ್ತಿರುವ ಮಾಜಿ ಸಿಎಂ ಸಿದ್ದರಾಮಯ್ಯ ಅವರು ಹಗಲುಗನಸು ಕಾಣುತ್ತಿದ್ದಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ವ್ಯಂಗ್ಯವಾಡಿದರು.
ಕಳೆದ ವಿಧಾನಸಭೆ ಚುನಾವಣೆ ವೇಳೆ ಕೂಡ ನಾನೇ ಮುಖ್ಯಮಂತ್ರಿ ಎಂದು ಹೇಳುತ್ತಿದ್ದರು. ಕುಮಾರಸ್ವಾಮಿ ಬಳಿಕ ಈಗ ಮತ್ತೆ ಅದನ್ನೇ ಹೇಳುತ್ತಿದ್ದಾರೆ. ಆದರೆ ಅವರ ಗ್ರಹಚಾರ ನೆಟ್ಟಗಿಲ್ಲ ಎಂದು ನಗರದಲ್ಲಿ ಸಂಸದರ ಕಚೇರಿ ಉದ್ಘಾಟನೆ ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿದ ನಳಿನ್ ಕುಮಾರ್ ತಿಳಿಸಿದರು.
ಉಪಚುನಾವಣೆಯಲ್ಲಿ ಬಿಜೆಪಿ 15 ಸ್ಥಾನ ಗೆಲ್ಲಲಿದೆ ಮತ್ತು ಮುಂದಿನ ಮೂರು ವರ್ಷವೂ ಬಿಜೆಪಿ ಅಧಿಕಾರ ನಡೆಸಲಿದೆ. ಡಿಸೆಂಬರ್ 9ರ ಬಳಿಕ ಕಾಂಗ್ರೆಸ್ ನವರು ಬುಗರಿ ಆಡಿಸಿದರೆ, ನಾವು ಚಕ್ರ ತಿರುಗಿಸುತ್ತೇವೆ ಎಂದರು.