News Kannada
Thursday, December 08 2022

ಕರಾವಳಿ

ಅಹ್ಮದ್ ಹಾಜಿ ಸಾಮರಸ್ಯದ ಕೊಂಡಿಯಾಗಿದ್ದವರು: ಬಸ್ತಿ ವಾಮನ ಶೆಣೈ

Photo Credit :

ಅಹ್ಮದ್ ಹಾಜಿ ಸಾಮರಸ್ಯದ ಕೊಂಡಿಯಾಗಿದ್ದವರು: ಬಸ್ತಿ ವಾಮನ ಶೆಣೈ

ಬಂಟ್ವಾಳ: ಸರ್ವ ಧರ್ಮಗಳ ಜನರೊಂದಿಗೆ ಸಾಮರಸ್ಯದ ಕೊಂಡಿಯಾಗಿದ್ದ ಬಿ.ಅಹ್ಮದ್ ಹಾಜಿ ಮುಹಿಯುದ್ದೀನ್ ಅವರು ಗ್ರಾಮೀಣ ಪ್ರದೇಶವಾದ ತುಂಬೆ ಗ್ರಾಮದ ಅಭಿವೃದ್ಧಿ ಕುರಿತು ಅತೀವ ಒಲವು ಹೊಂದಿದ್ದರು. ತನ್ನ ಉದ್ಯಮದ ಜೊತೆಗೆ ಬಡವರು, ಸಮಾಜದ ಬಗ್ಗೆ ಚಿಂತಿಸುತ್ತಿದ್ದ ಅವರು ಅದಕ್ಕಾಗಿ ನೆರವು ನೀಡುವ ತುಡಿತ ಹೊಂದಿದ್ದರು ಎಂದು ತುಂಬೆ ಕಾಲೇಜಿನ ಸಂಚಾಲಕ, ವಿಶ್ವ ಕೊಂಕಣಿ ಕೇಂದ್ರದ ಸ್ಥಾಪಕಾಧ್ಯಕ್ಷ ಬಸ್ತಿ ವಾಮನ ಶೆಣೈ ಹೇಳಿದರು.

ಇತ್ತೀಚೆಗೆ ನಿಧನರಾದ ಬಿ.ಎ. ಗ್ರೂಪ್ ತುಂಬೆ ಹಾಗೂ ಮುಹಿಯುದ್ದೀನ್ ಎಜುಕೇಶನ್ ಟ್ರಸ್ಟ್ ತುಂಬೆ ಇದರ ಸ್ಥಾಪಕರಾದ ಬಿ.ಅಹ್ಮದ್ ಹಾಜಿ ಮುಹಿಯುದ್ದೀನ್ ಅವರಿಗೆ ತುಂಬೆ ಕಾಲೇಜಿನಲ್ಲಿ ಶುಕ್ರವಾರ ಏರ್ಪಡಿಸಲಾದ ಶ್ರದ್ಧಾಂಜಲಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

1964ರಿಂದ ಅಹ್ಮದ್ ಹಾಜಿ ಮತ್ತು ನನ್ನ ನಡುವೆ ಸ್ನೇಹ ಸಂಬಂಧವಿದೆ. ತುಂಬೆಯ ಅಭಿವೃದ್ಧಿಯ ಕನಸು ಕಾಣುತ್ತಿದ್ದ ಅಹ್ಮದ್ ಹಾಜಿ ಗ್ರಾಮೀಣ ಮಕ್ಕಳಿಗೆ ಉತ್ತಮ ದರ್ಜೆಯ ಶಿಕ್ಷಣ ಸಿಗುವಂತಾಗಲು ತುಂಬೆಯಲ್ಲಿ ತೆರೆದ ಶಾಲಾ, ಕಾಲೇಜು ಶೈಕ್ಷಣಿಕವಾಗಿ ತುಂಬೆಯ ಚಿತ್ರಣವನ್ನೇ ಬದಲಾಯಿಸಿದೆ. ದೇವರ ಮೇಲೆ ಅಪಾರವಾದ ಭಕ್ತಿಯನ್ನು ಹೊಂದಿದ್ದ ಅಹ್ಮದ್ ಹಾಜಿ ಅವರು ಆದರ್ಶದ ಜೀವನವನ್ನು ನಡೆಸಿದ್ದಾರೆ. ಇತರ ಧರ್ಮಗಳು, ಧರ್ಮ ಗ್ರಂಥಗಳ ಅಧ್ಯಯನ  ಕೂಡಾ ಮಾಡುತ್ತಿದ್ದರು. ಅವರಂತಹ ಸ್ನೇಹಿತ ಸಿಕ್ಕಿರುವುದು ತನ್ನ ಪುಣ್ಯವಾಗಿದೆ‌ ಎಂದು ಹೇಳಿದರು.

ಮಾಜಿ ಸಚಿವ ಬಿ.ರಮಾನಾಥ ರೈ ಮಾತನಾಡಿ, ಬಿ.ಅಹ್ಮದ್ ಹಾಜಿ ಮುಹಿಯುದ್ದೀನ್ ಅವರು ಓರ್ವ ಉದ್ಯಮಿಯಾಗಿ ಗುರುತಿಸುವುದಕ್ಕಿಂತ ಹೆಚ್ಚಾಗಿ ಓರ್ವ ನಿಸ್ವಾರ್ಥ ಸಮಾಜ ಸೇವಕರಾಗಿ ಗುರುತಿಸಿದ್ದಾರೆ. ಸಮುದಾಯ, ಸಮಾಜದ ಬಗ್ಗೆ ನಿರಂತರ ಕಳಕಳಿ ಹೊಂದಿದ್ದ ಅವರು ಸಾಮಾಜಿಕ ನ್ಯಾಯವನ್ನು ಜೀವನುದ್ದಕ್ಕೂ ಅಳವಡಿಸಿದ್ದ ನಾಯಕರಾಗಿದ್ದರು ಎಂದು ಹೇಳಿದರು.

ಸರ್ವ ಧರ್ಮಗಳ ಪ್ರೀತಿ, ವಿಶ್ವಾಸವನ್ನು ಗಳಿಸಿದ್ದ ಅವರು ಮತೀಯತೆಯನ್ನು ದೂರವಿಟ್ಟು, ಸಾಮರಸ್ಯದ ಗುಣ ನಡೆತೆಯೊಂದಿಗೆ ಬದುಕಿದವರು. ಜಾತಿ, ಧರ್ಮ, ಭಾಷೆಯ ಹೆಸರಿನಲ್ಲಿ ಮನುಷ್ಯ ಮನುಷ್ಯ ನಡುವೆ ಸಂಶಯ ಮೂಡುತ್ತಿರುವ ಇಂದಿನ ಕಾಲದಲ್ಲಿ ಎಲ್ಲಾ ಧರ್ಮದ ಜನರು ನನ್ನವರು ಮತ್ತು ನಮ್ಮವರು ಎನ್ನುವ ಸಿದ್ಧಾಂತದಲ್ಲಿ ಬಾಳಿದವರು ಎಂದರು.‌

 

ಹಿಂದೂವಾಗಿ ಹುಟ್ಟಿದರೆ ಬಸ್ತಿ ವಾಮನ ಶೆಣೈ ಅವರ ಹಾಗೆ ಹುಟ್ಟಬೇಕು. ಮುಸ್ಲಿಮರಾಗಿ ಹುಟ್ಟಿದರೆ ಅಹ್ಮದ್ ಹಾಜಿ ಹಾಗೆ ಹುಟ್ಟಬೇಕು ಎಂದು ನಾನು ಈ ಹಿಂದಿನಿಂದಲೂ ಹೇಳುತ್ತಾ ಬಂದಿದ್ದೇನೆ. ಈ ಇಬ್ಬರನ್ನು ಪಡೆದ ತುಂಬೆಯ ಜನತೆ ಪುಣ್ಯವಂತರು. ಅಹ್ಮದ್ ಹಾಜಿ ಅವರ ಅಗಲಿಕೆ ವೈಯಕ್ತಿಕವಾಗಿ ನನಗೆ ತುಂಬಾ ನೋವು ತಂದಿದೆ. ಇಂದು ಅವರು ನಮ್ಮೊಂದಿಗೆ ಇಲ್ಲದಿರಬಹುದು. ಆದರೆ ಅವರ ಆದರ್ಶ ನಮ್ಮ ನಡುವೆ ಇದೆ. ಯುವ ಜನತೆ ಆ ಆದರ್ಶದಲ್ಲಿ ಬದುಕಬೇಕು ಎಂದು ಅವರು ಸಲಹೆ ನೀಡಿದರು.

ಯೆನೆಪೊಯ ಯುನಿವರ್ಸಿಟಿಯ ಚಾನ್ಸಿಲರ್ ಅಬ್ದುಲ್ಲಾ ಕುಂಞಿ ಮಾತನಾಡಿ, ನಮ್ಮ ಬಾವ ಬಿ.ಅಹ್ಮದ್ ಹಾಜಿ ನಿಧನ ನಮ್ಮ ಕುಟುಂಬ ಹಾಗೂ ಸಮಾಜಕ್ಕೆ ತುಂಬಲಾರದ ನಷ್ಟ ಉಂಟು ಮಾಡಿದೆ. ಕುಟುಂಬದ ಹಿರಿಯರೂ, ಮಾರ್ಗದರ್ಶಕರೂ ಅಗಿದ್ದ ಅವರು ಮನುಷ್ಯತ್ವಕ್ಕೆ ಬೆಲೆ ಕಟ್ಟುತ್ತಿದ್ದ ಮಹಾನ್ ಮಾನವತಾವಾದಿ ಆಗಿದ್ದರು ಎಂದು ಹೇಳಿದರು.

See also  ವರ್ಕಾಡಿ ಗ್ರಾಮ ಪಂಚಾಯತಿನ ವಿವಿಧ ಸ್ಥಳಗಳಲ್ಲಿ ಶುಚೀಕರಣ

ಶಾಸಕ ಯು.ಟಿ.ಖಾದರ್, ಅಹ್ಮದ್ ಹಾಜಿ ಅವರ ಪುತ್ರ ಸಲಾಂ, ವಿಧಾನ ಪರಿಷತ್ ಮಾಜಿ ಸದಸ್ಯ ಕ್ಯಾ. ಗಣೇಶ್ ಕಾರ್ಣಿಕ್, ಎಸ್.ಡಿ.ಪಿ.ಐ. ಕರ್ನಾಟಕ ಅಧ್ಯಕ್ಷ ಇಲ್ಯಾಸ್ ಮುಹಮ್ಮದ್ ತುಂಬೆ, ಜಿಲ್ಲಾ ಪಂಚಾಯತ್ ಸದಸ್ಯ ಚಂದ್ರಪ್ರಕಾಶ್ ಶೆಟ್ಟಿ, ಮಾತನಾಡಿದರು. ವೇದಿಕೆಯಲ್ಲಿ ಅಹ್ಮದ್ ಹಾಜಿ ಅವರ ಪುತ್ರ, ಗಲ್ಫ್ ಯುನಿವರ್ಸಿಟಿ ಸಂಸ್ಥಾಪಕ ತುಂಬೆ ಮೊಯ್ದಿನ್ , ಅಶ್ರಫ್ ಉಪಸ್ಥಿತರಿದ್ದರು.

ತುಂಬೆ ಕಾಲೇಜಿನ ಪ್ರಾಂಶುಪಾಲ ಕೆ.ಎನ್.ಗಂಗಾಧರ ಆಳ್ವ ಸ್ವಾಗತಿಸಿ ಪ್ರಾಸ್ತಾವಿಕವಾಗಿ ಮಾತನಾಡಿದರು. ತುಂಬೆ ಶಾಲಾ ವಿದ್ಯಾರ್ಥಿ ಅಫ್ನಾನ್ ಕಿರಾಅತ್ ಪಠಿಸಿದರು. ತುಂಬೆ ಕಾಲೇಜಿನ ಉಪನ್ಯಾಸಕ ದಿನೇಶ್ ಶೆಟ್ಟಿ ಧನ್ಯವಾದ ಗೈದರು. ತುಂಬೆ ಕಾಲೇಜಿನ ವ್ಯವಸ್ಥಾಪಕರಾದ ಕಬೀರ್ ಅವರು ಕಾರ್ಯಕ್ರಮ ನಿರೂಪಿಸಿದರು. ಕಾರ್ಯಕ್ರಮದ ಕೊನೆಯಲ್ಲಿ ಮೌನ ಪ್ರಾಥನೆ ಸಲ್ಲಿಸಲಾಯಿತು‌.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published.

153
Mounesh V

Read More Articles

Subscribe Newsletter

Get latest news karnataka updates on your email.

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು