News Kannada
Tuesday, November 29 2022

ಕರಾವಳಿ

ಶಾಸಕ ಯು.ಟಿ.ಖಾದರ್ ವಿರುದ್ಧ ದೇಶದ್ರೋಹ ಪ್ರಕರಣ ದಾಖಲು - 1 min read

Photo Credit :

ಶಾಸಕ ಯು.ಟಿ.ಖಾದರ್ ವಿರುದ್ಧ ದೇಶದ್ರೋಹ ಪ್ರಕರಣ ದಾಖಲು

ಮಂಗಳೂರು: ಪೌರತ್ವ ತಿದ್ದುಪಡಿ ಕಾಯ್ದೆ ವಿರೋಧಿಸಿ ಜಿಲ್ಲಾಧಿಕಾರಿ ಕಚೇರಿ ಮುಂದೆ ಪ್ರಚೋದನಕಾರಿ ಭಾಷಣ ಮಾಡಿದ್ದ ಶಾಸಕ ಯು.ಟಿ.ಖಾದರ್ ವಿರುದ್ಧ ದೇಶದ್ರೋಹದ ಪ್ರಕರಣ ದಾಖಲಾಗಿದೆ.

ಬಿಜೆಪಿ ಯುವ ಮೋರ್ಚಾ ದಕ್ಷಿಣ ಕನ್ನಡ ಜಿಲ್ಲಾ ಘಟಕದ ಪ್ರದಾನ ಕಾರ್ಯದರ್ಶಿ ಸಂದೇಶ್ ಕುಮಾರ್ ಶೆಟ್ಟಿ ನಗರ ಪೊಲೀಸ್ ಕಮಿಷನರ್ ಕಚೇರಿಗೆ ಡಿ.19ರಂದು ದೂರು ಸಲ್ಲಿಸಿದ್ದರು. ಅದೇ ದಿನ ಮಂಗಳೂರು ಪಾಂಡೇಶ್ವರ ಪೊಲೀಸ್ ಠಾಣೆಯಲ್ಲಿ ಕೂಡ ಖಾದರ್ ವಿರುದ್ಧ ಎಫ್ ಐಆರ್ ದಾಖಲಾಗಿತ್ತು.

ಪ್ರತಿಭಟನೆಯನ್ನು ಉದ್ದೇಶಿಸಿ ಮಾತನಾಡಿದ್ದ ಖಾದರ್, ಪೌರತ್ವ ತಿದ್ದುಪಡಿ ಕಾಯ್ದೆ ಜಾರಿಯಾದರೆ ರಾಜ್ಯವೇ ಹೊತ್ತಿ ಉರಿಯಲಿದೆ ಎಂದು ಹೇಳಿದ್ದರು.

ಖಾದರ್ ವಿರುದ್ಧ ಐಪಿಸಿ ಸೆಕ್ಷನ್ 153ಎ(ಪ್ರಚೋದನಕಾರಿ ಭಾಷಣದ ಮೂಲಕ ದ್ವೇಷ ಬಿತ್ತುವುದು), ಸೆಕ್ಷನ್ 124ಎ(ದೇಶದ್ರೋಹ) ಮತ್ತು ಸೆಕ್ಷನ್ 153(ಗಲಭೆ ಅಥವಾ ದೊಂಬಿ ಸೃಷ್ಟಿಸುವ ಉದ್ದೇಶದಿಂದ ಪ್ರಚೋದನೆ ನೀಡುವುದು) ಪ್ರಕರಣ ದಾಖಲಾಗಿದೆ.

See also  ಮಕ್ಕಳಿಬ್ಬರಿಗೆ ಮಾರಣಾಂತಿಕ ಕಾಯಿಲೆ: ಉಡುಪಿಯ ತಾಯಿ ಸ್ಥಿತಿ ಕರುಣಾಜನಕ
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published.

187

Subscribe Newsletter

Get latest news karnataka updates on your email.

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು