News Kannada
Wednesday, November 30 2022

ಕರಾವಳಿ

ಬಂಟ್ವಾಳದಲ್ಲಿ ಆರೋಗ್ಯ ಹಸ್ತ ಕಾರ್ಯಕ್ರಮಕ್ಕೆ ಚಾಲನೆ - 1 min read

Photo Credit :

ಬಂಟ್ವಾಳದಲ್ಲಿ ಆರೋಗ್ಯ ಹಸ್ತ ಕಾರ್ಯಕ್ರಮಕ್ಕೆ ಚಾಲನೆ

ಬಂಟ್ವಾಳ :  ಬಂಟ್ವಾಳ ವಿಧಾನ ಸಭಾ ಕ್ಷೇತ್ರದ ಬಂಟ್ವಾಳ ಬ್ಲಾಕ್ ಹಾಗೂ ಪಾಣೆಮಂಗಳೂರು ಬ್ಲಾಕ್ ಕಾಂಗ್ರೆಸ್ ವತಿಯಿಂದ ” ಆರೋಗ್ಯ ಹಸ್ತ” ಕಾರ್ಯಕ್ರಮ ಮೆಲ್ಕಾರ್  ಬಿರ್ವ ಆಡಿಟೋರಿಯಂ ನಲ್ಲಿ ನಡೆಯಿತು.

ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಕೆ. ಹರೀಶ್ ಕುಮಾರ್ ಉದ್ಘಾಟಿಸಿ ಮಾನವೀಯತೆ ದೃಷ್ಟಿಯಿಂದ ಜನರ ಸೇವೆ ಮಾಡುವ ಅವಕಾಶವನ್ನು ಸದುಪಯೋಗ ಗೊಳಿಸುವಂತೆ ಮನವಿ ಮಾಡಿದರು.

ಮಾಜಿ ಜಿಲ್ಲಾ ಉಸ್ತುವಾರಿ ಸಚಿವ  ರಮಾನಾಥ ರೈ ಅವರು ತರಬೇತುದಾರರಿಗೆ ಕಾರ್ಯಕ್ರಮದ ಪ್ರಾಮುಖ್ಯತೆಯನ್ನು ತಿಳಿಸಿ ಸಾರ್ವಜನಿಕರ ಆರೋಗ್ಯ ಜತೆ ತಮ್ಮ ಆರೋಗ್ಯವನ್ನು ಕಾಪಾಡಿಕೊಳ್ಳುವಂತೆ ವಿನಂತಿಸಿದರು.

ರಾಜೇಶ್ ಪೂಜಾರಿ  ಕೋವಿಡ್-19 ಸಹಾಯವಾಣಿ ಸದಸ್ಯರು ಮನೆ ಮನೆಗೆ ಭೇಟಿ ನೀಡಿ ಆರೋಗ್ಯ ತಪಾಸಣೆ ಮಾಡುವ ಮೂಲಕ ಸಾರ್ವಜನಿಕರ ಮನಸನ್ನು ಗೆಲ್ಲುವಂತೆ ಕರೆ ನೀಡಿದರು ಹಾಗೂ ಪಿ ಪಿ ಇ ಕಿಟ್  ಬಳಕೆ ಮತ್ತು ಖಾಯಿಲೆ ತಪಾಸಣೆ ಮಾಡುವ ರೀತಿಯನ್ನು ವಿವರಿಸಿದರು.

ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಎಂ. ಎನ್. ಗಫೂರ್,  ಜಿಲ್ಲಾ ತರಬೇತಿಗಾರ ರಘುರಾಜ್ ಕದ್ರಿ, ಬಂಟ್ವಾಳ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಬೇಬಿ ಕುಂದರ್,ಪಾಣೆಮಂಗಳೂರು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸುದೀಪ್ ಕುಮಾರ್ ಶೆಟ್ಟಿ, ಜಿಲ್ಲಾ ಪಂಚಾಯತ್ ಸದಸ್ಯರಾದ ಚಂದ್ರ ಪ್ರಕಾಶ್ ಶೆಟ್ಟಿ,ಪದ್ಮಶೇಕರ್ ಜೈನ್,ತಾಲೂಕ್ ಪಂಚಾಯತ್ ಉಪಾಧ್ಯಕ್ಷ ಅಬ್ಬಾಸ್ ಆಲಿ,  ತಾಲೂಕ್ ಪಂಚಾಯತ್ ಸದಸ್ಯರಾದ ಸಂಜೀವ ಪೂಜಾರಿ,  ಯುವ ಕಾಂಗ್ರೆಸ್ ಅಧ್ಯಕ್ಷ ಪ್ರಶಾಂತ್ ಕುಲಾಲ್,  ಪದ್ಮನಾಭ ರೈ, ಇಬ್ರಾಹಿಂ ನವಾಜ್ ಉಪಸ್ಥಿತರಿದ್ದರು.

See also  ಅನೈತಿಕ ಚಟುವಟಿಕೆಯ ತಾಣವಾಗಿದ್ದ ಪಾಣೆಮಂಗಳೂರು ಸುಣ್ಣದ ಗೂಡು ಕಟ್ಟದ ತೆರವು
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published.

153
Mounesh V

Read More Articles

Subscribe Newsletter

Get latest news karnataka updates on your email.

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು