News Kannada
Wednesday, October 05 2022

ಕರಾವಳಿ

ಡಿ.22ರಂದು ಮಡಪ್ಪಾಡಿಯಲ್ಲಿ ಪತ್ರಕರ್ತರ ಗ್ರಾಮ ವಾಸ್ತವ್ಯ - 1 min read

Photo Credit :

ಡಿ.22ರಂದು ಮಡಪ್ಪಾಡಿಯಲ್ಲಿ ಪತ್ರಕರ್ತರ ಗ್ರಾಮ ವಾಸ್ತವ್ಯ

ಸುಳ್ಯ: ದ.ಕ.ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ವತಿಯಿಂದ ಸುಳ್ಯ ತಾಲೂಕು ಕಾರ್ಯನಿರತ ಪತ್ರಕರ್ತರ ಸಹಯೋಗದಲ್ಲಿ ಪತ್ರಕರ್ತರ  ಗ್ರಾಮ ವಾಸ್ತವ್ಯ ಸುಳ್ಯ ತಾಲೂಕಿನ ಮಡಪ್ಪಾಡಿಯಲ್ಲಿ ಡಿಸೆಂಬರ್ 22 ರಂದು ನಡೆಯಲಿದೆ.

ಸುಳ್ಯದ ಎಪಿಎಂಸಿ ಸಭಾಂಗಣದಲ್ಲಿ ಮಂಗಳವಾರ ನಡೆದ  ಪೂರ್ವಭಾವಿ ಸಭೆಯಲ್ಲಿ ಈ ಕುರಿತು ನಿರ್ಧರಿಸಲಾಯಿತು. ಗ್ರಾಮ ವಾಸ್ತವ್ಯದ ಸಿದ್ಧತೆಗಳ ಬಗ್ಗೆ ಚರ್ಚಿಸಲು ಡಿ.7 ರಂದು  ಅಪರಾಹ್ನ 2.30ಕ್ಕೆ ಮಡಪ್ಪಾಡಿಯಲ್ಲಿ ಸಭೆ ನಡೆಸಲು ನಿರ್ಧರಿಸಲಾಯಿತು.

ಸಭೆಯಲ್ಲಿ ಮಾತನಾಡಿದ ಶಾಸಕ ಎಸ್.ಅಂಗಾರ ಗ್ರಾಮ ವಾಸ್ತವ್ಯದ ಯಶಸ್ವಿಗೆ ಎಲ್ಲಾ ರೀತಿಯ ಪ್ರಯತ್ನ ನಡೆಸಲಾಗುವುದು ಎಂದು ಹೇಳಿದರು. ಗ್ರಾಮ ವಾಸ್ತವ್ಯದ ಸಂದರ್ಭದಲ್ಲಿ ಜನರು ಮುಂದಿರಿಸುವ ಎಲ್ಲಾ ಸಮಸ್ಯೆಗಳ ಪರಿಹಾರಕ್ಕೆ ಇಲಾಖೆಗಳು ಸನ್ನದ್ಧರಾಗಿರಬೇಕು ಎಂದು ಸೂಚಿಸಿದರು. ಅದಕ್ಕಾಗಿ ಏನು ಬೇಕಾಗಿದೆಯೋ ಅದನ್ನು ಜೋಡಿಸಿಕೊಳ್ಳಬೇಕು ಎಂದು ಅವರು ತಹಶೀಲ್ದಾರ್ ಮತ್ತು ತಾ.ಪಂ.ಕಾರ್ಯನಿರ್ವಹಣಾಧಿಕಾರಿಗಳಿಗೆ ಸೂಚಿಸಿದರು.

 ತಹಶೀಲ್ದಾರ್ ಎನ್.ಎ.ಕುಂಞಿ ಅಹಮ್ಮದ್ ಮಾತನಾಡಿ ಪತ್ರಕರ್ತರ ಸಂಘದ ವತಿಯಿಂದ ಹಮ್ಮಿಕೊಂಡಿರುವ ಈ ವಿನೂತನ ಕಾರ್ಯಕ್ರಮದ ಯಶಸ್ವಿಗೆ ಎಲ್ಲಾ ಸಹಕಾರ ನೀಡಲಾಗುವುದು ಎಂದು ಹೇಳಿದರು.

ಸುಳ್ಯ ತಾಲೂಕು ಪಂಚಾಯಿತಿ ಅಧ್ಯಕ್ಷ ಚನಿಯ ಕಲ್ತಡ್ಕ, ಮಡಪ್ಪಾಡಿ ಗ್ರಾಮ ಪಂಚಾಯಿತಿ ಅಧ್ಯಕ್ಷೆ ಶಕುಂತಳಾ ಕೇವಳ, ಉಪಾಧ್ಯಕ್ಷ ಎನ್.ಟಿ.ಹೊನ್ನಪ್ಪ, ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದ ವ್ಯವಸ್ಥಾಪನಾ ಸಮಿತಿಯ ಮಾಜಿ ಅಧ್ಯಕ್ಷ ನಿತ್ಯಾನಂದ ಮುಂಡೋಡಿ, ತಾಲೂಕು ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಎನ್.ಭವಾನಿಶಂಕರ, ಪೊಲೀಸ್ ವೃತ್ತ ನಿರೀಕ್ಷಕ ನವೀನ್ ಚಂದ್ರ ಜೋಗಿ, ಸುಳ್ಯ ತಾಲೂಕು ಪತ್ರಕರ್ತರ ಸಂಘದ ಅಧ್ಯಕ್ಷ ಮುರಳೀಧರ ಅಡ್ಡನಪಾರೆ ವೇದಿಕೆಯಲ್ಲಿ ಉಪಸ್ಥಿತರಿದ್ದರು. ಪ್ರಮುಖರಾದ ಪಿ.ಸಿ.ಜಯರಾಮ, ಭರತ್ ಮುಂಡೋಡಿ, ದಿನೇಶ್ ಮಡಪ್ಪಾಡಿ, ಎಂ.ಡಿ.ವಿಜಯಕುಮಾರ್, ಜಯರಾಮ ಹಾಡಿಕಲ್ಲು, ಮಿತ್ರದೇವ ಮಡಪ್ಪಾಡಿ, ವಿನಯಕುಮಾರ್ ಮುಳುಗಾಡು, ಕೆ.ಎಲ್.ಪ್ರದೀಪ್ ಕುಮಾರ್, ಸೋಮಶೇಖರ ಕೇವಳ, ಶಶಿಧರ ಕೇವಳ, ಗಂಗಯ್ಯ ಪೂಂಬಾಡಿ ಮತ್ತಿತರರು ಮಾತನಾಡಿ ಸಲಹೆ ಸೂಚನೆಗಳನ್ನು ನೀಡಿದರು. ಜಿಲ್ಲಾ ಪಂಚಾಯಿತಿ ಸದಸ್ಯರಾದ ಹರೀಶ್ ಕಂಜಿಪಿಲಿ, ಎಸ್.ಎನ್.ಮನ್ಮಥ, ಆಶಾ ತಿಮ್ಮಪ್ಪ, ಪುಷ್ಪಾವತಿ ಬಾಳಿಲ, ತಾ.ಪಂ.ಉಪಾಧ್ಯಕ್ಷೆ ಶುಭದಾ ಎಸ್.ರೈ, ನ.ಪಂ.ಸದಸ್ಯರಾದ ಎಂ.ವೆಂಕಪ್ಪ ಗೌಡ, ವಿನಯಕುಮಾರ್ ಕಂದಡ್ಕ, ಕೆ.ಎಸ್.ಉಮ್ಮರ್, ಪ್ರಮುಖರಾದ ಎಂ.ಬಿ.ಸದಾಶಿವ, ಡಾ.ಯು.ಪಿ.ಶಿವಾನಂದ, ಪಿ.ಬಿ.ಸುಧಾಕರ ರೈ, ಅಬ್ದುಲ್ ಕಲಾಂ, ಸುರೇಶ್ ಕಣೆಮರಡ್ಕ, ಶಂಕರ್ ಪೆರಾಜೆ, ತಿಮ್ಮಪ್ಪ ಗೌಡ ಕುಂಡಡ್ಕ, ಡಾ.ಪುರುಷೋತ್ತಮ ಕೆ.ಜಿ, ದೇವರಾಜ್ ಕುದ್ಪಾಜೆ, ಸುಳ್ಯ ಆರಕ್ಷಕ ಉಪನಿರೀಕ್ಷಕ ಎಂ.ಆರ್.ಹರೀಶ್, ವಲಯ ಅರಣ್ಯಾಧಿಕಾರಿ ಎನ್.ಮಂಜುನಾಥ್, ಲೋಕೋಪಯೋಗಿ ಇಲಾಖೆಯ ಸಹಾಯಕ ಕಾರ್ಯಪಾಲಕ ಇಂಜಿನಿಯರ್ ಸಣ್ಣೇ ಗೌಡ, ಮಡಪ್ಪಾಡಿ ಗ್ರಾಪಂ.ಅಭಿವೃದ್ಧಿ ಅಧಿಕಾರಿ ಧನಪತಿ, ಯುವ ಸಬಲೀಕರಣ ಮತ್ತು ಕ್ರೀಡಾಧಿಕಾರಿ ದೇವರಾಜ್ ಮುತ್ಲಾಜೆ, ತಾಲೂಕು ದೈಹಿಕ ಶಿಕ್ಷಣ ಪರಿವೀಕ್ಷಣಾಧಿಕಾರಿ ಲಕ್ಷ್ಮೀಶ ರೈ, ದ.ಕ.ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಪ್ರಧಾನ ಕಾರ್ಯದರ್ಶಿ ಇಬ್ರಾಹಿಂ ಅಡ್ಕಸ್ಥಳ, ಗ್ರಾಮಾಂತರ ಕಾರ್ಯದರ್ಶಿ ಸಿದ್ದಿಕ್ ನೀರಾಜೆ, ಕಾರ್ಯಕಾರಿ ಸಮಿತಿ ಸದಸ್ಯರಾದ ಆರ್.ಸಿ.ಭಟ್, ಪುಷ್ಪರಾಜ್.ಬಿ.ಎನ್, ಭಾಸ್ಕರ ರೈ ಕಟ್ಟ, ತಾಲೂಕು ಪತ್ರಕರ್ತರ ಸಂಘದ ಕಾರ್ಯದರ್ಶಿ ಗಿರೀಶ್ ಅಡ್ಪಂಗಾಯ, ಪತ್ರಕರ್ತರಾದ ಗಂಗಾಧರ ಮಟ್ಟಿ, ಹರೀಶ್ ಬಂಟ್ವಾಳ್, ಶಿವಪ್ರಸಾದ್ ಕೇರ್ಪಳ, ತೇಜೇಶ್ವರ ಕುಂದಲ್ಪಾಡಿ, ಕಿರಣ್ ಪ್ರಸಾದ್ ಕುಂಡಡ್ಕ, ದಯಾನಂದ ಕೊರತ್ತೋಡಿ, ಪದ್ಮನಾಭ ಮುಂಡೋಕಜೆ, ಶರೀಪ್ ಜಟ್ಟಿಪಳ್ಳ, ಹಸೈನಾರ್ ಜಯನಗರ, ದಿನೇಶ್ ಮಠ, ರಮೇಶ್ ನೀರಬಿದಿರೆ, ಕೆ.ಟಿ.ಭಾಗೀಶ್ ಭಾಗವಹಿಸಿದ್ದರು.

See also  ಕಾರು-ಟ್ಯಾಂಕರ್ ಅಪಘಾತ: ಬಾಲಕಿ ಸಾವು

ದ.ಕ.ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಶ್ರೀನಿವಾಸ ನಾಯಕ್ ಇಂದಾಜೆ ಪ್ರಾಸ್ತಾವಿಕವಾಗಿ ಮಾತನಾಡಿದರು. ಜಿಲ್ಲಾ ಕಾರ್ಯಕಾರಿ ಸಮಿತಿ ಸದಸ್ಯ ಗಂಗಾಧರ ಕಲ್ಲಪಳ್ಳಿ ಸ್ವಾಗತಿಸಿ, ಸುಳ್ಯ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ಮಾಜಿ ಅಧ್ಯಕ್ಷ ದುರ್ಗಾಕುಮಾರ್ ನಾಯರ್‍ಕೆರೆ ವಂದಿಸಿದರು. ಜಿಲ್ಲಾ ಕಾರ್ಯಕಾರಿ ಸಮಿತಿ ಸದಸ್ಯ ಲೋಕೇಶ್ ಪೆರ್ಲಂಪಾಡಿ ನಿರೂಪಿಸಿದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published.

180
Subscribe to our Brand New YouTube Channel

Subscribe Newsletter

Get latest news karnataka updates on your email.

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು