News Kannada
Sunday, December 04 2022

ಕರಾವಳಿ

ಚಾರ್ಮಾಡಿಯಲ್ಲಿ ಒಂಟಿ ಸಲಗ ಪ್ರತ್ಯಕ್ಷ

Photo Credit :

ಚಾರ್ಮಾಡಿಯಲ್ಲಿ ಒಂಟಿ ಸಲಗ ಪ್ರತ್ಯಕ್ಷ

ಬೆಳ್ತಂಗಡಿ: ಮಂಗಳೂರು ಚಾರ್ಮಾಡಿ ರಸ್ತೆಯ ಚಾರ್ಮಾಡಿ ಘಾಟ್ ನ 8ನೇ ತಿರುವಿನ ಸಮೀಪ ಒಂಟಿ ಸಲಗ ಗುರುವಾರ ರಸ್ತೆಗೆಳಿದು ಸವಾರರ ಆತಂಕಕ್ಕೆ ಕಾರಣವಾದ ಘಟನೆ ನಡೆದಿದೆ.

ಸಂಜೆ 5.45 ಕ್ಕೆ ಚಾರ್ಮಾಡಿ ಘಾಟ್ 7-8ನೇ ತಿರುವಿನ ಮಧ್ಯೆ ಒಂಟಿ ಸಲಗ ರಸ್ತೆಯಲ್ಲಿ ತರಕಾರಿ ಸಾಗಾಟದ ವಾಹನ ಸವಾರರಿಗೆ ಎದುರಾಗಿದೆ.

ಈ ಕುರಿತು ಸವಾರರಿಗೆ ತೊಂದರೆಯಾಗುವ ದೃಷ್ಟಿಯಿಂದ ಬೆಳ್ತಂಗಡಿ ಪೊಲೀಸ್ ಠಾಣೆ ಹಾಗೂ ಅರಣ್ಯಾಧಿಕಾರಿಗಳಿಗೆ ಮಾಹಿತಿ ನೀಡಲಾಗಿತ್ತು.

ಸ್ಥಳಕ್ಕೆ ಬೆಳ್ತಂಗಡಿ ವೃತ್ತ ನಿರೀಕ್ಷಕ ಸಂದೇಶ್ ಪಿ.ಜಿ., ಬೆಳ್ತಂಗಡಿ ವಲಯ ಅರಣ್ಯಧಿಕಾರಿ ಸುಬ್ಬಯ್ಯ ನಾಯ್ಕ್ ಸಿಬಂದಿಗಳು ತೆರಳಿ ವಾಹನ ಸವಾರರಿಗೆ ತೆರಳದಂತೆ ಸೂಚನೆ ನೀಡಿ ಅಗತ್ಯ ಕ್ರಮ ಕೈಗೊಂಡರು.

ಕಳೆದ ಏ.8ರಂದು ಇದೇ ಸ್ಥಳದಲ್ಲಿ ಒಂಟಿ ಸಲಗ ತಡರಾತ್ರಿ ಪ್ರತ್ಯಕ್ಷವಾಗಿತ್ತು. ಕಳೆದ ಕೆಲದಿನಗಳಿಂದ ಲಾಕ್ ಡೌನ್ ಪರಿಣಾಮ ಮನುಷ್ಯರ ಓಡಾಟ, ವಾಹನಗಳ ಶಬ್ದಮಾಲಿನ್ಯ ಇಲ್ಲದಿರುವುದರಿಂದ ಪ್ರಾಣಿಗಳು ನಾಡಿಗೆ ಕಾಲಿಡುತ್ತಿವೆ. ಕಳೆದ ಎರಡು ದಿನಗಳಿಂದ ಮಂಗಳೂರಿಗೆ ಅತಿಥಿಯಾಗಿದ್ದ ಕಾಡುಕೋಣದ ಬೆನ್ನಲ್ಲೆ ಚಾರ್ಮಾಡಿಯಲ್ಲಿ ಒಂಟಿ ಸಲಗ ಪ್ರತ್ಯಕ್ಷಗೊಂಡಿದೆ.

See also  ಬೆಳ್ತಂಗಡಿ ಆಶಾ ಕಾರ್ಯಕರ್ತೆಗೆ ಸಚಿವ ಶ್ರೀರಾಮುಲು ಅಭಿನಂದನೆ
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published.

154
Deepak Atavale

Read More Articles

Subscribe Newsletter

Get latest news karnataka updates on your email.

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು