News Kannada
Friday, December 09 2022

ಕರಾವಳಿ

ಅಂಗಳದಲ್ಲೇ ಕುಸಿದು ಬಿದ್ದು ಮೃತ್ಯು

Photo Credit :

ಅಂಗಳದಲ್ಲೇ ಕುಸಿದು ಬಿದ್ದು ಮೃತ್ಯು

ಬಂಟ್ವಾಳ: ರಾಯಿ ಗ್ರಾಮದ ಪಡ್ರಾಯಿಯಲ್ಲಿ ವ್ಯಕ್ತಿಯೊಬ್ಬರು ಮನೆಯ ಅಂಗಳದಲ್ಲಿ ಬಿದ್ದು ಮೃತಪಟ್ಟ ಘಟನೆ ನಡೆದಿದೆ.

ಪಡ್ರಾಯಿ ನಿವಾಸಿ ತನಿಯ(55) ಮೃತಪಟ್ಟವರು. ಅವರು ಹೃದಯಕ್ಕೆ ಸಂಬಂಧಿಸಿದ ಖಾಯಿಲೆಯಿಂದ ಬಳಲುತ್ತಿದ್ದು, ಎಪ್ರಿಲ್ ಮೊದಲ ವಾರದಲ್ಲಿ ಹೃದಯಾಘಾತವಾಗಿತ್ತು. ಬಳಿಕ ಮಂಗಳೂರು ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದು ಮನೆಗೆ ಮರಳಿದ್ದರು.

ಶುಕ್ರವಾರ ಅವರ ಮನೆಯವರು ಕೆಲಸಕ್ಕೆ ಹೋಗಿದ್ದು, ಮನೆಯಲ್ಲಿ ಒಬ್ಬರೇ ಇದ್ದು ಅಂಗಳದಲ್ಲಿ ಬಿದ್ದಿದ್ದಾರೆ. ಮಧ್ಯಾಹ್ನ ಮನೆಯವರು ಬಂದಾಗ ಬಿದ್ದಿರುವುದು ಬೆಳಕಿಗೆ ಬಂದಿದೆ.

ಬಳಿಕ ಅವರನ್ನು ಬಂಟ್ವಾಳ ಆಸ್ಪತ್ರೆಗೆ ಸಾಗಿಸಲಾಗಿದ್ದು, ಅದಾಗಲೇ ಮೃತಪಟ್ಟಿದ್ದರು. ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

See also  ವಿದೇಶದಲ್ಲಿ ಉದ್ಯೋಗ ಕೊಡಿಸುವುದಾಗಿ ವಂಚನೆ: ಮೂವರು ಆರೋಪಿಗಳ ಸೆರೆ
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published.

153
Mounesh V

Read More Articles

Subscribe Newsletter

Get latest news karnataka updates on your email.

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು